ETV Bharat / state

ಸಿಎಂ ಆಪ್ತ ಕಾರ್ಯದರ್ಶಿ ಹೆಸರಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿ: ಪ್ರಕರಣ ದಾಖಲು

author img

By ETV Bharat Karnataka Team

Published : Dec 11, 2023, 8:35 PM IST

ಸಿಎಂ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್​ ಸೃಷ್ಠಿಸಿ ದುರುಪಯೋಗಪಡಿಸಿಕೊಂಡಿರುವ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎಫ್​ಐಆರ್
ಎಫ್​ಐಆರ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ನಕಲಿ ಲೆಟರ್ ಹೆಡ್ ಸೃಷ್ಟಿಸಿ ದುರುಪಯೋಗ ಪಡಿಸಿಕೊಂಡಿರುವ ಆರೋಪದಡಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಎಂ ಆಪ್ತ ಕಾರ್ಯದರ್ಶಿ ಡಾ ವೆಂಕಟೇಶಯ್ಯ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಅಪರಿಚಿತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಕಾರ್ಯಾಲಯದಿಂದ ಲೋಕೋಪಯೋಗಿ ಇಲಾಖೆ ಸಚಿವರಿಗೆ ಹೊರಡಿಸಲಾಗಿದ್ದ ಕಡತದಲ್ಲಿ ಮುಖ್ಯಮಂತ್ರಿ ಆದೇಶದ ಮೇರೆಗೆ ಅಂಕಿತ್ ಎಂಬುವರಿಗೆ ತಾತ್ಕಾಲಿಕ ಹುದ್ದೆ ನೀಡುವಂತೆ ಉಲ್ಲೇಖಿಸಲಾಗಿತ್ತು. ರಾಜೇಂದ್ರ ಎಂಬ ಹೆಸರಿನಲ್ಲಿ ಸಹಿ ಇರುವ ನಕಲಿ ಲೆಟರ್ ಹೆಡ್​ನಿಂದ ನೀಡಲಾಗಿತ್ತು. ಈ ಬಗ್ಗೆ ಪರಿಶೀಲಿಸಿದಾಗ ಸಿಎಂ ಕಾರ್ಯಾಲಯದಲ್ಲಿ ರಾಜೇಂದ್ರ ಎಂಬ ಹೆಸರಿನ ವ್ಯಕ್ತಿಯೇ ಇಲ್ಲವಾಗಿರುವುದು ಗೊತ್ತಾಗಿದೆ.

ಸುಳ್ಳು ಪತ್ರ ಸೃಷ್ಠಿಸಿ ಮುಖ್ಯಮಂತ್ರಿ ಕಾರ್ಯಾಲಯದ ಕಾರ್ಯದರ್ಶಿ ಹೆಸರನ್ನ ದುರ್ಬಳಕೆ ಮಾಡಿಕೊಂಡಿದ್ದರಿಂದ ವೆಂಕಟೇಶಯ್ಯ ಎಂಬುವರು ದೂರು ನೀಡಿದ ಮೇರೆಗೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಎಂ. ಬಿ. ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ: ಪೊಲೀಸರಿಗೆ ತಲಾ 10 ಸಾವಿರ ದಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.