ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ) : ಪ್ಯಾಂಟ್ನ ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯಿಂದ 35 ಲಕ್ಷ ಮೌಲ್ಯದ 687 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.
ಡಿಸೆಂಬರ್ 12 ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿದ್ದು, ಸಂಶಯದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಪ್ರಯಾಣಿಕ ತನ್ನ ಒಳ ಉಡುಪು, ಶೂ ಮತ್ತು ಪ್ಯಾಂಟ್ನ ಸೊಂಟದ ಪಟ್ಟಿಯಲ್ಲಿ ಮರೆಮಾಚಿ ಚಿನ್ನ ಇಟ್ಟಿರುವುದು ಬೆಳಕಿಗೆ ಬಂದಿದೆ. ಆರೋಪಿ ಚಿನ್ನಕ್ಕೆ ಇನ್ಸುಲೇಟೆಡ್ ಟೇಪ್ ಸುತ್ತಿ ಮಾರೆಮಾಚಿದ್ದ ಎಂದು ತಿಳಿದುಬಂದಿದೆ.
ಆರೋಪಿಯಿಂದ ಒಟ್ಟು 35,42,685 ಮೌಲ್ಯದ 687.90 ಗ್ರಾಂ ತೂಕದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ದಾರಿಯಲ್ಲಿ ಸಿಕ್ಕ ಲಕ್ಷಾಂತರ ಹಣದ ಕೇಸ್: ದುಡ್ಡು ತಮ್ಮದು ಅಂತಾ ಬಂದ ವಾರಸುದಾರರು ಮೂವರು!