ETV Bharat / state

ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸುತ್ತೋಲೆ ಹೊರಡಿಸಿದ ಸಿಎಸ್ - ಸರ್ಕಾರದ ಮುಖ್ಯ ಕಾರ್ಯದರ್ಶಿ

ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸುವಂತೆ ಹಾಗೂ ನಿಗದಿಪಡಿಸಿದ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆ ಸಿಎಸ್ ಸೂಚಿಸಿದ್ದಾರೆ.

Bangalore Vidhana Soudha
ಬೆಂಗಳೂರು ವಿಧಾನಸೌಧ
author img

By ETV Bharat Karnataka Team

Published : Sep 19, 2023, 10:44 PM IST

ಬೆಂಗಳೂರು: ಸರ್ಕಾರಿ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿ ನಿಷೇಧಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ (ಸಿಎಸ್​) ಅವರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಷೇಧಿಸಿ ಕೆಲ ವರ್ಷಗಳ ಹಿಂದೆಯೇ ಆದೇಶಿಸಲಾಗಿತ್ತು.

ಇಂತಹ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭ ಅನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್ (ಪ್ಲಾಸ್ಟಿಕ್ ಅಲ್ಲದ) ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಸೂಚಿಸಿಲಾಗಿತ್ತು.‌ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ವ್ಯವಸ್ಥೆಯನ್ನು (Common drinking water dispensing system) ಏರ್ಪಡಿಸುವಂತೆ ಸೂಚಿಸಲಾಗಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರದ ವತಿಯಿಂದ ಅಥವಾ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಮೇಲಿನ ಉಲ್ಲೇಖಿತ ಸರ್ಕಾರದ ಆದೇಶದ ಸೂಚನೆಯನ್ನು ಪಾಲಿಸುತ್ತಿಲ್ಲ ಎಂಬುದು ಗಮನಕ್ಕೆ ಬಂದಿದೆ. ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಪ್ಲಾಸ್ಟಿಕ್ ಬಾಟಲಿಗಳಲ್ಲಿ ವಿತರಿಸುತ್ತಿರುವುದು ಸಮರ್ಥನೀಯವಲ್ಲ ಎಂದು ಮುಖ್ಯ ಕಾರ್ಯದರ್ಶಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆ ಇನ್ನುಮುಂದೆ ಎಲ್ಲ ಸಭೆ-ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್‌ನಲ್ಲಿ ನೀರಿನ ಬಳಕೆ/ಸರಬರಾಜು ಮಾಡುವುದನ್ನು ನಿಲ್ಲಿಸುವಂತೆ ಹಾಗೂ ನಿಗದಿಪಡಿಸಿದಂತೆ ಕುಡಿಯುವ ನೀರಿನ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಿಕೊಳ್ಳುವಂತೆ ಸಿಎಸ್ ಸೂಚಿಸಿದ್ದಾರೆ.

ಭೂಮಿಯ ಪರಿಷ್ಕೃತ ನೂತನ ಮಾರ್ಗಸೂಚಿ ದರ ಜಾರಿ:ಬೈರೇಗೌಡ

ಬೆಂಗಳೂರು : ಅಕ್ಟೋಬರ್ 1 ರಿಂದ ರಾಜ್ಯಾದ್ಯಂತ ಭೂಮಿಯ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್ ವ್ಯಾಲ್ಯೂ) ಜಾರಿಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ, ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಕಳೆದ ಐದು ವರ್ಷದಿಂದ ಪರಿಷ್ಕರಣೆಯಾಗಿಲ್ಲ. ಇದರಿಂದ ಹಲವು ಕಡೆಗಳಲ್ಲಿ ಭೂಮಿ ಮಾರಾಟಗಾರರು ಮತ್ತು ರೈತರಿಗೆ ಅನ್ಯಾಯವಾಗಿದ್ದರೆ, ಇದು ಕಪ್ಪು ಹಣ ವಹಿವಾಟಿಗೂ ಕಾರಣವಾಗಿದೆ. ಹೀಗಾಗಿ ನೂತನ ಮಾರ್ಗಸೂಚಿ ದರ ಜಾರಿಯಾಗಲಿದೆ ಎಂದು ತಿಳಿಸಿದರು.

ಈ ಪರಿಷ್ಕರಣೆಗೆ ಯಾವ ನಿಯಮಗಳನ್ನು ಅನ್ವಯಿಸಲಾಗಿದೆ ಎಂಬ ಮಾಹಿತಿ ನೀಡಿದ ಸಚಿವರು, “ಮಾರುಕಟ್ಟೆ ದರಕ್ಕೂ ಮಾರ್ಗಸೂಚಿ ದರಕ್ಕೂ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಮಾರ್ಗಸೂಚಿ ದರವನ್ನು ಶೇ.10 ರಷ್ಟು ಏರಿಕೆ ಮಾಡಲಾಗಿದೆ. ಮಾರ್ಗಸೂಚಿ ದರಕ್ಕಿಂತ ಮಾರುಕಟ್ಟೆ ದರ 200 ಪಟ್ಟು ಹೆಚ್ಚಿರುವ ಪ್ರದೇಶಗಳಲ್ಲಿ ಪರಿಷ್ಕೃತ ದರವನ್ನು ಶೇ. 20 ರಿಂದ ಶೇ.25 ರಷ್ಟು ಹೆಚ್ಚಿಸಲಾಗಿದೆ. ಇನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಮಾರುಕಟ್ಟೆ ದರ ಮಾರ್ಗಸೂಚಿ ದರಕ್ಕಿಂತ 500 ಪಟ್ಟು ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಭೂಮಿಗಳಿಗೆ ಮಾರ್ಗಸೂಚಿ ದರ 5 ರಿಂದ 10 ಲಕ್ಷ ಇದ್ದರೆ, ಮಾರುಕಟ್ಟೆ ದರ 10 ಕೋಟಿಗೂ ಅಧಿಕವಿದೆ. ಇಂತಹ ಪ್ರದೇಶಗಳಲ್ಲಿ ನೂತನ ಮಾರ್ಗಸೂಚಿ ದರವನ್ನು ಶೇ. 50ರಷ್ಟು ಹೆಚ್ಚಿಸಲಾಗಿದೆ ಎಂದರು.

ಇದನ್ನೂಓದಿ : ಜನ ಸಂಪರ್ಕಕ್ಕಾಗಿ Chief Minister of Karnataka ಎಂಬ ವಾಟ್ಸ್‌ಆ್ಯಪ್ ಚಾನಲ್ ಆರಂಭಿಸಿದ ಸಿಎಂ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.