ETV Bharat / state

25 ವರ್ಷದಿಂದ ಕಳ್ಳತನವೇ ಬದುಕು, ಮೋಜು-ಮಸ್ತಿ; ಬೆಂಗಳೂರಿನಲ್ಲಿ ಕುಖ್ಯಾತ ಖದೀಮ ಸೆರೆ

author img

By

Published : Jul 26, 2023, 7:13 AM IST

ಬೆಂಗಳೂರು ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ.

notorious-thief-arrested-by-subramanyapur-police
ಕಳ್ಳತನ ಮಾಡೋದೆ ಈತನ ಕಾಯಕ: 25 ವರ್ಷಗಳಲ್ಲಿ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಖದೀಮನನ್ನ ಬಂಧಿಸಿದ ಪೊಲೀಸರು
ನಗರ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಮಾಹಿತಿ

ಬೆಂಗಳೂರು : ತಮಿಳುನಾಡಿನ ಧರ್ಮಪುರಿಯಿಂದ ಬೆಂಗಳೂರು ನಗರಕ್ಕೆ ಬಸ್​ನಲ್ಲಿ ಬಂದು ಮನೆಗಳ್ಳತನ ಮಾಡುತ್ತಿದ್ದ ಖದೀಮನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ರಾಮಸ್ವಾಮಿ ಬಂಧಿತ ಆರೋಪಿ. ಈತನಿಂದ 30 ಲಕ್ಷ ರೂ ಮೌಲ್ಯದ 602 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಕಳೆದ 25 ವರ್ಷಗಳಿಂದ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಬನಶಂಕರಿ, ಸಿ.ಕೆ.ಅಚ್ಚುಕಟ್ಟು, ಮಡಿವಾಳ, ರಾಮಮೂರ್ತಿನಗರ ಹಾಗು ಕುಮಾರಸ್ವಾಮಿ ಲೇಔಟ್ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಸುಮಾರು 13ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಈತನ ಹೆಸರಿತ್ತು. ಹಲವು ಬಾರಿ ಜೈಲಿಗೆ ಹೋಗಿ ಬಂದಿದ್ದಾನೆ. 2016ರಿಂದ ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳ್ಳತನ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದ ರಾಮಸ್ವಾಮಿ ಈ ಹಿಂದೆ ವ್ಯವಸ್ಥಿತವಾಗಿ ಗ್ಯಾಂಗ್ ಕಟ್ಟಿಕೊಂಡು ದುಷ್ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ. ಧರ್ಮಪುರಿ ಬಸ್ ನಿಲ್ದಾಣದ ಪಾರ್ಕಿಂಗ್​ ಪ್ರದೇಶದಲ್ಲಿ ಬೈಕ್ ನಿಲ್ಲಿಸಿ ಅಲ್ಲಿಂದ ಬಸ್​​ ಮೂಲಕ ಬೆಂಗಳೂರಿಗೆ ಬಂದು ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿ ಕಳ್ಳತನ ಎಸಗುತ್ತಿದ್ದ. ಕದ್ದ ನಂತರ ಊರಿಗೆ ಹೋಗಿ ಮಾರಾಟ ಮಾಡಿ ಅದರಿಂದ ಬಂದ ಹಣದಿಂದ ಮೋಜಿನ ಜೀವನ ಸಾಗಿಸುತ್ತಿದ್ದನು.

"ಇತ್ತೀಚೆಗೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಮನೆ ಕಳ್ಳತನ ಕೃತ್ಯವೆಸಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ತನಿಖೆಯಲ್ಲಿ ಸಿಕ್ಕ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಧರ್ಮಪುರಿಯಲ್ಲಿ ಬಂಧಿಸಲಾಯಿತು" ಎಂದು ಪೊಲೀಸರು ಹೇಳಿದ್ದಾರೆ.

ಗಾಂಜಾ, ಮದ್ಯ ಮಾರಾಟ ಪ್ರಕರಣದಲ್ಲೂ ಭಾಗಿ: ಗಾಂಜಾ, ಅಕ್ರಮ ಮದ್ಯ ಮಾರಾಟ ಪ್ರಕರಣಗಳಲ್ಲಿಯೂ ಆರೋಪಿ ಭಾಗಿಯಾಗಿದ್ದ. 2015ರವರೆಗೂ ಸುಮಾರು 13ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದನು. ಬಂಧನದ ಭೀತಿಯಿಂದ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. "ಇತ್ತೀಚೆಗೆ ತಮಿಳುನಾಡು ಪೊಲೀಸರು ಗಾಂಜಾ ವ್ಯವಸ್ಥಿತ ಜಾಲವನ್ನು ಬೇಧಿಸಿದ್ದರಿಂದ ಬಂಧನ ಭಯದಿಂದ ಆರೋಪಿ ಬೆಂಗಳೂರು ನಗರಕ್ಕೆ ಬಂದು ಮನೆಗಳ್ಳತನ ಮಾಡುತ್ತಿದ್ದ" ಎಂದು ನಗರದ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಮಾಹಿತಿ ನೀಡಿದರು.

ಇದನ್ನೂ ಓದಿ : ಗಂಡನ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುವ ಯತ್ನ: ಪತ್ನಿಯ ಕಳ್ಳಾಟ ಬಯಲಿಗೆಳೆದ ಪೊಲೀಸರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.