ಬೆಂಗಳೂರು: ಬೆಂಗಳೂರಿನ ಮಾರುಕಟ್ಟೆಗೆ ಹಾಲು ಮತ್ತು ಮೊಸರನ್ನು ಸರಬರಾಜು ಮುಂದಾಗಿರುವ ಗುಜರಾತ್ ಮೂಲದ ಅಮುಲ್ ಬೆಂಬಲಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ. ನಂದಿನಿ-ಅಮುಲ್ ಕುರಿತಂತೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆ ನಡುವೆಯೇ ಸಿ.ಟಿ ರವಿ ಟ್ವೀಟ್ ಮೂಲಕ ಕಾಂಗ್ರೆಸ್ಗೆ ತಿರುಗೇಟು ನೀಡಿದ್ದಾರೆ.
''ಗುಲಾಮರಿಗೆ ಇಟಾಲಿಯನ್ ಆಳ್ವಿಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಆದರೆ ಭಾರತೀಯ ಬ್ರಾಂಡ್ ಅಮುಲ್ ತನ್ನ ಉತ್ಪನ್ನಗಳನ್ನು ಇತರ ಹಲವು ಬ್ರಾಂಡ್‌ಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡುವಾಗ ಅವರಿಗೆ ಸಮಸ್ಯೆ ಇದೆ. ಎಂತಹ ಸೋತವರ ಗುಂಪು ಇದು!'' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಟ್ವೀಟ್ ಮೂಲಕ ಟೀಕಿಸಿದ್ದಾರೆ.
-
ಕಾಂಗ್ರೆಸ್ ನಮ್ಮ ತಾಯಂದಿರು ಹಾಗು ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು.
— C T Ravi 🇮🇳 ಸಿ ಟಿ ರವಿ (@CTRavi_BJP) April 8, 2023 " class="align-text-top noRightClick twitterSection" data="
ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು.
ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಿದೆ.
">ಕಾಂಗ್ರೆಸ್ ನಮ್ಮ ತಾಯಂದಿರು ಹಾಗು ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು.
— C T Ravi 🇮🇳 ಸಿ ಟಿ ರವಿ (@CTRavi_BJP) April 8, 2023
ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು.
ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಿದೆ.ಕಾಂಗ್ರೆಸ್ ನಮ್ಮ ತಾಯಂದಿರು ಹಾಗು ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು.
— C T Ravi 🇮🇳 ಸಿ ಟಿ ರವಿ (@CTRavi_BJP) April 8, 2023
ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು.
ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಿದೆ.
"ಕಾಂಗ್ರೆಸ್ ನಮ್ಮ ತಾಯಂದಿರು ಹಾಗು ಅಕ್ಕಂದಿರನ್ನು ಕೇವಲ ಸಗಣಿ ಬಾಚಲು ಬಿಟ್ಟಿತ್ತು. ಆದರೆ ನಮ್ಮ ಸರ್ಕಾರ ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಸಬ್ಸಿಡಿ ಕೊಟ್ಟು ಗ್ರಾಮೀಣ ಕುಟುಂಬಗಳ ಬದುಕನ್ನು ಸಮೃದ್ಧಿಗೊಳಿಸಿತು. ನಂದಿನಿ ಈಗಾಗಲೇ 12 ರಾಜ್ಯಗಳಲ್ಲಿ ವಹಿವಾಟು ನಡೆಸುತ್ತಿದ್ದು, ಇನ್ನೂ ಹೆಚ್ಚು ರಾಜ್ಯಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಿದೆ" ಎಂದೂ ಸಹ ಸಿ.ಟಿ ರವಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಅಮುಲ್ ರಾಜ್ಯ ಪ್ರವೇಶ: ಸಾಮಾಜಿಕ ಜಾಲತಾಣದಲ್ಲಿ ವಿರೋಧದ ಅಲೆ.. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹೇಳುವುದೇನು?
-
Slaves have no problem in being ruled by an Italian.
— C T Ravi 🇮🇳 ಸಿ ಟಿ ರವಿ (@CTRavi_BJP) April 8, 2023 " class="align-text-top noRightClick twitterSection" data="
But they have a problem when Bharatiya brand Amul sells its products in Karnataka just like many other brands.
What a bunch of LOSERS !
">Slaves have no problem in being ruled by an Italian.
— C T Ravi 🇮🇳 ಸಿ ಟಿ ರವಿ (@CTRavi_BJP) April 8, 2023
But they have a problem when Bharatiya brand Amul sells its products in Karnataka just like many other brands.
What a bunch of LOSERS !Slaves have no problem in being ruled by an Italian.
— C T Ravi 🇮🇳 ಸಿ ಟಿ ರವಿ (@CTRavi_BJP) April 8, 2023
But they have a problem when Bharatiya brand Amul sells its products in Karnataka just like many other brands.
What a bunch of LOSERS !
ಗುಜರಾತ್ ಮೂಲದ 'ಅಮುಲ್' ಕರ್ನಾಟಕದಲ್ಲಿ ವಹಿವಾಟು ಆರಂಭಿಸವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಇದು ರಾಜಕೀಯ ತಿರುವು ಪಡೆದುಕೊಂಡಿದೆ. ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್, ಜೆಡಿಎಸ್ ನಡುವೆ ವಾಕ್ಸಮರ ನಡೆಯುತ್ತಿರುವುದು ಒಂದೆಡೆಯಾದ್ರೆ ಸಾಮಾಜಿಕ ಜಾಲತಾಣದಲ್ಲಿ ಕೆಎಂಎಫ್ ಉಳಿಸಿ ಎಂಬ ಅಭಿಯಾನ ಶುರುವಾಗಿದೆ.
ಅಮುಲ್ ಪ್ರವೇಶದಿಂದಾಗಿ ರಾಜ್ಯದ ಜನಪ್ರಿಯ ಉತ್ಪನ್ನವಾದ ನಂದಿನಿ ಉತ್ಪನ್ನಗಳ ವ್ಯವಹಾರಕ್ಕೆ ಅಡ್ಡಿ ಆಗುತ್ತದೆ ಮತ್ತು ನಂದಿನಿ ಜನಪ್ರಿಯತೆ ಹತ್ತಿಕ್ಕುವ ಕಾರ್ಯ ಆಗಲಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.
ದೇಶದ ಅತ್ಯಂತ ಜನಪ್ರಿಯ ಹೈನು ಉತ್ಪನ್ನ ಸಂಸ್ಥೆಯಾದ ಅಮುಲ್ ರಾಜ್ಯ ಪ್ರವೇಶಿಸುವುದರಿಂದ ನಂದಿನಿ ಉತ್ಪನ್ನಗಳಿಗೆ ಸ್ಪರ್ಧಿಯಾಗಲಿದೆ. ಇದು ಸದ್ಯ ಭಾರೀ ಸದ್ದು ಮಾಡುತ್ತಿದೆ. ಈ ವಿಷಯದ ಪರವಾಗಿ ಅಷ್ಟು ಮಾತು ಕೇಳಿಬರುತ್ತಿಲ್ಲ. ಆದರೆ ಇದನ್ನು ವಿರೋಧಿಸುವ ಹಾಗೂ ಅಮುಲ್ ಉತ್ಪನ್ನ ಮಾರಾಟಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರೆಂಬ ಮಾತುಗಳೇ ಹೆಚ್ಚಾಗಿ ಕೇಳಿ ಬರುತ್ತಿವೆ.
ಇದನ್ನೂ ಓದಿ: ನಂದಿನಿ ಹಾಲಿನ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ: ಕೆಎಂಎಫ್ ಸ್ಪಷ್ಟನೆ