ETV Bharat / state

ಸೊಂಟ ಪಟ್ಟಿಯಲ್ಲಿ ₹1.58 ಕೋಟಿ ಮೌಲ್ಯದ ಚಿನ್ನ! ಬೆಂಗಳೂರು ಏರ್ಪೋರ್ಟ್​​ನಲ್ಲಿ ಸಿಕ್ಕಿಬಿದ್ದ ಇಬ್ಬರು ಪ್ರಯಾಣಿಕರು - ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಚಿನ್ನ ಸಾಗಣೆ

ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

gold smuggling
gold smuggling
author img

By ETV Bharat Karnataka Team

Published : Sep 10, 2023, 11:36 AM IST

Updated : Sep 10, 2023, 1:56 PM IST

ದೇವನಹಳ್ಳಿ: ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಇನ್ಸೂಲೇಷನ್ ಟೇಪ್​​ನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಸೆಪ್ಟೆಂಬರ್ 9ರ ರಾತ್ರಿ ದುಬೈನಿಂದ ಇಕೆ564 ಎಮಿರೇಟ್ಸ್ ವಿಮಾನದಲ್ಲಿ ಬಂದಿಳಿದ ಈ ಪ್ರಯಾಣಿಕರನ್ನು ತಪಾಸಣೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳ ಬಗ್ಗೆ ಅನುಮಾನಗೊಂಡ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ 2.8 ಕೆಜಿ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 1.58 ಕೋಟಿ ರೂಪಾಯಿ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಲಗೇಜ್ ಬ್ಯಾಗ್​​ಗೆ ಚಿನ್ನದ ನಟ್​​​​ ಬೋಲ್ಟ್.. ಚಿನ್ನಸಾಗಣೆಗೆ ಪ್ರಯಾಣಿಕನ ಖತರ್ನಾಕ್​ ಪ್ಲಾನ್!

ಗುದನಾಳದಲ್ಲಿ ಚಿನ್ನದ ಬಿಸ್ಕೆಟ್​ ಸಾಗಿಸುವಾಗ ಸಿಕ್ಕಿಬಿದ್ದ ಆರೋಪಿ: ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡಲು ಪ್ರಯಾಣಿಕರು ಅಪಾಯಕ್ಕೆ ಸಿಲುಕುತ್ತಿರುವ ಪ್ರಕರಣಗಳು ಆಗಾಗ ಕಂಡುಬರುತ್ತವೆ. ಕಳೆದ ತಿಂಗಳು ಪ್ರಯಾಣಿಕನೋರ್ವ ಗುದನಾಳದಲ್ಲಿ ಚಿನ್ನದ ಬಿಸ್ಕೆಟ್ ಸಾಗಿಸುವಾ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದ. ಪ್ರಯಾಣಿಕನನ್ನು ಬಂಧಿಸಿ, ಆತನಿಂದ 600 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಕೋಲ್ಕತ್ತಾದಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಯಾಣಿಕನನ್ನು ಅನುಮಾನದ ಮೇರೆಗೆ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.

  • #IndianCustomsAtWork - 09.09.23:On the basis of profiling, Bengaluru Customs intercepted 2 pax arriving by flight EK 564. During search, gold paste wrapped in insulation tapes concealed under waist belt found. On melting paste, 2.8 kg gold was recovered.Both pax arrested. pic.twitter.com/BnPwKmKJql

    — Bengaluru Customs (@blrcustoms) September 9, 2023 " class="align-text-top noRightClick twitterSection" data=" ">

ಚಿನ್ನ ಕಳ್ಳಸಾಗಣೆಗೆ ಎಂಥಾ ಐಡಿಯಾ: ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನ ಸಾಗಿಸಲು ಪ್ರಯಾಣಿಕನೋರ್ವ ಲಗೇಜ್ ಬ್ಯಾಗ್​ಗೆ ಚಿನ್ನದ ನಟ ಬೋಲ್ಟ್ ಅಳವಡಿಸಿದ್ದ ಪ್ರಕರಣ ಕಳೆದ ತಿಂಗಳು ಪತ್ತೆಯಾಗಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಪಾಸಣೆ ನಡೆಸಿ, ಆರೋಪಿಯನ್ನು ಬಂಧಿಸಿ, 267 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದಿದ್ದರು. ಆರೋಪಿಯ ಐಡಿಯಾಗೆ ಅಧಿಕಾರಿಗಳೇ ದಂಗಾಗಿದ್ದರು. ದುಬೈನಿಂದ ಈತ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬ್ಯಾಕ್ ತಪಾಸಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆ.

ಅಳಿವಂಚಿನಲ್ಲಿರುವ ಕಾಡು ಪ್ರಾಣಿಗಳ ಕಳ್ಳಸಾಗಣೆ ಯತ್ನ: ಇನ್ನು ಇತ್ತೀಚೆಗೆ ಅಳಿವಂಚಿನಲ್ಲಿರುವ ಕಾಡು ಪ್ರಾಣಿಗಳನ್ನು ಕಳ್ಳ ಸಾಗಣೆ ಮಾಡಲು ಯತ್ನಿಸಿದವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದರು. ಬಂಧಿತರು ಟ್ರಾಲಿ ಬ್ಯಾಗ್​ಗಳಲ್ಲಿ 234 ಕಾಡು ಪ್ರಾಣಿಗಳನ್ನು ಸಾಗಿಸುತ್ತಿದ್ದರು.

ಬ್ಯಾಂಕಾಕ್​ನಿಂದ ಬಂದ ವಿಮಾನದಲ್ಲಿದ್ದ ಪ್ರಯಾಣಿಕರ ಟ್ರಾಲಿ ಬ್ಯಾಗ್​ ತಪಾಸಣೆ ಮಾಡಿದಾಗ ಹೆಬ್ಬಾವು, ಊಸರವಳ್ಳಿ, ಇಗ್ವಾನಾ, ಆಮೆಗಳು, ಅಲಿಗೇಟರ್‌ಗಳು ಮತ್ತು ಒಂದು ಮರಿ ಕಾಂಗರೂ ಸೇರಿದಂತೆ ಒಟ್ಟು 234 ವನ್ಯಜೀವಿಗಳು ಪತ್ತೆಯಾಗಿದ್ದವು. ಈ ಪ್ರಾಣಿಗಳನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಲಾಗಿತ್ತು.

Last Updated : Sep 10, 2023, 1:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.