ETV Bharat / state

ದತ್ತಪೀಠ ಹಿಂದೂ ಅರ್ಚಕರ ನೇಮಕ ತಿರಸ್ಕರಿಸಿದ್ದ ಸಿದ್ದರಾಮಯ್ಯ ಯಾವಸೀಮೆ ಜಸ್ಟಿಸ್ : ಸಿ ಟಿ ರವಿ ಪ್ರಶ್ನೆ - ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ

ದತ್ತಾತ್ರೇಯ ದೇವರ ಹೆಸರಲ್ಲಿ 1861 ಎಕರೆ ಜಾಗವಿದ್ದಿತ್ತು. ಕಾಂಗ್ರೆಸ್ ಆಡಳಿತದಲ್ಲಿ ದತ್ತಾತ್ರೇಯ ದೇವರ ಜಮೀನನ್ನು ಗೇಣಿದಾರಲ್ಲದವರಿಗೆ ಅಕ್ರಮ ಮಂಜೂರು ಮಾಡಿರುವ ಮಾಹಿತಿ ಈಗ ಲಭಿಸಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಮಂಜೂರಿ ರದ್ಧುಗೊಳಿಸಲು ಆಗ್ರಹಿಸುವೆ. ಈ ಸಮಗ್ರ ತನಿಖೆಗಾಗಿ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ರಚಿಸಲು ವಿನಂತಿಸುವೆ ಎಂದು ಸಿಟಿ ರವಿ ಹೇಳಿಕೆ

BJP National General Secretary CT Ravi
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ
author img

By

Published : Dec 3, 2022, 4:15 PM IST

Updated : Dec 3, 2022, 9:05 PM IST

ಬೆಂಗಳೂರು : ದತ್ತಪೀಠದ ವಿಚಾರದಲ್ಲಿ ಬಿಜೆಪಿ ಸರ್ಕಾರ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ದಿನಗಳ ಹಿಂದೆ ನ್ಯಾಯಾಲಯ ತೀರ್ಪಿನ ಆದೇಶದಂತೆ ಸಂಪುಟ ಉಪಸಮಿತಿ ತೆಗೆದುಕೊಂಡ ನಿರ್ಣಯದ ಶಿಫಾರಸು ಅಂಗೀಕರಿಸಿ ಸರ್ಕಾರವು ಆಡಳಿತ ಮಂಡಳಿ ರಚಿಸಿದೆ.

ದತ್ತಪೀಠಕ್ಕೆ ಹಿಂದೂ ಅರ್ಚಕರ ನೇಮಕಾತಿಗೆ ಇದ್ದ ಅಡೆತಡೆ ಈಗ ನಿವಾರಣೆಯಾಗಿದ್ದು, ಶೀಘ್ರ ಅರ್ಚಕರ ನೇಮಕ ನಡೆಯಲಿದೆ. ಈ ಬಾರಿ ದತ್ತ ಜಯಂತಿ 4-5 ದಶಕದ ಹೋರಾಟ ಈಡೇರಿದ ಸಂತೃಪ್ತಿಯ ಜಯಂತಿ ಆಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಸಂಪುಟದ ಉಪಸಮಿತಿಗೆ ಧನ್ಯವಾದ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ದತ್ತಪೀಠದ ಜಮೀನು ಅನ್ಯರ ಪಾಲು: ಸರ್ಕಾರಿ ದಾಖಲೆ ಪ್ರಕಾರ ಉಳುವವನೇ ಹೊಲದೊಡೆಯ ಮಸೂದೆ ಮುಂಚೆ ದತ್ತಾತ್ರೇಯ ದೇವರ ಹೆಸರಲ್ಲಿ 1,861 ಎಕರೆ ಜಾಗವಿದ್ದಿತ್ತು. ಕಾಂಗ್ರೆಸ್ ಆಡಳಿತದಲ್ಲಿ ದತ್ತಾತ್ರೇಯ ದೇವರ ಹೆಸರಿನ ಜಮೀನನ್ನು ಗೇಣಿದಾರಲ್ಲದವರಿಗೆ ಅಕ್ರಮ ಮಂಜೂರು ಮಾಡಿರುವ ಮಾಹಿತಿ ಈಗ ಲಭಿಸಿದೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಕ್ರಮ ಮಂಜೂರಿ ರದ್ಧುಗೊಳಿಸಲು ಆಗ್ರಹಿಸುವೆ. ಈ ಸಮಗ್ರ ತನಿಖೆಗಾಗಿ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ರಚಿಸಲು ವಿನಂತಿಸುವೆ ಎಂದರು.

