ETV Bharat / state

ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ : ಡಿ ಕೆ ಶಿವಕುಮಾರ್​ - ಬಸವನಗುಡಿ ನ್ಯಾಷನಲ್ ಕಾಲೇಜು

ಹಿಂದುಳಿದವರು, ಪರಿಶಿಷ್ಟರು, ಮಹಿಳೆಯರಿಗೆ ನೀಡಬೇಕಾದ ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಈ ಬಗ್ಗೆ ಹೋರಾಟ ಮುಂದುವರೆಯುತ್ತದೆ. ಹಾಗೇ ಆಕ್ಷೇಪಣೆಯನ್ನು ಸಲ್ಲಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಹೇಳಿದರು.

d-k-shivakumar
ಡಿ ಕೆ ಶಿವಕುಮಾರ್​
author img

By

Published : Aug 7, 2022, 8:10 PM IST

ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅದರ ಅಂಗವಾಗಿ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಪ್ರವಾಸ ಮಾಡುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿ ಕೆ ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೋಣನಕುಂಟೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಪಾದಯಾತ್ರೆ ಹಾಗೂ ಬಿಬಿಎಂಪಿ ಚುನಾವಣೆ ಪೂರ್ವಸಿದ್ಧತೆ ಸಭೆ ಸಂದರ್ಭದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಸರ್ಕಾರ ಬಿಬಿಎಂಪಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಅವಕಾಶ ತಪ್ಪಿಸಲು ಬೇಕಾಬಿಟ್ಟಿಯಾಗಿ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ವಿರುದ್ಧ ನಮ್ಮ ಪಕ್ಷದ ನಾಯಕರು ಪ್ರತಿಭಟಿಸಿ, ನಗರಾಭಿವೃದ್ಧಿ ಇಲಾಖೆ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮಾಡಿದ್ದು ತಪ್ಪು ಎಂದು ಹೇಳಬೇಕಾಗಿರುವುದು ನಮ್ಮ ಕರ್ತವ್ಯ ಎಂದರು.

ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಆಗಿಲ್ಲ : ಹಿಂದುಳಿದವರು, ಪರಿಶಿಷ್ಟರು, ಮಹಿಳೆಯರಿಗೆ ನೀಡಬೇಕಾದ ಮೀಸಲಾತಿಯನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಬೊಮ್ಮನಹಳ್ಳಿ ಕ್ಷೇತ್ರದ 14 ವಾರ್ಡ್​ಗಳ ಪೈಕಿ 9 ವಾರ್ಡ್​ಗಳಿಗೆ ಮಹಿಳಾ ಮೀಸಲಾತಿ ನೀಡಿದ್ದಾರೆ. ಜಯನಗರದಲ್ಲಿ ಒಂಬತ್ತಕ್ಕೆ ಎಂಟು ವಾರ್ಡ್, ಬಿಟಿಎಂ ಲೇಔಟ್ ನಲ್ಲಿ 8 ವಾರ್ಡ್ ಹಾಗೂ ಗಾಂಧಿ ನಗರದಲ್ಲಿ 7 ಕ್ಕೆ 7 ವಾರ್ಡ್​ಗಳಲ್ಲಿ, ಚಾಮರಾಜಪೇಟೆಯ 6 ವಾರ್ಡ್ ಗಳಲ್ಲಿ ಮಹಿಳೆಯರಿಗೆ ಮೀಸಲು ನೀಡಿದ್ದಾರೆ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಒಟ್ಟು 93 ವಾರ್ಡ್​ಗಳ ಪೈಕಿ 76 ಕಡೆ ಮಹಿಳೆಯರಿಗೆ ಮೀಸಲಾತಿ ನೀಡಿದ್ದಾರೆ. ಇದು ನ್ಯಾಯವೋ, ಅನ್ಯಾಯವೋ ನೀವೇ ತೀರ್ಮಾನಿಸಿ. ನೆಹರು ಅವರು ಕೂಡ ಅಲಹಾಬಾದ್ ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದವರು. ಕೆಂಗಲ್ ಹನುಮಂತಯ್ಯ ಅವರು ಬೆಂಗಳೂರು ಪಾಲಿಕೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ ಎಂದರು.

ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ

ಆಕ್ಷೇಪಣೆ ಸಲ್ಲಿಸುತ್ತೇವೆ : ಈ ಬಗ್ಗೆ ಹೋರಾಟ ಮುಂದುವರಿಸಿ, ಆಕ್ಷೇಪಣೆ ಸಲ್ಲಿಸಿ ಎಂದು ನಾವು ತಿಳಿಸಿದ್ದೇವೆ. ಮತದಾರರ ಪಟ್ಟಿಯಿಂದ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಮತದಾರರನ್ನು ತೆಗೆದುಹಾಕಲಾಗಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ ಪಟ್ಟಿ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದೇನೆ. ಈ ಬಗ್ಗೆ ಪ್ರತ್ಯೇಕ ಸಭೆ ಮಾಡುತ್ತೇವೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷ ಪಾಲಿಕೆ ಚುನಾವಣೆಗೆ ಸಿದ್ಧ : ಚುನಾವಣೆ ಎದುರಿಸಲು ತಯಾರಿ ನಡೆಸುತ್ತಿದ್ದೇವೆ. 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸಲು ನಮ್ಮೆಲ್ಲರಿಗೂ ಅವಕಾಶ ಸಿಕ್ಕಿದೆ. ಆಗಸ್ಟ್​ 15 ರಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ರಾಷ್ಟ್ರಧ್ವಜ ಹಿಡಿದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ. ಸಂಜೆ ಸಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದು ರಾಜಕೀಯೇತರ ಕಾರ್ಯಕ್ರಮ ಎಂದು ತಿಳಿಸಿದರು.

