ETV Bharat / state

Fraud case: ಬಿಎಂಟಿಸಿ ಸಂಸ್ಥೆಯಲ್ಲಿ ಗೋಲ್​ಮಾಲ್​: ನಕಲಿ ಸಹಿ ಬಳಸಿ ₹76 ಲಕ್ಷ ವಂಚನೆ

Fraud in the name of BMTC: ಬಿಎಂಟಿಸಿ ಸಂಸ್ಥೆಯಲ್ಲಿ ನಕಲಿ ಸಹಿ ಬಳಸಿ 76 ಲಕ್ಷ ರೂ ವಂಚನೆ ನಡೆದಿದೆ ಎಂದು ಬಿಎಂಟಿಸಿ ಸಹಾಯಕ ಭದ್ರತಾ ಜಾಗೃತಾಧಿಕಾರಿ ದೂರು ನೀಡಿದ್ದಾರೆ.

BMTC fraud case registered
BMTC fraud case registered
author img

By

Published : Jul 31, 2023, 2:17 PM IST

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಭಾರಿ ಗೋಲ್‌ಮಾಲ್ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರ ಸಹಿ ನಕಲಿಸಿ 76.57 ಲಕ್ಷ ರೂ ವಂಚನೆ ಮಾಡಲಾಗಿದೆ. ಗುತ್ತಿಗೆದಾರರೊಂದಿಗೆ ಅಧಿಕಾರಿಗಳೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಎಂಟಿಸಿ ಸಹಾಯಕ ಭದ್ರತಾ ಜಾಗೃತಾಧಿಕಾರಿ ಸಿ.ಕೆ.ರಮ್ಯಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಬಿಎಂಟಿಸಿ ವಾಣಿಜ್ಯ ವಿಭಾಗದ ಮುಖ್ಯ ಸಂಚಾರಕ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮೂರು ವರ್ಷಗಳಿಂದ ನಿಗಮದ ಕೆಲ ಬಸ್ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಸ್ವಚ್ಛತಾ ನಿರ್ವಹಣೆ ಗುತ್ತಿಗೆ ಸೇರಿದಂತೆ ನಾಲ್ಕು ಟೆಂಡರ್​​ಗಳಲ್ಲಿ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಸೇರಿ ಅವ್ಯವಹಾರ ನಡೆಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಅಧಿಕಾರಿಗಳ ಸಹಿ ನಕಲು ಮಾಡಿ ಬಿಎಂಟಿಸಿ ನಿಗಮಕ್ಕೆ ಲಕ್ಷಾಂತರ ರೂಪಾಯಿ ವಂಚಿಸಿರುವುದು ಆಂತರಿಕ ತನಿಖೆಯಲ್ಲಿ ಪತ್ತೆಯಾಗಿದೆ.

ಬಿಎಂಟಿಸಿ ಬಸ್‌ ನಿಲ್ದಾಣಗಳ ಆವರಣದಲ್ಲಿ ಜಾಹೀರಾತಿಗೆ ಪರವಾನಗಿ, ಬ್ಯಾಂಕ್‌ ಎಟಿಎಂ ಘಟಕಗಳಿಗೆ ಪರವಾನಗಿ ಅವುಗಳ ಅವಧಿ ವಿಸ್ತರಣೆ, ಬಿಎಂಟಿಸಿಯ ಫ್ಲ್ಯಾಟ್‌ಗಳ ಹಂಚಿಕೆಗೆ ಸಂಬಂಧಪಟ್ಟ ಕಡತಗಳಿಗೆ ಸಂಸ್ಥೆಯ ಹಾಲಿ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ, ಹಿಂದಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಭದ್ರತೆ ಮತ್ತು ಜಾಗೃತ ದಳದ ನಿರ್ದೇಶಕರ ಹೆಸರಿನಲ್ಲಿ ನಕಲಿ ಸಹಿ ಮಾಡಿ ವಂಚಿಸಲಾಗಿದೆ. ಇದರಿಂದ ಸಂಸ್ಥೆಗೆ ಸಾಕಷ್ಟು ವಂಚನೆಯಾಗಿದೆ. ಸಂಸ್ಥೆಯ ಕೆಲವು ಅಧಿಕಾರಿಗಳ ಅಕ್ರಮ ಇಲಾಖಾ ತನಿಖೆಯಲ್ಲಿ ದೃಢಪಟ್ಟಿದೆ ಎಂದು ರಮ್ಯಾರವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್, ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ರೇಜು, ಸಿ.ಶಿಖಾ, ಭದ್ರತಾ ಮತ್ತು ಜಾಗೃತಿ ವಿಭಾಗದ ನಿರ್ದೇಶಕ ಕೆ.ಅರುಣ ಅವರ ಸಹಿ ನಕಲು ಮಾಡಲಾಗಿದೆ. ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಾರ ಅಧಿಕಾರಿ ಶ್ಯಾಮಲಾ.ಎಸ್ ಮುದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತ, ಸಹಾಯಕ ಸಂಚಾರ ಅಧೀಕ್ಷಕಿ ಟಿ.ಅನಿತಾ, ಸಂಚಾರ ನೀರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.

