ETV Bharat / state

ಧಾರ್ಮಿಕ ಕಟ್ಟಡಗಳ ಸಂರಕ್ಷಣಾ ಮಸೂದೆಗೆ ವಿರೋಧ : ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದ ಸಿ.ಟಿ.ರವಿ - ಮೈಸೂರು ಜಿಲ್ಲಾಧಿಕಾರಿ

ಕರ್ನಾಟಕ ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ಕಾಯ್ದೆ ವಿರುದ್ಧ ಕಾಂಗ್ರೆಸ್ ಸದನದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಸಿ.ಟಿ ರವಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ಕಾಂಗ್ರೆಸ್ ನಿಜ ಬಣ್ಣ ಬಯಲಾದಂತಾಗಿದೆ ಎಂದು ಟೀಕಿಸಿದ್ದಾರೆ.

ct-ravi
ಸಿ.ಟಿ ರವಿ
author img

By

Published : Sep 21, 2021, 3:22 PM IST

ಬೆಂಗಳೂರು: ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ವಿಧೇಯಕವನ್ನು ಕಾಂಗ್ರೆಸ್ ನಾಯಕರು ಪ್ರಶ್ನಿಸುತ್ತಿದ್ದಾರೆ. ಅವರದ್ದು ಸೋಗಲಾಡಿತನ ಅನ್ನುವುದು ಈಗ ಅರ್ಥ ಆಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್​​​ನವರು ಹಿಂದೆಯೂ ಹಿಂದೂ ಪರ ಇರಲಿಲ್ಲ, ಈಗಲೂ ಇಲ್ಲ ಅನ್ನೋದು ಗೊತ್ತಾಗುತ್ತಿದೆ ಎಂದು ಟೀಕಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ನಂಜನಗೂಡು ದೇವಸ್ಥಾನ ಕೆಡವಲಾಗಿತ್ತು. ದೊಡ್ಡ ಪ್ರಮಾಣದಲ್ಲಿ ಭಕ್ತಾಧಿಗಳ ಭಾವನೆಗೆ ಧಕ್ಕೆಯಾಗಿತ್ತು. ಹೊಸ ಮಸೂದೆಯನ್ನು ತರುವ ಮೂಲಕ ದೇವಸ್ಥಾನ ರಕ್ಷಣೆ ಭರವಸೆಯನ್ನು ಸರ್ಕಾರ ನೀಡಿದೆ. ಸರ್ಕಾರದ ಈ ನೀತಿಯನ್ನು ಸ್ವಾಗತಿಸುವುದಾಗಿ ಹೇಳಿದ್ರು.

ದೇವಸ್ಥಾನ ಒಡೆದಾಗ ಕಾಂಗ್ರೆಸ್ ಟೀಕೆ ಮಾಡಿತ್ತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ಸಹ ಮಾಡಿದ್ದರು. ಆದರೆ ಇಷ್ಟು ಬೇಗ ಕಾಂಗ್ರೆಸ್ ಬಣ್ಣ ಬಯಲಾಯ್ತಾ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ದೇಶದಲ್ಲಿ ಭಾವನೆಗಳ ಆಧಾರದ ಮೇಲೆಯೇ ನಾವೆಲ್ಲ ಇರೋದು. ಸೃಷ್ಟಿಯೇ ಭಗವಂತ ಅಂತ ನಂಬುವವರು ನಾವು. ನಾವು ದೇವಾಲಯ ಕಟ್ಟಲು ಬಂದವರೇ ಹೊರತು ಕೆಡವುದಕ್ಕಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಸದನದಲ್ಲಿ ಸದ್ದು ಮಾಡಿದ ಮತಾಂತರ ವಿಷಯ.. ಕಡಿವಾಣಕ್ಕೆ ಕಠಿಣ ಕಾನೂನು ತರಲು ಸರ್ಕಾರದ ಚಿಂತನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.