ETV Bharat / state

ಹರಾಜಿನಲ್ಲಿ ಕಡಿಮೆ ಬೆಲೆಗೆ ವಾಹನಗಳನ್ನು ಕೊಡಿಸುವುದಾಗಿ ಹೇಳಿ ವಂಚಿಸುತ್ತಿದ್ದ ನಕಲಿ ಪೊಲೀಸ್ ಬಂಧನ - ಪೊಲೀಸ್ ಸಮವಸ್ತ್ರ

ಪೊಲೀಸ್​ ಸೋಗಿನಲ್ಲಿ ಸಾರ್ವಜನಿಕರನ್ನು ಪರಿಚಯಿಸಿಕೊಂಡು ವಂಚಿಸುತ್ತಿದ್ದ ಆರೋಪಿಯನ್ನ ಬೇಗೂರು ಪೊಲೀಸರು ಬಂಧಿಸಿದ್ದಾರೆ.

Etv Bharatfake-policeman-arrested-for-cheating-public-in-bengaluru
ಹರಾಜಿನಲ್ಲಿ ಕಡಿಮೆ ಬೆಲೆಗೆ ವಾಹನಗಳನ್ನ ಕೊಡಿಸುವುದಾಗಿ ವಂಚಿಸುತ್ತಿದ್ದ ನಕಲಿ ಪೊಲೀಸ್ ಬಂಧನ
author img

By ETV Bharat Karnataka Team

Published : Dec 9, 2023, 7:11 PM IST

ಬೆಂಗಳೂರು: ಪೊಲೀಸ್​ ಸೋಗಿನಲ್ಲಿ ಸಾರ್ವಜನಿಕರನ್ನ ಪರಿಚಯಿಸಿಕೊಂಡು, ನಗರದ ವಿವಿಧೆಡೆ ಪೊಲೀಸರು ಸೀಜ್ ಮಾಡಿರುವ ವಾಹನಗಳನ್ನ ಕಡಿಮೆ ಬೆಲೆಗೆ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನ ಬೇಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೆ. ಲೂರ್ದನಾಥನ್ (53) ಬಂಧಿತ ಆರೋಪಿ.

ಈ ಹಿಂದೆ ಗೃಹರಕ್ಷಕದಳದಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಸದ್ಯ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ಆದರೆ ಪೊಲೀಸ್ ಸಮವಸ್ತ್ರ ಧರಿಸಿ ತಾನೊಬ್ಬ ಪೊಲೀಸ್ ಎಂದು ಹೇಳಿಕೊಂಡು ಸಾರ್ವಜನಿಕರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ನಗರದ ಬೇರೆ ಬೇರೆ ಠಾಣಾ ವ್ಯಾಪ್ತಿಗಳಲ್ಲಿ ಪೊಲೀಸರು ಜಪ್ತಿ ಮಾಡಿರುವ ವಾಹನಗಳನ್ನು ಹರಾಜಿನಲ್ಲಿ ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸುತ್ತಿದ್ದ. ಇದಕ್ಕೆ ಪ್ರತಿಯಾಗಿ ಅವರಿಂದ ಹಣ ಪಡೆದು, ನಂತರ ವಂಚಿಸುತ್ತಿದ್ದ.

ಬೇಗೂರು ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ವ್ಯಕ್ತಿಯೊಬ್ಬರಿಗೆ ವಂಚಿಸಿದ್ದ ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿಯಿಂದ 50 ಸಾವಿರ ರೂ. ನಗದು ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ಇದೇ ರೀತಿ ಚಿಕ್ಕಜಾಲ, ಬೆಳ್ಳಂದೂರು ಹಾಗೂ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿಯೂ ವಂಚಿಸಿರುವುದು ಪೊಲೀಸರ ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ: ಹಣದ ಆಸೆಗಾಗಿ ಲೈಕ್​, ಶೇರ್​ ಮಾಡ್ತೀರಾ, ಹಾಗಿದ್ರೆ ಹುಷಾರ್​!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.