ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಪೈಪೋಟಿಗಿಳಿಯಲ್ಲ. ಕಾಂಗ್ರೆಸ್ ಪಕ್ಷವೇ ಒಂದು ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆಯಲ್ಲಿದ್ದೇನೆ. ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ನಾಯಕರು. ಅವರ ಹಿರಿತನ, ಅನುಭವವನ್ನು ಗೌರವಿಸುತ್ತೇನೆ. ಅವರ ಜೊತೆ ಪೈಪೋಟಿಗೆ ಇಳಿಯುವುದಿಲ್ಲ ಎಂದು ತಿಳಿಸಿದ್ದಾರೆ.