ಸಿ ಟಿ ರವಿ

ದತ್ತಪೀಠ ವಿಚಾರ ಕಾಂಗ್ರೆಸ್ ನಿರ್ಲಕ್ಷ್ಯ: ಹಿಂದೆ ಸುಪ್ರೀಂ ಕೋರ್ಟ್ ದತ್ತ ಪೀಠದ ವಿಚಾರದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿಯನ್ನು ಸರಕಾರಕ್ಕೆ ವಹಿಸಿತ್ತು. ಆದರೆ, ಸಿದ್ದರಾಮಯ್ಯ ಸರಕಾರವು ಸುಪ್ರೀಂ ಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿ ಇದು ಸೂಕ್ಷ್ಮ ವಿಚಾರ ಎಂದಿದ್ದರು. ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸಿದ್ದರು. ಸತ್ಯಾಸತ್ಯತೆ ಪರಿಶೀಲಿಸದೇ ಕ್ರಮ ಕೈಗೊಂಡಿದ್ದರು. ಹಿಂದೂ ಅರ್ಚಕರ ನೇಮಕಾತಿ ತಿರಸ್ಕರಿಸಿದ ಸಿದ್ದರಾಮಯ್ಯ ಅವರದು ಯಾವ ಸೀಮೆ ಜಸ್ಟಿಸ್, ಇನ್‍ಸಾನಿಯತ್ ಎಂದು ಪ್ರಶ್ನಿಸಿದರು.

ಸಿದ್ಧರಾಮಯ್ಯ ಕ್ಷೇಮೆ ಕೇಳಲಿ:ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಹಿಂದೂಗಳನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ನೋಡುವ ಕಾಲ ಮುಗಿದಿದೆ. ನಿಮ್ಮ ಓಲೈಕೆ ನೀತಿಯ ಪರಮಾವಧಿ ಅದಾಗಿತ್ತು. ಇದಕ್ಕಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿಗಳಿಗೆ ಮೋದಿ ಭಸ್ಮಾಸುರ : ಪ್ರಧಾನಿ ನರೇಂದ್ರ ಮೋದಿ ಅವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ರವಿ ಅವರು, ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದರು.

ಗುಜರಾತ್, ಹಿಮಾಚಲದಲ್ಲಿ ಬಿಜೆಪಿ ಖಚಿತ: ಗುಜರಾತ್‍ನಲ್ಲಿ ಒಂದೂವರೆ ತಿಂಗಳ ಕಾಲ ಚುನಾವಣೆ ಕೆಲಸ ಮಾಡಿದ್ದು, ಅಲ್ಲಿ ಬಿಜೆಪಿ ಪರವಾದ ಅಲೆ ಇದೆ. ಮೋದಿಯವರು ಜನರ ಹೃದಯ ಗೆದ್ದಿದ್ದಾರೆ. ಮತ್ತೆ ಬಿಜೆಪಿ ಅಧಿಕಾರಕ್ಕೇರುವುದು ಶತಸಿದ್ಧ. ಹಿಮಾಚಲ ಪ್ರದೇಶದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2022ರ ಗುಜರಾತ್ ಫಲಿತಾಂಶ 2024ರ ಲೋಕಸಭೆ ಚುನಾವಣೆ ಫಲಿತಾಂಶದ ದಿಕ್ಸೂಚಿ ಎಂದು ವಿಶ್ಲೇಷಿಸಿದರು.

