ETV Bharat / state

ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್‌ಗೆ 1,500, ಡಿಜಿಟಲ್‌ ಎಕ್ಸ್‌ರೇಗೆ 250 ರೂ ದರ ನಿಗದಿ - ಬೆಂಗಳೂರು

ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ಗಾಗಿ 1,500 ರೂ., ಡಿಜಿಟಲ್‌ ಎಕ್ಸ್‌ರೇ 250 ರೂಪಾಯಿ ನಿಗದಿಪಡಿಸಲಾಗಿದೆ.

minister sudhakar
ಸಚಿವ ಸುಧಾಕರ್
author img

By

Published : May 7, 2021, 1:52 PM IST

ಬೆಂಗಳೂರು: ಕೋವಿಡ್​ 2ನೇ ಅಲೆಯ ಸ್ವರೂಪ ತೀವ್ರವಾಗಿದ್ದು, ಹಲವರಿಗೆ ಆರ್​ಟಿ-ಪಿಸಿಆರ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದು ಸಿಟಿ ಸ್ಕ್ಯಾನಿಂಗ್‌ನಲ್ಲಿ ಸೋಂಕು ಇರುವುದು ಕಂಡು ಬರುತ್ತಿದೆ. ಹೀಗಾಗಿ ಜನಸಾಮಾನ್ಯರು ಆತಂಕಕ್ಕೆ ಒಳಗಾಗಿ ಸಿಟಿ ಸ್ಕ್ಯಾನ್ ಮಾಡಿಸಲು ಮುಂದಾಗುತ್ತಿದ್ಧಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಹಲವು ಖಾಸಗಿ ಆಸ್ಪತ್ರೆಗಳು ಹೆಚ್ಚುವರಿ ದರ ನಿಗದಿ ಮಾಡುತ್ತಿರುವುದು ಕಂಡು ಬಂದಿದೆ.

ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ದರವನ್ನು ನಿಗದಿಗೊಳಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಆದೇಶಿಸಿದ್ದಾರೆ. ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನಿಂಗ್ ಗಾಗಿ 1,500 ರೂ., ಡಿಜಿಟಲ್‌ ಎಕ್ಸ್‌ರೇ 250 ರೂಪಾಯಿ ನಿಗದಿಪಡಿಸಲಾಗಿದೆ.

ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ವ್ಯವಸ್ಥೆ ಅಡಿ ಸ್ಕ್ಯಾನಿಂಗ್​ನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರ್ಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಜನತಾ ಲಾಕ್​ಡೌನ್ ಫೇಲ್, ಸಂಪೂರ್ಣ ಲಾಕ್​ಡೌನ್ ಬಗ್ಗೆ ಸುಧಾಕರ್ ಸುಳಿವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.