ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಾಗಪುರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿ ನಗರಕ್ಕೆ ತಂದಿದ್ದಾರೆ.
ಡಿ.ಜೆ.ಹಳ್ಳಿಯ ನಿವಾಸಿ ಮುದಾಸೀರ್ ಖಾನ್ ಬಂಧಿತ ಆರೋಪಿ. ಪುಲಕೇಶಿ ನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಸಂಬಂಧಿ ನವೀನ್ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದನ್ನು ಖಂಡಿಸಿ ಕಳೆದ ವರ್ಷ ಆ. 11ರಂದು ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳಿಗೆ ಕಲ್ಲೆಸೆದು ಗಲಭೆ ನಡೆಸಲಾಗಿತ್ತು.
ಓದಿ:ಚೀಟಿ ಹಣ ವಂಚನೆ ಪ್ರಕರಣ: ಸಿಐಡಿ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಈತ ಗಲಭೆಗೂ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿ ಜನ ಸೇರಿಸಿದ್ದ ಎನ್ನಲಾಗಿದೆ. ಗಲಾಟೆ ಬಳಿಕ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ. ಬೆಂಗಳೂರಿನಿಂದ ಹುಬ್ಬಳ್ಳಿ, ದೆಹಲಿ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಈತ ತಲೆಮರೆಸಿಕೊಂಡಿದ್ದ. ಒಂದು ಕಡೆಯಿಂದ ಮತ್ತೊಂದು ಕಡೆಗೆ ರೈಲಿನಲ್ಲಿ ಚಲಿಸುತ್ತಿದ್ದ. ನಾಗಪುರ ರೈಲು ನಿಲ್ದಾಣದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಆತನನ್ನು ಬಂಧಿಸಿ, ನಗರಕ್ಕೆ ಕರೆತಂದು ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.