ಬೆಂಗಳೂರು: ಆ್ಯಂಬುಲೆನ್ಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಸೆಕ್ಯೂರಿಟಿ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಅಸ್ಸೋಂ ಮೂಲದ ಸೆಕ್ಯುರಿಟಿ ಗಾರ್ಡ್ ಬಿಕ್ರಮ್ ರಿಕಿಯಸನ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಯಲಹಂಕದ ಸರ್ವಿಸ್ ರಸ್ತೆಯಲ್ಲಿ ಸೈಕಲ್ ನಲ್ಲಿ ತೆರಳುತ್ತಿದ್ದಾಗ ದೇವನಹಳ್ಳಿ ಕಡೆಗೆ ಚಲಿಸುತ್ತಿದ್ದ KA 35 B3164 ನಂಬರಿನ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ ಸೆಕ್ಯುರಿಟಿ ಗಾರ್ಡ್ ಚಲಿಸುತ್ತಿದ್ದ ಸೈಕಲ್ಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಆತ ರಸ್ತೆಗೆ ಬಿದ್ದಿದ್ದ. ಅಪಘಾತವಾದ ಕೂಡಲೇ ಸ್ಥಳೀಯರು ಸೇರಿ ಆತನನ್ನು ಆಸ್ಪತ್ರೆಗೆ ದಾಖಲಿಸಿ, ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಸದ್ಯ ಸೆಕ್ಯುರಿಟಿ ಗಾರ್ಡ್ ಸಾವನ್ನಪ್ಪಿದ್ದು, ಆ್ಯಂಬುಲೆನ್ಸ್ ಚಾಲಕನಿಗಾಗಿ ಶೋಧ ಮುಂದುವರೆದಿದೆ.