ರಾಹುಲ್ ಬಹುಕೃತ ವೇಷಂ:ರಾಜಕೀಯ ನಿಮಿತ್ತಂ ಬಹುಕೃತ ವೇಷಂ ಎಂಬುದು ರಾಹುಲ್ ಗಾಂಧಿ ಅವರಿಗೆ ಸರಿಹೊಂದುತ್ತದೆ. ರಾಹುಲ್ ಅವರು ಕೇಸರಿ ಶಾಲು ಧರಿಸಿದ ವೇಷದ ಬಗ್ಗೆ ಸಿದ್ದರಾಮಯ್ಯರಿಗೆ ಏನೆನಿಸುತ್ತದೆಂದು ಅಣಿಮುತ್ತು ಹೊರಡಿಸಬೇಕಿದೆ ಎಂದು ಪ್ರಶ್ನಿಸಿದರು. ರಾಹುಲ್ ಕೇಸರಿ ಶಾಲು ಧರಿಸಿದ್ದನ್ನು ಗಮನಿಸಿ ಸಿದ್ದರಾಮಯ್ಯ ಊಸರವಳ್ಳಿ ಎನ್ನುತ್ತೀರಾ? ರಾಜಕೀಯ ನಿಮಿತ್ತಂ ಬಹುಕೃತ ವೇಷಂ ಎನ್ನುವಿರಾ? ಎಂದು ಕೇಳಿದರು.

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಬೆಂಕಿ ಹಾಕಿದವರು ಇವರ ದೃಷ್ಟಿಯಲ್ಲಿ ಸೆಕ್ಯುಲರ್‍ಗಳು. ದಾವೂದ್ ಇಬ್ರಾಹಿಂ ಕೂಡ ಇವರಿಗೆ ಸೆಕ್ಯುಲರ್ ಆದಾರು. ನಾನು ಹುಟ್ಟಿದ ಮೂಲ ಸನಾತನ ಧರ್ಮದಲ್ಲೇ ಇರುವವ ಎಂದು ನುಡಿದರು.

ಕಮ್ಯುನಲ್ ಯಾರು? ಸೆಕ್ಯುಲರ್ ಯಾರೆಂದು ಗೊತ್ತಾಗಲಿದೆ. ಆರೆಸ್ಸೆಸ್ ನಿಮಗೆ ಕಮ್ಯುನಲ್. ಆದರೆ ಬಾಂಬ್ ಹಾಕುವವರೆಲ್ಲ ಸೆಕ್ಯುಲರ್​ಗಳು . ಅವರ ಜಾತ್ಯತೀತತೆ ಜನರಿಗೆ ತಿಳಿದಿದೆ. ಮಜಾವಾದಿ ಕುಟುಂಬ ವ್ಯಾಮೋಹಿ ಎಂದು ಕರೆಸಿಕೊಳ್ಳುವಷ್ಟೇ ಅರ್ಹತೆ ಇವರದ್ದು ಎಂದರು.

