ETV Bharat / state

ಗೃಹ ಸಚಿವ ಆರಗ ಜ್ಞಾನೇಂದ್ರ ಒಬ್ಬ ಹುಚ್ಚ, ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ: ಡಿಕೆಶಿ - ಆರಗ ಜ್ಞಾನೇಂದ್ರ ವಿರುದ್ದ ಡಿಕೆಶಿ ಆಕ್ರೋಶ

'ನನ್ನ ಮಗನಿಗೆ ಕಸ್ಟಡಿನಲ್ಲಿದ್ದಾಗ ಪೊಲೀಸರು ಡ್ರಗ್ಸ್ ಸರಬರಾಜು ಮಾಡಿದ್ದಾರೆ ಎಂದು ಶ್ರೀಕಿ ಅವರ ತಂದೆ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಶ್ರೀಕಿ ಕೂಡ ನ್ಯಾಯಾಲಯಕ್ಕೆ ನೀಡಿರುವ ಹೇಳಿಕೆಯಲ್ಲಿ ಇದನ್ನು ಒಪ್ಪಿಕೊಂಡಿದ್ದಾನೆ. ಕೋರ್ಟ್ ಕೂಡ ಈ ಬಗ್ಗೆ ತನಿಖೆಗೆ ಆದೇಶಿಸಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ (KPCC President D. K Shivakumar) ತಿಳಿಸಿದ್ದಾರೆ. ಇದೇ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅವರು ಗರಂ ಆಗಿದ್ದಾರೆ.

d-k-shivakumar
ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್
author img

By

Published : Nov 18, 2021, 3:37 PM IST

ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Home minister Araga Jnanendra) ಒಬ್ಬ ಹುಚ್ಚ. ಹೀಗಾಗಿ ಏನೇನೋ ಮಾತಾಡುತ್ತಿದ್ದಾರೆ. ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ. ಅವರನ್ನು ನಿಮ್ಹಾನ್ಸ್ ಆಸ್ಪತ್ರೆ(Nimhans Hospital)ಗೆ ದಾಖಲಿಸಬೇಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್(KPCC President D K Shivakumar) ಟೀಕಿಸಿದ್ದಾರೆ.

ಸದಾಶಿವನಗರd ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಹ್ಯಾಕಿಂಗ್ ಆರೋಪಿ ಶ್ರೀಕಿ (Bitcoin Hacking accused shriki) ಯನ್ನು ಬಳಸಿಕೊಂಡು ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಕಾಂಗ್ರೆಸ್ ನಾಯಕರು ತಮಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೂರು ಬಂದರೆ ತನಿಖೆ ನಡೆಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿರುವ ಬಗ್ಗೆ ಮಾಧ್ಯಮದವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಪ್ರತಿಕ್ರಿಯೆ

ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರಧಾನಿ ಅವರಿಗೆ ಲಿಖಿತ ದೂರು ಹೋಗಿದೆ. ಇದು ಅಧಿಕೃತ ಪತ್ರ. ಅದರಲ್ಲಿ ಸಿಎಂ ಕುಟುಂಬದ ಸದಸ್ಯರು, ಹಲವು ಸಚಿವರು, ಬಿಜೆಪಿ ರಾಜ್ಯಾಧ್ಯಕ್ಷರು, ಸಂಸತ್ ಸದಸ್ಯರು ಸೇರಿದಂತೆ ಹಲವರ ಹೆಸರುಗಳು ಇವೆ. ಅವರು ಹಗರಣದಲ್ಲಿ ಷಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಗೃಹ ಸಚಿವರು ಮೊದಲು ಈ ದೂರಿನ ಬಗ್ಗೆ ಸುಮೊಟೋ ಕೇಸ್​ ದಾಖಲಿಸಿ, ತನಿಖೆ ಮಾಡಿಸಲಿ. ಆಮೇಲೆ ಯೂತ್ ಕಾಂಗ್ರೆಸ್ ಬಗ್ಗೆ ಮಾತಾಡಲಿ ಎಂದು ಖಾರವಾಗಿ ಹೇಳಿದರು.