ಸಿ.ಪಿ.ಯೋಗೇಶ್ವರ್​ ವಿರುದ್ಧದ ವಂಚನೆ ಪ್ರಕರಣ ವಜಾ: 2009ರಲ್ಲಿ ಮೆಗಾಸಿಟಿ ಬಿಲ್ಡರ್ಸ್​ ಆ್ಯಂಡ್​ ಡೆವಲಪರ್ಸ್​ ಲಿಮಿಟೆಡ್​ ಹೆಸರಿನಲ್ಲಿ ವಿಧಾನಪರಿಷತ್​ ಸದಸ್ಯ ಸಿ.ಪಿ.ಯೋಗೇಶ್ವರ್​ ಬೃಹತ್​ ಟೌನ್‌ಶಿಪ್​ಗಳನ್ನು ನಿರ್ಮಿಸಿದ್ದರು. ಅವುಗಳಲ್ಲಿ ನಿವೇಶನ ನೀಡುವುದಾಗಿ ಸಾರ್ವಜನಿಕರಿಂದ ಸಾವಿರ ಕೋಟಿ ರೂ.ಗಳನ್ನು ಸಂಗ್ರಹ ಮಾಡಿದ್ದಾರೆ. ಬಳಿಕ ಅವರಿಗೆ ನಿವೇಶನವನ್ನೂ ನೀಡಿಲ್ಲ, ಸಾರ್ವಜನಿಕ ಹಣವನ್ನೂ ಸಹ ವಾಪಸ್​ ನೀಡಿಲ್ಲ ಎಂಬ ಆರೋಪಗಳ ಬಗ್ಗೆ ತನಿಖೆ ನಡೆಸಿದ್ದ ಅಪರಾಧಗಳ ತನಿಖಾ ಇಲಾಖೆ ಯೋಗೇಶ್ವರ್​ ಮತ್ತು ಅವರ ಕುಟುಂಬದವರ ವಿರುದ್ಧ 2012ರಲ್ಲಿ ವಂಚನೆ, ಕ್ರಿಮಿನಲ್​ ಪಿತೂರಿ ಸೇರಿ ಆರು ಕ್ರಿಮಿನಲ್​ ಪ್ರಕರಣಗಳನ್ನು ದಾಖಲಿಸಿತ್ತು.

ತನಿಖೆಯಲ್ಲಿ 60 ಕೋಟಿ ರೂ ದುರ್ಬಳಕೆ ಆಗಿದೆ ಎಂದು ಹೇಳಲಾಗಿತ್ತು. ಹೀಗಾಗಿ ಈ ಆರೋಪಗಳ ಸಂಬಂಧ ದಾಖಲಾಗಿರುವ ಪ್ರಕರಣಗಳನ್ನು ರದ್ದು ಮಾಡುವಂತೆ ಸಿಪಿ ಯೋಗೇಶ್ವರ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಹೈ ಕೋರ್ಟ್​ ರದ್ದು ಅರ್ಜಿಗಳನ್ನು ವಜಾಗೊಳಿಸಿದೆ. ಇದರಿಂದ ಯೋಗೇಶ್ವರ್​ ಕುಟುಂಬ ಪ್ರಕರಣ ವಿಚಾರಣೆ ಎದುರಿಸಬೇಕಾಗಿದೆ.

ಇದನ್ನೂ ಓದಿ:Bengaluru crime: ನೋಟು ಬದಲಾವಣೆ ಹೆಸರಿನಲ್ಲಿ ತಿರುಪತಿಗೆ ಕರೆಸಿಕೊಂಡು ನಾಮ ಹಾಕಿದ ವಂಚಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.