ETV Bharat / state

ಮತದಾರರ ಮಾಹಿತಿ ದುರ್ಬಳಕೆ ಸಿಎಂ ಉಡಾಫೆ ಉತ್ತರ ನೀಡುವುದು ಸರಿಯಲ್ಲ: ಡಿ ಕೆ ಶಿವಕುಮಾರ್ - ಈಟಿವಿ ಭಾರತ​ ಕರ್ನಾಟಕ

ಮುಖ್ಯಮಂತ್ರಿಗಳು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಈ ಉಡಾಫೆ ಉತ್ತರ ನೀಡುವುದು ಸರಿಯಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದರು.

d-k-shivakumar-reaction-on-voter-information-theft-issue
ಡಿ ಕೆ ಶಿವಕುಮಾರ್
author img

By

Published : Nov 18, 2022, 7:33 PM IST

ಬೆಂಗಳೂರು: ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ. ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ (ವಿಭಾಗೀಯ ಅಧಿಕಾರಿ) ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಆದರೆ ಈಗಾಗಲೇ ಈ ಸಂಸ್ಥೆಯ ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದಾರೆ. ಈ ಸಂಸ್ಥೆಯ ಕಾರ್ಯವ್ಯಾಪ್ತಿ ಏನಿದೆ ಎಂದು ನಮ್ಮ ಬಳಿ ಮಾಹಿತಿ ಇದೆ ಎಂದರು.

ಮತದಾರರ ಮಾಹಿತಿ ದುರ್ಬಳಕೆ ಸಿಎಂ ಉಡಾಫೆ ಉತ್ತರ ನೀಡುವುದು ಸರಿಯಲ್ಲ

ಸಿಎಂ ಉಡಾಫೆ ಉತ್ತರ : ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಉಡಾಫೆಯಾಗಿ ಮಾತನಾಡಬಾರದು. ಮುಖ್ಯಮಂತ್ರಿಗಳು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಯಾವ ಕ್ಷೇತ್ರಗಳಲ್ಲಿ ಎಷ್ಟು ವಾರ್ಡ್​ಗಳಲ್ಲಿ ಮಾಹಿತಿ ಕಲೆ ಹಾಕಿದ್ದಾರೆ, ಖಾಲಿ ಮನೆ, ನಿವೇಶನಗಳನ್ನು ಗುರುತಿಸಿ ಅವುಗಳ ದುರ್ಬಳಕೆಗೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಗೊತ್ತಿದೆ.

ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ, ಈ ಸಂಸ್ಥೆಗೆ ಅನುಮತಿ ಆದೇಶ ನೀಡಿದ್ದಾರೆ. ಆದರೂ ಆಯೋಗದವರು ಯಾಕೆ ಕ್ರಮ ಕೈಗೊಂಡಿಲ್ಲ?. ನಾವು ಪೊಲೀಸ್ ಕಮಿಷನರ್ ಅವರಿಗೆ ಕೊಟ್ಟಿರುವ ದೂರಿನ ಮಾಹಿತಿಯನ್ನು ಇ ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ನಮ್ಮ ಸರ್ಕಾರವದ ಅವಧಿಯಲ್ಲಿ ನಾನು, ಕುಮಾರಸ್ವಾಮಿ ಅಥವಾ ಬೆಂಗಳೂರಿನ ಯಾವುದೇ ಸಚಿವರು, ಶಾಸಕರು ಈ ಕೆಲಸ ಮಾಡಿದ್ದರೆ ನಮ್ಮ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಿಂದಲೂ ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಮುಖ್ಯಮಂತ್ರಿಗಳು ಇದರ ಗಂಭೀರತೆ ಅರಿಯಬೇಕು ಎಂದು ಹೇಳಿದರು.