ಶ್ರೀಕಿ ಜೈಲಲ್ಲಿದ್ದ

ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ನಡೆದಾಗ ಶ್ರೀಕಿ ಜೈಲಿನಲ್ಲಿದ್ದನಲ್ಲಾ, ಅವನು ಹೇಗೆ ನಲಪಾಡ್ ಪರ ರಿಗ್ಗಿಂಗ್ ಗೆ (ನಕಲಿ ಮತದಾನ) ಸಹಾಯ ಮಾಡಲು ಸಾಧ್ಯ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದಕ್ಕೆ ನಾನು ಹೇಳಿದ್ದು ಹೋಮ್ ಮಿನಿಸ್ಟರ್ ಒಬ್ಬ ಹುಚ್ಚ ಎಂದು. ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ತಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಪರಿವೆಯೇ ಇಲ್ಲ. ಹೀಗಾಗಿ, ಅವರನ್ನು ಮೊದಲು ನಿಮ್ಹಾನ್ಸ್ ಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕಿದೆ ಎಂದು ಗರಂ ಆದರು.

ಶ್ರೀಕಿ ಜೈಲಿನಲ್ಲಿದ್ದಾಗ ಅವರಿಗೆ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಒದಗಿಸಿ, ಹ್ಯಾಕಿಂಗ್ ಮಾಡಿರಬಹುದು ಎಂಬ ಮಾತುಗಳಿವೆಯಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ ಡಿಕೆಶಿ, 'ಅದನ್ನೇ ನಾನು ಹೇಳುತ್ತಿರುವುದು. ನನ್ನ ಮಗನಿಗೆ ಕಸ್ಟಡಿನಲ್ಲಿದ್ದಾಗ ಪೊಲೀಸರು ಡ್ರಗ್ಸ್ ಸರಬರಾಜು ಮಾಡಿದ್ದಾರೆ ಎಂದು ಶ್ರೀಕಿ ಅವರ ತಂದೆ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ. ಶ್ರೀಕಿ ಕೂಡ ನ್ಯಾಯಾಲಯಕ್ಕೆ ನೀಡಿರುವ ಹೇಳಿಕೆಯಲ್ಲಿ ಇದನ್ನು ಒಪ್ಪಿಕೊಂಡಿದ್ದಾನೆ. ಕೋರ್ಟ್ ಕೂಡ ಈ ಬಗ್ಗೆ ತನಿಖೆಗೆ ಆದೇಶಿಸಿದೆ' ಎಂದು ಹೇಳಿದರು.

ಶ್ರೀಕಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಎಂದು ಕೋರ್ಟ್ ಸ್ಪಷ್ಟ ಆದೇಶ ನೀಡಿದ್ದರೂ ಅದನ್ನು ಮಾಡಿಲ್ಲ. ಕೋವಿಡ್ ನೆಪವೊಡ್ಡಿ ಬೇರೆ ಕಡೆ ಪರೀಕ್ಷೆ ಮಾಡಲಾಗಿದೆ. ಕೋರ್ಟ್ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಯಾಕಾಗಿ ಬೇರೆ ಕಡೆ ಪರೀಕ್ಷೆ ಮಾಡಿಸಿದರು? ಯಾರು ಇದಕ್ಕೆ ಜವಾಬ್ದಾರರು? ಯಾವ ಸಚಿವರು ಜವಾಬ್ದಾರರು? ಬೇರೆ ಯಾರೆಲ್ಲ ಇದಕ್ಕೆ ಹೊಣೆಗಾರರು ಎಂಬುದು ಹೊರಬರಬೇಕಲ್ಲವೇ? ಆದರೆ ಅಪ್ರಬುದ್ಧ, ಜ್ಞಾನವೇ ಇಲ್ಲದ ಗೃಹ ಸಚಿವರು ಶಾಲಾ ಬಾಲಕನಂತೆ ಮಾತನಾಡುತ್ತಿದ್ದಾರೆ ಎಂದು ಡಿಕೆಶಿ ಛೇಡಿಸಿದರು.

ನೀವು ಈ ಬಗ್ಗೆ ಹೋರಾಟ, ಪ್ರತಿಭಟನೆ ಹಮ್ಮಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, 'ನಾನು ವಿಧಾನ ಪರಿಷತ್ ಚುನಾವಣೆ ಪ್ರಕ್ರಿಯೆಯಲ್ಲಿ ನಿರತನಾಗಿದ್ದೇನೆ. ನನ್ನ ಸಹೋದ್ಯೋಗಿಗಳು ಇದನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಲಿದ್ದಾರೆ' ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.

ಓದಿ: Bitcoin: ಬಿಜೆಪಿ-ಕಾಂಗ್ರೆಸ್ ನಡುವೆ ಬಿಟ್‌ಕಾಯಿನ್‌ ಟ್ವೀಟ್ ವಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.