ETV Bharat / state

ಕೆ.ಸಿ.ಕಾರಿಯಪ್ಪ ಪ್ರಕರಣದ ತನಿಖೆ ನಡೆಸಲಾಗುವುದು: ಬೆಂಗಳೂರು ಪೊಲೀಸ್ ಆಯುಕ್ತ - ETV Bharath Kannada news

ಆರ್.ಟಿ.ನಗರ ಹಾಗೂ ಬಗಲಗುಂಟೆ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಅವರು ನೀಡಿರುವ ಸಾಕ್ಷ್ಯಗಳ ಕುರಿತು ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.

police commissioner b dayananda
ಬಿ.ದಯಾನಂದ್
author img

By ETV Bharat Karnataka Team

Published : Dec 26, 2023, 6:32 PM IST

Updated : Dec 26, 2023, 7:24 PM IST

ಕೆ.ಸಿ. ಕಾರಿಯಪ್ಪ ಪ್ರಕರಣದ ಕುರಿತು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿಕೆ

ಬೆಂಗಳೂರು: ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ ಹಾಗು ಮಾಜಿ ಪ್ರೇಯಸಿ ನಡುವಿನ ಆರೋಪ, ಪ್ರತ್ಯಾರೋಪದ ನಡುವೆ ಮಾದಕ ಪದಾರ್ಥ ಸೇವನೆಯ ವಿಚಾರವೂ ಪ್ರಸ್ತಾಪವಾಗಿರುವುದನ್ನು ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಪರಸ್ಪರ ಒಬ್ಬರ ಮೇಲೊಬ್ಬರು ಮಾದಕ ಪದಾರ್ಥ ಸೇವನೆಯ ಆರೋಪ ಹೊರಿಸಿರುವುದು ಹಾಗೂ ಮಾಜಿ ಪ್ರೇಯಸಿ ಮಾದಕ ಸೇವಿಸುತ್ತಿರುವ ವಿಡಿಯೋವನ್ನು ಕೆ.ಸಿ.ಕಾರಿಯಪ್ಪ ಬಹಿರಂಗಗೊಳಿಸಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ''ಇಬ್ಬರೂ ಪ್ರತ್ಯೇಕವಾಗಿ ಆರ್.ಟಿ.ನಗರ ಹಾಗೂ ಬಗಲುಗುಂಟೆ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಕೆಗೆ ಈಗಾಗಲೇ ವಿಚಾರಣೆಗೆ ಹಾಜರಾಗಿ ಸೂಕ್ತ ಸಾಕ್ಷ್ಯಾಧಾರ ಸಲ್ಲಿಸುವಂತೆ ಆರ್.ಟಿ.ನಗರ ಪೊಲೀಸರು ನೋಟೀಸ್ ನೀಡಿದ್ದಾರೆ. ಇವರಿಬ್ಬರ ಆರೋಪದ ನಡುವೆ ಕೆಲವು ವಿಡಿಯೋಗಳು ಬಹಿರಂಗವಾಗಿದ್ದು, ತನಿಖೆಯ ಭಾಗವಾಗಿ ಅವುಗಳ ಸತ್ಯಾಸತ್ಯತೆ ಮತ್ತು ಆ ವಿಡಿಯೋಗಳು ಬಹಿರಂಗವಾದ ಸಂದರ್ಭದ ಕುರಿತು ತನಿಖೆ ನಡೆಸಲಾಗುವುದು'' ಎಂದರು.

ಇನ್ನೂ 2019ರಲ್ಲಿ ಡ್ರಗ್ ಕೇಸ್​​ನಲ್ಲಿ ರಣಜಿ ಆಟಗಾರ ಗೌತಮ್ ಬಂಧನದ ವೇಳೆ ಕೆಸಿ ಕಾರಿಯಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಸದ್ಯ ಮತ್ತೆ ಕಾರಿಯಪ್ಪ ಮೇಲೆ ಡ್ರಗ್ ಆರೋಪ ಕೇಳಿ ಬಂದಿರೋ ಹಿನ್ನೆಲೆ ಮತ್ತೊಮ್ಮೆ ಕಾರಿಯಪ್ಪರನ್ನು ಸಿಸಿಬಿ ವಿಚಾರಣೆ ನಡೆಸೋ ಸಾಧ್ಯತೆಯಿದೆ.