ಅಕ್ರಮವಾಗಿ ಚುನಾವಣೆ ಗೆಲ್ಲುವ ತಂತ್ರ : 26 ಲಕ್ಷ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು, 14 ಲಕ್ಷ ಹೆಸರನ್ನು ಹೊಸದಾಗಿ ಸೇರಿಸಲಾಗಿದೆ ಎಂದು ಅವರೇ ಹೇಳಿದ್ದಾರೆ. ಯಾರ ಹೆಸರು ಕೈ ಬಿಟ್ಟು, ಯಾರ ಹೆಸರು ಸೇರಿಸಿದ್ದಾರೆ? ಪ್ರತಿ ಕ್ಷೇತ್ರದಲ್ಲೂ ಹೀಗೆ ಮಾಡಲಾಗಿದೆ. ಹೀಗಾಗಿ ಕಾರ್ಯಕರ್ತರು ಬಹಳ ಜಾಗರೂಕರಾಗಿ ಈ ಬಗ್ಗೆ ಗಮನ ಹರಿಸಬೇಕು. ಪ್ರತಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಇರುವ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟು, ಅಕ್ರಮವಾಗಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ತಿಳಿಸಿದರು.

ತಪ್ಪನ್ನು ಯಾರೇ ಮಾಡಿದರೂ ತಪ್ಪೇ : ನಿಮ್ಮ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡುವಾಗ ಈ ಸಂಸ್ಥೆಗಳ ಹಿನ್ನಲೆ ಪರಿಶೀಲನೆ ಮಾಡಲಿಲ್ಲವೇ ಎಂದು ಕೇಳಿದಾಗ, ಇಂತಹ ತಪ್ಪನ್ನು ಯಾರೇ ಮಾಡಿದರೂ ತಪ್ಪೇ. ಅದು ಶಿವಕುಮಾರ್ ಆಗಲಿ, ಬೇರೆಯವರೇ ಆಗಲಿ. ಈ ವಿಚಾರವಾಗಿ ತನಿಖೆ ಮಾಡಿ. ಒಬ್ಬರು ತಪ್ಪು ಮಾಡಿದರು ಎಂದು ನಾನು ಅದೇ ತಪ್ಪು ಮಾಡುತ್ತೇನೆ ಎಂದು ಹೇಳುವುದು ಎಷ್ಟು ಸರಿ? ಮತದಾನದ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ನಿಮಗೆ ಅಧಿಕಾರ ಇದೆ ಎಂದು ಆ ಹಕ್ಕು ಕಸಿಯುವುದು ಎಷ್ಟು ಸರಿ? ಎಂದು ಕೇಳಿದರು.

ಜಾತಿ ಗಣತಿ ತಪ್ಪಾಗಿದ್ದರೆ ಕ್ರಮ ಕೈಗೊಳ್ಳಿ : ಜಾತಿ ಗಣತಿ ಮಾಡಿದ್ದೂ ತಪ್ಪೇ ಎಂಬ ಪ್ರಶ್ನೆಗೆ, ತಪ್ಪಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ. ಆದರೆ ಮತದಾನದ ಹಕ್ಕು ನಮ್ಮ ಮೂಲಭೂತ ಹಕ್ಕು. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಅದನ್ನೇ ತನಿಖೆ ಮಾಡಿ ಎಂದು ಹೇಳುತ್ತಿದ್ದೇವೆ. ಇಂತಹ ವಿಚಾರ ತನಿಖೆ ಮಾಡಬೇಡಿ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲ ವಿಚಾರದಲ್ಲೂ ತನಿಖೆ ಮಾಡಲಿ. ನಾನು ಎಲ್ಲಿ ಹೋದರೂ ಶಾಸಕರ ಗುರುತಿನ ಚೀಟಿ ಕೇಳುವುದಿಲ್ಲ. ಕೇಳುವುದು ಆಧಾರ್ ಅಥವಾ ಮತದಾರರ ಗುರುತಿನ ಚೀಟಿ ಮಾತ್ರ. ಇಂತಹ ಹಕ್ಕು ಕಸಿಯುವುದು ಸರಿಯಲ್ಲ ಎಂದು ತಿಳಿಸಿದರು.

ಬಹಿರಂಗಪಡಿಸಲ್ಲ : ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಬೇರೆ ಪಕ್ಷದಿಂದ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ದೊಡ್ಡ ಪಟ್ಟಿ ಇದೆ. ಇದನ್ನು ನಾನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಅವರು ಪಕ್ಷವನ್ನು ಸೇರುವ ದಿನ ಅವರ ಹೆಸರು ನಿಮಗೆ ತಿಳಿಯುತ್ತದೆ’ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ : ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ: ಚುನಾವಣೆ ಆಯೋಗಗಕ್ಕೆ ವರದಿ ಸಲ್ಲಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.