ETV Bharat / state

ರಾಯಚೂರು: ಕೌಟುಂಬಿಕ ಕಲಹ.. ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಘಟನೆ ಜರುಗಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ
ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ
author img

By

Published : Aug 10, 2023, 6:08 PM IST

Updated : Aug 10, 2023, 7:55 PM IST

ರಾಯಚೂರು : ಕೌಟುಂಬಿಕ ಕಲಹದಿಂದ ಮನನೊಂದು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ಮ್ಯಾಗಳಪೇಟೆಯಲ್ಲಿ ನಡೆದಿದೆ. ಮೃತರನ್ನು ಚೌಡಮ್ಮ(26), 4 ಹಾಗೂ 2 ವರ್ಷದ ಕಂದಮ್ಮಗಳು ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತಿ ಹುಲಿಗೆಪ್ಪ ಹಾಗೂ ಪತ್ನಿ ಚೌಡಮ್ಮ ಇಬ್ಬರ ಮಧ್ಯೆ ಮನೆಯಲ್ಲಿ ಜಗಳ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿರುವ ಮುದಗಲ್ ಪೊಲೀಸರು ಮೃತ ದೇಹಗಳನ್ನು ಹೊರ ತೆಗೆದು ಘಟನಾ ಸ್ಥಳದಲ್ಲಿ ಇರಿಸಿದ್ದಾರೆ. ಚೌಡಮ್ಮನ ಅಣ್ಣ ಸ್ಥಳಕ್ಕೆ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಪುತ್ರ ಆತ್ಮಹತ್ಯೆ

Last Updated : Aug 10, 2023, 7:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.