ETV Bharat / state

ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಜು. 26 ರಂದು ಮೌನ ಸತ್ಯಾಗ್ರಹ : ಡಿಕೆಶಿ - ಸೋನಿಯಾ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್​ನಿಂದ ಮೌನ ಪ್ರತಿಭಟನೆ

ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿಗೆ ಇಡಿ ಸಮನ್ಸ್​​- ಅಂದು ಕೆಪಿಸಿಸಿಯಿಂದ ಮೌನ ಸತ್ಯಾಗ್ರಹ- ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿಕೆ

ಡಿ. ಕೆ ಶಿವಕುಮಾರ್
ಡಿ. ಕೆ ಶಿವಕುಮಾರ್
author img

By

Published : Jul 24, 2022, 6:27 PM IST

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಮತ್ತೊಮ್ಮೆ ವಿಚಾರಣೆಗೆ ಕರೆದಿರುವುದನ್ನ ಖಂಡಿಸಿ ಇದೇ 26 ರಂದು ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರು ಮಾತನಾಡಿರುವುದು

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇದೇ 26 ರಂದು ವಿಚಾರಣೆಗೆ ಬರುವಂತೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಸಮನ್ಸ್ ಜಾರಿ ಮಾಡಿದ್ದಾರೆ. ನನ್ನ ಪ್ರಕರಣದಲ್ಲಿ ನನ್ನ ತಾಯಿಗೂ ಇದೇ ರೀತಿ ಕಿರುಕುಳ ನೀಡಿದ್ದರು. ಆ ಸಂದರ್ಭದಲ್ಲಿ ಮನೆಯಲ್ಲೇ ವಿಚಾರಣೆ ಮಾಡಲು ನ್ಯಾಯಾಲಯದ ಮೊರೆ ಹೋಗಿದ್ದೆ. ಆದರೆ, ಸೋನಿಯಾ ಗಾಂಧಿ ಅವರು ನ್ಯಾಯಾಲಯದ ಮೊರೆ ಹೋಗದೆ ಧೈರ್ಯವಾಗಿ ವಿಚಾರಣೆ ಎದುರಿಸಿ ಬಂದಿದ್ದಾರೆ. ಆದರೂ ಕಿರುಕುಳ ನಿಲ್ಲುತ್ತಿಲ್ಲ. ಹೀಗಾಗಿ, ಬೆಂಗಳೂರಿನ ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್​ನ ಎಲ್ಲ ನಾಯಕರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಕಾರ್ಪೊರೇಟರ್, ಮಾಜಿ ಕಾರ್ಪೊರೇಟರ್, ಪಕ್ಷದ ಪದಾಧಿಕಾರಿಗಳು ಎಲ್ಲರೂ 26 ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಮೌನ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.

ನನ್ನ ಬಳಿ ಚರ್ಚೆ ಮಾಡಿಲ್ಲ: ಚೆಲುವರಾಯಸ್ವಾಮಿ, ಬಾಲಕೃಷ್ಣ ಅವರ ಜತೆ ಶನಿವಾರ ರಾತ್ರಿ ಸಮಾಲೋಚನೆ ಕುರಿತ ಪ್ರಶ್ನೆಗೆ ಭಾರತ ಜೋಡೋ ಪಾದಯಾತ್ರೆ ಚಾಮರಾಜನಗರ, ಮೈಸೂರು, ಶ್ರೀರಂಗಪಟ್ಟಣ, ನಾಗಮಂಗಲ, ಮೇಲುಕೋಟೆ, ಪಾಂಡವಪುರ, ಮಾರ್ಗವಾಗಿ ತುಮಕೂರು ಜಿಲ್ಲೆ ಪ್ರವೇಶಿಸಲಿದೆ. ಇದಕ್ಕೆ ಸಂಬಂಧಿಸಿದ ತಯಾರಿ ಕುರಿತು ಚರ್ಚೆ ಮಾಡಿದ್ದೇವೆ. ಪಕ್ಷದ ಸಂಘಟನೆ ವಿಚಾರ ಹೊರತುಪಡಿಸಿ ಬೇರೆ ವಿಚಾರವಾಗಿ ಯಾವುದೇ ನಾಯಕರು ನನ್ನ ಬಳಿ ಚರ್ಚೆ ಮಾಡಿಲ್ಲ. ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಜಗಳ ಬೀದಿಗೆ ಬಂದಿದೆ. ಒಂದು ಹುದ್ದೆಗೆ ನಾಲ್ಕು ಜನ ಕಿತ್ತಾಡುತ್ತಿದ್ದಾರೆ ಎಂಬ ಸಚಿವ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ' ಬಹಳ ಸಂತೋಷ. ಜನ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂಬ ಸತ್ಯವನ್ನು ಅವರು ಒಪ್ಪಿಕೊಂಡಿದ್ದಾರೆ. ಅವರಿಗೆ ಅಭಿನಂದನೆಗಳು' ಎಂದು ತಿಳಿಸಿದರು.

ಲೂಟಿ ಮಾಡೋದನ್ನು ಕಲಿಯಬೇಕಾ?: ಬಿಜೆಪಿ ನೋಡಿ ಕಾಂಗ್ರೆಸ್ ಶಿಸ್ತು ಕಲಿಯಬೇಕು ಎಂಬ ಹೇಳಿಕೆ ಕುರಿತ ಪ್ರಶ್ನೆಗೆ, ' ಅವರನ್ನು ನೋಡಿ ಭ್ರಷ್ಟಾಚಾರ, ಲೂಟಿ ಮಾಡೋದನ್ನು ಕಲಿಯಬೇಕಾ? ಅಯ್ಯೋ ಅವರ ಪಕ್ಷ, ಅಲ್ಲಿರುವ ಕೊಳಕು, ಅವರ ನಾಯಕರನ್ನು ಅವರು ಅರಗಿಸಿಕೊಳ್ಳಲು ಸಾಧ್ಯವಿದೆಯೇ? ಎಂದು ಅವರ ಕಾರ್ಯಕರ್ತರನ್ನೇ ಕೇಳಿ ಎಂದು ತಿಳಿಸಿದರು.

ಓದಿ: ಸುಸಜ್ಜಿತ ಆಸ್ಪತ್ರೆಗಾಗಿ ಟ್ವಿಟರ್ ಅಭಿಯಾನ ಕೈಗೊಂಡ ಉತ್ತರ ಕನ್ನಡ ಜನತೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.