ಇದನ್ನೂ ಓದಿ: ಮಾಜಿ ಪ್ರೇಯಸಿಯಿಂದ ಮಾದಕ ವ್ಯಸನದ ಆರೋಪ: ವೈದ್ಯಕೀಯ ಪರೀಕ್ಷೆಗೆ ಸಿದ್ಧ ಎಂದ ಕ್ರಿಕೆಟಿಗ ಕೆ.ಸಿ.ಕಾರಿಯಪ್ಪ

ಪ್ರಕರಣವೇನು?: ನಿನ್ನೆ (ಡಿ. 25 ಸೋಮವಾರ) ಕೆ.ಸಿ.ಕಾರಿಯಪ್ಪ ಬಗಲಗುಂಟೆ ಪೊಲೀಸ್​ ಠಾಣೆಗೆ ನೀಡಿದ ದೂರಿನಲ್ಲಿ, "ಈ ಹಿಂದೆ ನಾನು ಅವರೊಂದಿಗೆ ಸಂಬಂಧದಲ್ಲಿದ್ದು, ನಂತರ ಇಬ್ಬರೂ ದೂರವಾಗಿದ್ದೆವು. ಇದೀಗ 'ನಿನ್ನ ಕ್ರಿಕೆಟ್ ಜೀವನ ಅಂತ್ಯಗೊಳಿಸುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ನಿನ್ನ ವಿರುದ್ಧ ಬರೆಯುತ್ತೇನೆ. ನಿನ್ನ ಹೆಸರು ಬರೆದಿಟ್ಟು ಸಾಯುತ್ತೇನೆ' ಎಂದು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಇವೆಲ್ಲವನ್ನೂ ಸಹಿಸಿಕೊಂಡು ಬರುತ್ತಿದ್ದರೂ ಡಿಸೆಂಬರ್ 22ರಂದು ಬಗಲಗುಂಟೆಯ ರಾಮಯ್ಯ ಲೇಔಟ್‌ನಲ್ಲಿರುವ ತಮ್ಮ ಮನೆಗೆ ಅತಿಕ್ರಮವಾಗಿ ಪ್ರವೇಶಿಸಿ, ಪೋಷಕರನ್ನು ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ" ಎಂದು ಉಲ್ಲೇಖಿಸಿದ್ದಾರೆ.

ಇದಕ್ಕೆ ಪ್ರತಿಯಾಗಿ, "ನಾನು‌ ಮತ್ತು ಕಾರಿಯಪ್ಪ ಇನ್ಸ್ಟಾಗ್ರಾಂ ಮೂಲಕ ಪರಿಚಯವಾದೆವು. ಇಬ್ಬರೂ ಒಂದೇ ಸಮುದಾಯದವರು. ಸಂಬಂಧದಲ್ಲಿದ್ದಾಗ ಇಬ್ಬರ ನಡುವೆ ಪರಸ್ಪರ ಸಮ್ಮತಿಯ ಮೇರೆಗೆ ದೈಹಿಕ ಸಂಪರ್ಕ ಬೆಳೆದು ನಾನು ಗರ್ಭ ಧರಿಸಿದ್ದೆ. ಅವರು ಬಲವಂತವಾಗಿ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದರು. ಅಲ್ಲದೇ ನನ್ನಿಂದ ಹಂತಹಂತವಾಗಿ 2 ಲಕ್ಷ ರೂ. ಹಣ ಪಡೆದುಕೊಂಡರು. ನಂತರದಲ್ಲಿ ಅವರ ಪೋಷಕರು, "ನೀನು ವಿಚ್ಛೇದಿತೆ. ನಮ್ಮ ಮಗನನ್ನು ಮದುವೆಯಾಗಬೇಡ" ಎಂದು ಅವಾಚ್ಯವಾಗಿ ನಿಂದಿಸಿದರು. ಡಿಸೆಂಬರ್ 18ರಂದು ದಿಣ್ಣೂರು ಮುಖ್ಯರಸ್ತೆಯಲ್ಲಿರುವ ನಮ್ಮ ಮನೆಗೆ ಬಂದಿದ್ದ ಕಾರಿಯಪ್ಪ, "ನೀನು ಈಗಾಗಲೇ ಡಿವೋರ್ಸ್ ಆದವಳು. ನಿನ್ನನ್ನು ಕಂಡರೆ ನನಗಿಷ್ಟವಿಲ್ಲ. ನಿನ್ನಿಂದ ನಾನು ಯಾವುದೇ ಹಣ ಪಡೆದಿಲ್ಲ" ಎಂದು ನನ್ನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ" ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮಾಜಿ ಪ್ರೇಯಸಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಕ್ರಿಕೆಟಿಗ ಕೆ ಸಿ ಕಾರಿಯಪ್ಪ; ದೂರಿಗೆ ಪ್ರತಿ ದೂರು ನೀಡಿದ ಮಾಜಿ ಪ್ರೇಯಸಿ

Last Updated : Dec 26, 2023, 7:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.