ETV Bharat / state

CWRC ಇಂದು ನೀಡಿರುವ ಆದೇಶ ಕನ್ನಡಿಗರ ಪಾಲಿಗೆ ಮರಣ ಶಾಸನ: ಹೆಚ್ ಡಿ ಕುಮಾರಸ್ವಾಮಿ

ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

author img

By ETV Bharat Karnataka Team

Published : Sep 26, 2023, 5:06 PM IST

Former CM HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ ಪಾಲಿಗೆ ಮರಣಶಾಸನ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾವೇರಿ ಕೊಳ್ಳ ಮತ್ತು ಬೆಂಗಳೂರು ನಗರದ ಜನರ ಕತ್ತು ಹಿಚುಕುವುದಕ್ಕೆಂದೇ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಿದೆಯೇನೋ ಎಂದು ಬಹಳ ನೋವಿನಿಂದ ಹೇಳಲೇಬೇಕಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ಪೆಟ್ಟಿನ ಮೇಲೆ ಪೆಟ್ಟು ತಿನ್ನುತ್ತಿರುವ ಕರ್ನಾಟಕಕ್ಕೆ ಈಗ ಮತ್ತೆ ದೊಡ್ಡ ಹಿನ್ನಡೆ ಆಗಿದೆ. ಹಿನ್ನಡೆ ಎನ್ನುವುದು ನಿರಂತರವಾಗಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಇನ್ನೂ 18 ದಿನಗಳ ಕಾಲ ನಿತ್ಯವೂ 3,000 ಕ್ಯೂಸೆಕ್ ಹರಿಸಲು ಕರ್ನಾಟಕಕ್ಕೆ ಇಂದು ಆದೇಶ ನೀಡಿದೆ. ಇದು ನಿಜಕ್ಕೂ ಆಘಾತಕಾರಿ, ಕಾವೇರಿ ಮತ್ತು ಕನ್ನಡಿಗರ…

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 26, 2023 " class="align-text-top noRightClick twitterSection" data=" ">

ಕೆಆರ್​ಎಸ್ ಜಲಾಶಯಕ್ಕೆ ನಿತ್ಯವೂ 10,000 ಕ್ಯೂಸೆಕ್ ಒಳಹರಿವು ಇದೆ ಎನ್ನುತ್ತಾರೆ ಜಲ ಸಂಪನ್ಮೂಲ ಸಚಿವರು. ಇದಕ್ಕೆ ತದ್ವಿರುದ್ಧವಾಗಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು "ನಮ್ಮಲ್ಲಿ ನೀರೇ ಇಲ್ಲ" ಎಂಬ ಮಾಹಿತಿ ನೀಡುತ್ತಾರೆ. ಇನ್ನೊಂದೆಡೆ ಹಿರಿಯ ಅಧಿಕಾರಿಯೊಬ್ಬರು "ಈ ಆದೇಶದಿಂದ ರಾಜ್ಯಕ್ಕೆ 2.5 ಟಿಎಂಸಿ ನೀರು ಉಳಿತಾಯವಾಗಿದೆ" ಎನ್ನುತ್ತಾರೆ. 'ಎತ್ತು ಏರಿಗೆ, ಕೋಣ ನೀರಿಗೆ' ಎನ್ನುವಂತಿದೆ ಜಲ ಸಂಪನ್ಮೂಲ ಇಲಾಖೆ ಮತ್ತು ಸರ್ಕಾರದ ಪರಿಸ್ಥಿತಿ. ಹೆಜ್ಜೆ ಹೆಜ್ಜೆಗೂ ಅನರ್ಥಗಳನ್ನೇ ಮಾಡುತ್ತಿರುವ ಈ ಸರ್ಕಾರದ ವೈಫಲ್ಯದ ಲಾಭವನ್ನು ತಮಿಳುನಾಡು ಅತ್ಯಂತ ಜಾಣತನದಿಂದ ಪಡೆದುಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.

ನಾವು ಕುಡಿಯಲು ನೀರು ಕೇಳುತ್ತಿದ್ದೇವೆ, ತಮಿಳುನಾಡು ಅಕ್ರಮವಾಗಿ ಮಿತಿಮೀರಿದ ವಿಸ್ತೀರ್ಣದಲ್ಲಿ ಬೆಳೆದ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಅಲ್ಲಿ ಸ್ವಾರ್ಥ ಇದೆ, ಇಲ್ಲಿ ಜನರ ಬದುಕಿದೆ. ಮಾನವೀಯ ನ್ಯಾಯಕ್ಕೆ ವಿರುದ್ಧವಾದ ತಮಿಳುನಾಡು ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ. ಆ ರಾಜ್ಯದ ಇಂಥ ಮನಃಸ್ಥಿತಿಯ ವಿರುದ್ಧ ಪ್ರಬಲ ಹೋರಾಟ ಮಾಡುವ ಇಚ್ಛಾಶಕ್ತಿ ಈ ಸರ್ಕಾರಕ್ಕೆ ಇಲ್ಲದಾಗಿದೆ. ಕೇವಲ ಪಾಲುದಾರ ಪಕ್ಷ ಡಿಎಂಕೆಯ ಯೋಗಕ್ಷೇಮವನ್ನೇ ಕೈ ಸರ್ಕಾರ ನೋಡುತ್ತಾ, ಕರ್ನಾಟಕದ ಹಿತವನ್ನು ಸಂಪೂರ್ಣ ಬಲಿ ಕೊಟ್ಟಿದೆ. ಕನ್ನಡಿಗರ ಮೇಲೆ 'ಬಂಡೆ' ಎಳೆದಿದೆ ಎಂದು ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನರು. ಈಗಾಗಲೇ ಕಾವೇರಿ ನೀರು ಹಂಚಿಕೆಯನ್ನು ನ್ಯಾಯಾಧಿಕರಣ ಅಖೈರುಗೊಳಿಸಿದ್ದು, ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಆದರೆ, ಸಂಕಷ್ಟ ಕಾಲದಲ್ಲಿ ಪರಿಹಾರವೇನು? ಮಾತೆತ್ತಿದರೆ ನೀರು ಬಿಡಿ ಎಂದು ಆದೇಶಿಸುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) & ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಈ ಕೂಡಲೇ 'ಸಂಕಷ್ಟ ಹಂಚಿಕೆ ಸೂತ್ರ'ವನ್ನು ರೂಪಿಸಲೇಬೇಕು. ಆ ನಿಟ್ಟಿನಲ್ಲಿ ಸರಕಾರ ಒತ್ತಡ ಹೇರಿ, ಆ ಸೂತ್ರ ರೂಪಿಸದ ಹೊರತು ತಮಿಳುನಾಡಿಗೆ ನೀರು ಹರಿಸುವ ಪ್ರಶ್ನೆಯೇ ಇಲ್ಲವೆಂದು ಕಡ್ಡಿ ತುಂಡು ಮಾಡಿದಂತೆ ಸ್ಪಷ್ಟವಾಗಿ ಹೇಳಲೇಬೇಕು. ಯಾವುದೇ ಕಾರಣಕ್ಕೂ ಈಗ ನೀರು ಹರಿಸಬಾರದು ಎಂದು ಹೆಚ್ ಡಿಕೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ.. 18 ದಿನ 3000 ಕ್ಯೂಸೆಕ್​ ನೀರು ಬಿಡಲು CWRC ಶಿಫಾರಸು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.