ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 86,76,026 ರೂ. ಮೌಲ್ಯದ ಪೇಸ್ಟ್ ಚಿನ್ನವನ್ನು ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟಲಿಜೆನ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸ್ಮಗ್ಲರ್ಗಳು ಹೊಸ ತಂತ್ರಜ್ಞಾನ ಬಳಸಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಮರೆಮಾಚಿ ಕಳ್ಳ ಸಾಗಣಿಕೆ ಮಾಡುತ್ತಿದ್ದಾರೆ. ಈ ಜಾಲವನ್ನು ಪತ್ತೆಹಚ್ಚಿರುವ ಬೆಂಗಳೂರು ಕಸ್ಟಮ್ಸ್ ವಿಭಾಗದ ಏರ್ ಇಂಟಲಿಜೆನ್ಸ್ ಅಧಿಕಾರಿಗಳು 86,76,026 ರೂ. ಮೌಲ್ಯದ ಪೇಸ್ಟ್ ರೂಪದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
![Customs Officers Detained 86 lakh worth gold](https://etvbharatimages.akamaized.net/etvbharat/prod-images/kn-bng-01-coustms-av-7208821_28112020072056_2811f_1606528256_688.jpg)
ಇತ್ತೀಚೆಗೆ ಬೆಂಗಳೂರು ವಿಮಾನ ನಿಲ್ದಾಣ ಸ್ಮಗ್ಲರ್ಗಳ ಹೆದ್ದಾರಿಯಾಗಿ ಮಾರ್ಪಟ್ಟಿದೆ, ಹೊರ ದೇಶಗಳಿಂದ ಚಿನ್ನ ಸೇರಿದಂತೆ ಮಾದಕ ವಸ್ತುಗಳನ್ನು ಕಳ್ಳ ಸಾಗಣಿಕೆ ಮಾಡುತ್ತಿದ್ದಾರೆ. ಪ್ರಯಾಣಿಕರು ಮತ್ತು ಕೊರಿಯರ್ ವಿಭಾಗದ ಮೇಲೆ ಹದ್ದಿನ ಕಣ್ಣಿಟ್ಟಿರುವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಕಳ್ಳ ಸಾಗಣಿಕೆ ಜಾಲವನ್ನು ಪತ್ತೆ ಮಾಡುವ ಮೂಲಕ ಸ್ಮಗ್ಲರ್ಗಳ ನಿದ್ದೆಗೆಡಿಸಿದ್ದಾರೆ.