ಇದರಲ್ಲಿ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ನೌಕರರು, ಕಲಾವಿದರು, ಬೇರೆ ಬೇರೆ ಕ್ಷೇತ್ರಗಳ ಎಲ್ಲರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ. ಈಗಾಗಲೇ ಸುಮಾರು 29,000 ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಣಿ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವವರು ರೈಲ್ವೇ ಸೇವೆ ಹಾಗೂ ಮೆಟ್ರೋ ಮಾರ್ಗಗಳನ್ನು ಬಳಸಿಕೊಳ್ಳಬೇಕು. ಆದಷ್ಟು ವಾಹನ ಬಳಕೆ ಕಡಿಮೆ ಮಾಡಬೇಕು. ಆಗಸ್ಟ್ 15 ರಂದು ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ವಿನಾಯಿತಿ ನೀಡಬೇಕು ಎಂದು ನಾನು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದರು.

ಸರ್ಕಾರ ಉಚಿತವಾಗಿ ರಾಷ್ಟ್ರಧ್ವಜ ನೀಡಬಹುದಿತ್ತು : ಇದು ಈ ದೇಶದ ಸ್ವಾತಂತ್ರ್ಯದ ಹಬ್ಬವಾಗಿದೆ. ಇದನ್ನು ಸಂಭ್ರಮದಿಂದ ಆಚರಿಸಬೇಕು. ಈ ಅವಕಾಶ ನಿಮಗೆ ಮತ್ತೆ ಸಿಗುವುದಿಲ್ಲ. ಬಿಜೆಪಿ ಸ್ನೇಹಿತರು ಮನೆಮನೆಗೂ ರಾಷ್ಟ್ರಧ್ವಜವನ್ನು ನೀಡಲು 25 ರೂಪಾಯಿ ನಿಗದಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ರಾಷ್ಟ್ರಧ್ವಜ ನೀಡಬಹುದಿತ್ತು. ನೋಂದಣಿ ಮಾಡಿಕೊಂಡವರಿಗೆ ನಾವು 1.5 ಲಕ್ಷ ರಾಷ್ಟ್ರಧ್ವಜ, ಟೋಪಿ, ಟಿ ಶರ್ಟ್ ಉಚಿತವಾಗಿ ನೀಡುತ್ತೇವೆ. ಅನೇಕರು ಸ್ತಬ್ಧ ಚಿತ್ರಗಳನ್ನು ಮಾಡಲು ಮುಂದಾಗಿದ್ದಾರೆ ಎಂದು ಡಿಕೆಶಿ ಹೇಳಿದರು.

ಕಲಾವಿದರೂ ತಮ್ಮ ಪ್ರತಿಭೆ ಪ್ರದರ್ಶಿಸಬಹುದು. ಇದರಲ್ಲಿ ಭಾಗವಹಿಸುವವರಿಗೆ ಪ್ರಮಾಣಪತ್ರ ನೀಡಲಾಗುವುದು. ಈ ಕಾರ್ಯಕ್ರಮ ಮಾಡಲು ಅನುಮತಿ ನೀಡಿರುವ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸುತ್ತೇನೆ. ಈ ಕಾರ್ಯಕ್ರಮ ಮಾಡುವಂತೆ ಎಐಸಿಸಿ ನಾಯಕರೇ ಸೂಚಿಸಿದ್ದು, ಅವರಿಗೆ ಆಹ್ವಾನ ನೀಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಕಾರ್ಯಕ್ರಮ ನಡೆಯಲಿದ್ದು, ಯಾರು ಬರಬೇಕು ಎಂದು ಅವರೇ ತೀರ್ಮಾನ ಮಾಡುತ್ತಾರೆ. ನಮ್ಮ ರಾಜ್ಯಕ್ಕೆ ಯಾರು ಬರುತ್ತಾರೆ ಎಂದು ನಾನು ಈಗಲೇ ಹೇಳುವುದಿಲ್ಲ ಎಂದು ವಿವರಿಸಿದರು.

ಇದನ್ನೂ ಓದಿ : ದೇಶದ ಹದಗೆಟ್ಟ ವ್ಯವಸ್ಥೆ ಸರಿಪಡಿಸಲು ಯಾರಿಗೂ ಸಾಧ್ಯ ಇಲ್ಲ: ನಟ ಪ್ರಕಾಶ್ ರಾಜ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.