ಅಹಿಂದ ಇವರಿಗೆ ಇನ್ನೊಬ್ಬರನ್ನು ಮುಗಿಸಲು ಅಸ್ತ್ರವಾಗಿದೆ. ಕಾಂಗ್ರೆಸ್ಸಿಗರು 3, 4 ತಲೆಮಾರಿಗೆ ಆಗುವಷ್ಟು ಸಂಪತ್ತು ಮಾಡಿಕೊಂಡಿದ್ದಾರೆ ಎಂದು ಅವರ ಪಕ್ಷದ ರಮೇಶ್‍ಕುಮಾರ್ ಹೇಳಿದ್ದಾರೆ. ದಲಿತ ಮುಖ್ಯಮಂತ್ರಿ ಆಗಬೇಕಿದ್ದ ಡಾ. ಪರಮೇಶ್ವರ್ ಅವರನ್ನು ಸೋಲಿಸಿದ್ದು ಎಲ್ಲರಿಗೂ ಗೊತ್ತಿದೆ. ಮೋಟಮ್ಮ ಆತ್ಮಕಥನದಲ್ಲೂ ಸಿದ್ದರಾಮಯ್ಯ ರಾಜಕೀಯ ತಂತ್ರವನ್ನು ಬಿಡಿಸಿಟ್ಟಿದ್ದಾರೆ. ಹಿಂದೂವಾದ ಕೋಮುವಾದ ಎಂದಾದರೆ ಆ ಸನಾತನ ಧರ್ಮವನ್ನು ಬೆಂಬಲಿಸುವವ ನಾನು ಎಂದು ತಿಳಿಸಿದರು.

ಲಿಸ್ಟನಲ್ಲಿದ್ದವರು ರೌಡಿ ಅಲ್ಲ:ರೌಡಿಲಿಸ್ಟಿನಲ್ಲಿ ಇದ್ದವರೆಲ್ಲ ರೌಡಿ ಎಂದು ಹೇಳಲಾಗದು. ರಾಜಕೀಯ ಕಾರಣಕ್ಕೆ ನನ್ನ ಹೆಸರೂ ರೌಡಿ ಲಿಸ್ಟಿನಲ್ಲಿತ್ತು. ನಮ್ಮ ಪಕ್ಷದ ಕಾರ್ಯಕರ್ತರೂ ರೌಡಿ ಲಿಸ್ಟಿನಲ್ಲಿದ್ದರು. ಹೋರಾಟ ಮಾಡುವುದು ರೌಡಿಸಂ ಎಂಬ ಭಾವನೆ ಕಾಂಗ್ರೆಸ್ಸಿನವರದಾಗಿತ್ತು. ರೌಡಿಗಳ ಸೇರ್ಪಡೆ ವಿಚಾರದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ತಮ್ಮ ಸ್ಪಷ್ಟನೆ ನೀಡಿದ್ದಾರೆ ಎಂದರು.

ಏಕರೂಪ ನಾಗರಿಕ ಸಂಹಿತೆಯ ವಿಚಾರದಲ್ಲಿ ಬೊಮ್ಮಾಯಿ ಅವರ ನಿಲುವನ್ನು ಸ್ವಾಗತಿಸುತ್ತೇನೆ. ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲು ಸಂವಿಧಾನಕರ್ತೃ ಹೇಳಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್- ಜೆಡಿಎಸ್ ನಿಲುವೇನು ಎಂದು ಪ್ರಶ್ನೆಯನ್ನು ಮುಂದಿಟ್ಟರು.

ರಾಜ್ಯದಲ್ಲಿ ಜನಸಂಕಲ್ಪ ಯಾತ್ರೆ ಬಳಿಕ ವಿಜಯಸಂಕಲ್ಪ ಯಾತ್ರೆ ನಡೆಸಲಾಗುವುದು. 150 ಪ್ಲಸ್ ಶಾಸಕರ ಸ್ಥಾನ ಗೆಲ್ಲಲು ಎಲ್ಲ ತಂತ್ರಗಾರಿಕೆ ಮತ್ತು ಪ್ರಯತ್ನವನ್ನು ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:4 -5 ವರ್ಷಗಳಲ್ಲಿ ಕರ್ನಾಟಕ ವಿಶ್ವದ ಅತಿ ದೊಡ್ಡ ಉಕ್ಕು ಉತ್ಪಾದಿಸುವ ರಾಜ್ಯವಾಗಲಿದೆ: ಸಿಎಂ ಬೊಮ್ಮಾಯಿ

Last Updated : Dec 3, 2022, 9:05 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.