ETV Bharat / state

ನ್ಯಾಯಾಧೀಶರು ಸರ್ವಜ್ಞರಲ್ಲ ಹೇಳಿಕೆ: ನ್ಯಾಯಾಂಗ ನಿಂದನೆ ದಾಖಲಿಸಲು ವಕೀಲರ ಮನವಿ

author img

By

Published : May 14, 2021, 9:35 PM IST

ಸುಪ್ರೀಂಕೋರ್ಟ್ ಆದೇಶಗಳ ಕುರಿತು ಬಿಜೆಪಿ ಮುಖಂಡ ಸಿ.ಟಿ ರವಿ ಅವರು ಟೀಕಿಸುವ ಜತೆಗೆ ನ್ಯಾಯಾಂಗದ ಕಾರ್ಯದಲ್ಲಿ ಮಧ್ಯಪ್ರವೇಶಿಸಿದ್ದಾರೆ. ಆ ವೇಳೆ ಜೊತೆಗಿದ್ದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರು ವಕೀಲರೂ ಆಗಿದ್ದಾರೆ. ಆದ್ದರಿಂದ ಈ ಇಬ್ಬರು ರಾಜಕೀಯ ನಾಯಕರ ವಿರುದ್ಧ ಹೈಕೋರ್ಟ್ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಸಿ.ಟಿ ರವಿ ಹೇಳಿಕೆ
ಸಿ.ಟಿ ರವಿ ಹೇಳಿಕೆ

ಬೆಂಗಳೂರು: ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ ನೀಡಿರುವ ಹೇಳಿಕೆ ಸಂಬಂಧ ಹೈಕೋರ್ಟ್ ಸ್ವಯಂ ಪ್ರೇರಿತ ನ್ಯಾಯಾಂಗ ನಿಂದನೆ ದಾಖಲಿಸಿಕೊಳ್ಳುವಂತೆ ವಕೀಲರೊಬ್ಬರು ಮನವಿ ಮಾಡಿದ್ದಾರೆ.

ಈ ಕುರಿತು ವಕೀಲ ಜಿ.ಆರ್ ಮೋಹನ್ ಅವರು ಹೈಕೋರ್ಟ್ ರಿಜಿಸ್ಟ್ರಾರ್(ನ್ಯಾಯಾಂಗ) ಅವರಿಗೆ ಇ-ಮೇಲ್ ಮೂಲಕ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ ನೀಡಿದ್ದ ನಿರ್ದೇಶನಗಳು ಹಾಗೂ ಸುಪ್ರೀಂಕೋರ್ಟ್ ಆದೇಶಗಳ ಕುರಿತು ಬಿಜೆಪಿ ಮುಖಂಡ ಸಿ.ಟಿ ರವಿ ಅವರು ಟೀಕಿಸುವ ಜತೆಗೆ ನ್ಯಾಯಾಂಗದ ಕಾರ್ಯದಲ್ಲಿ ಮಧ್ಯಪ್ರವೇಶಿಸಿದ್ದಾರೆ.

ಆ ವೇಳೆ ಜೊತೆಗಿದ್ದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರು ವಕೀಲರೂ ಆಗಿದ್ದಾರೆ. ಆದ್ದರಿಂದ ಈ ಇಬ್ಬರು ರಾಜಕೀಯ ನಾಯಕರ ವಿರುದ್ಧ ಹೈಕೋರ್ಟ್ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಅಲ್ಲದೇ, ಸಿ.ಟಿ ರವಿ ಹಾಗೂ ಸದಾನಂದಗೌಡರು ಮಾತನಾಡಿರುವ ವಿಡಿಯೋವನ್ನು ಕೂಡ ಇ-ಮೇಲ್ ನಲ್ಲಿ ಲಗತ್ತಿಸಿದ್ದು, ಅದನ್ನು ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ತರಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ.. ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ಹೇಳಿದ್ದೇನೆ, ಯಾರೂ ತಪ್ಪು ಗ್ರಹಿಸಬಾರದು: ಸಿ ಟಿ ರವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.