ETV Bharat / state

ಸಿಎಂ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು: ಡಿಕೆಶಿ

ಅ.14ರಂದು ದಿನಪತ್ರಿಕೆಗಳಲ್ಲಿ ಬಂದಿರುವ ಸರ್ಕಾರಿ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ, ದೇಶದ ಮೊದಲ ಪ್ರಧಾನಿ, ಸ್ವಾತಂತ್ರೋತ್ತರ ನವಭಾರತ ನಿರ್ಮಾಣದ ಶಿಲ್ಪಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಿದ್ದೀರಿ ಎಂದು ಡಿಕೆಶಿ ಅವರು ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಡಿಕೆಶಿ
ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಡಿಕೆಶಿ
author img

By

Published : Aug 14, 2022, 4:26 PM IST

ಬೆಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಕುರಿತ ಸರ್ಕಾರಿ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಕಡೆಗಣನೆ ಆಗಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅವರು, ಇಡೀ ದೇಶ ಸ್ವಾಂತಂತ್ರ್ಯ 75 ನೇ ವರ್ಷದ ಸಂಭ್ರಮಾಚರಣೆಯಲ್ಲಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರನ್ನು ಸ್ಮರಿಸಿ, ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಈ ವಿಚಾರದಲ್ಲಿ ಅಧಿಕಾರರೂಢ ಸರ್ಕಾರದ ಜವಾಬ್ದಾರಿ ಒಂದು ಪಟ್ಟು ಹೆಚ್ಚಾಗಿಯೇ ಇರುತ್ತದೆ. ಆದರೆ, ಅ.14ರಂದು ದಿನಪತ್ರಿಕೆಗಳಲ್ಲಿ ಬಂದಿರುವ ಸರ್ಕಾರಿ ಜಾಹೀರಾತಿನಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ಹೋರಾಟಗಾರ, ದೇಶದ ಮೊದಲ ಪ್ರಧಾನಿ, ಸ್ವಾತಂತ್ರೋತ್ತರ ನವಭಾರತ ನಿರ್ಮಾಣದ ಶಿಲ್ಪಿ ಜವಾಹರಲಾಲ್ ನೆಹರು ಅವರ ಭಾವಚಿತ್ರ ಹಾಗೂ ಹೆಸರನ್ನು ಉದ್ದೇಶಪೂರ್ವಕವಾಗಿ ಪ್ರಕಟಿಸದೆ ಅವರಿಗೆ ಅಪಮಾನ ಮಾಡಿದ್ದೀರಿ. ಆ ಮೂಲಕ ಇತಿಹಾಸ ತಿರುಚುವ ವಿಫಲ ಯತ್ನ ಮಾಡಿದ್ದೀರಿ. ಮುಖ್ಯಮಂತ್ರಿ ಸ್ಥಾನದಿಂದ ತಾವು ಇಂತಹ ಕೀಳು ಮಟ್ಟದ ರಾಜಕಾರಣ ಮಾಡಬಾರದಿತ್ತು. ಇದು ತಮ್ಮ ಆತ್ಮಸಾಕ್ಷಿಗೆ ಶೋಭೆ ತರುವ ಕೆಲಸವಲ್ಲ ಎಂದಿದ್ದಾರೆ.

ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನೆಹರು ಅವರು ಅಸಕಾರ ಚಳುವಳಿ, ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿ ಸೇರಿದಂತೆ ಪ್ರತಿ ಹಂತದಲ್ಲೂ ತಮ್ಮ ಬದುಕು ಮುಡಿಪಿಟ್ಟವರು. ಅಲ್ಲದೆ, ಸ್ವಾತಂತ್ರ್ಯ ಹೋರಾಟಕ್ಕಾಗಿ 9 ವರ್ಷಗಳ ಸೆರೆವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ಹೋರಾಟ, ನವಭಾರತ ನಿರ್ಮಾಣದಲ್ಲಿ ನೆಹರು ಅವರ ಪಾತ್ರ ಬಹಳ ಹಿರಿದು. ಇದು ನಿಮಗೂ ಗೊತ್ತಿದೆ. ಈ ಇತಿಹಾಸ ಓದಿಯೇ ನಾವು ನೀವು ಬೆಳೆದಿದ್ದೇವೆ. ಆದರೂ ರಾಜಕೀಯ ಕಾರಣಕ್ಕೆ ನೀವು ಇಂತಹ ಕ್ಷುಲ್ಲಕ ಕೆಲಸಕ್ಕೆ ಕೈ ಹಾಕಬಾರದಿತ್ತು. ಇದು ಅಕ್ಷಮ್ಯ. ಆಗಿರುವ ಪ್ರಮಾದಕ್ಕೆ ನೀವು ಕ್ಷಮೆಯಾಚಿಸಬೇಕು. ಇತಿಹಾಸದ ಸತ್ಯವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದಿದ್ದಾರೆ.

ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಡಿಕೆಶಿ
ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಡಿಕೆಶಿ

ಸುರ್ಜೆವಾಲಾ ಆಕ್ರೋಶ: ಜಾಹೀರಾತಿನಲ್ಲಿ ನೆಹರು ಭಾವಚಿತ್ರ ಕೈ ಬಿಟ್ಟಿರುವುದನ್ನ ಖಂಡಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಭಾರತದ 1 ನೇ ಪ್ರಧಾನಮಂತ್ರಿ ಮತ್ತು ರಾಷ್ಟ್ರ ನಿರ್ಮಾತೃ ಪಂಡಿತ್ ಜವಾಹರಲಾಲ್ ನೆಹರು ಅವರ ಮೇಲಿನ ಕೊನೆಯಿಲ್ಲದ ದ್ವೇಷವು ಅದರ ಉತ್ತುಂಗವನ್ನು ತಲುಪಿದೆ. ಬೊಮ್ಮಾಯಿ ಸರ್ಕಾರ ತನ್ನ ಅಸ್ತಿತ್ವವನ್ನೇ ನಿರಾಕರಿಸುವ ಮೂಲಕ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದಂದು, ಇದು ಇಂದಿನ ಆಡಳಿತಗಾರರ ಪಾತ್ರ ಮತ್ತು ಕೆಟ್ಟ ಆಲೋಚನಾ ಪ್ರಕ್ರಿಯೆಯನ್ನು ಪ್ರತಿಬಿಂಬಿಸುತ್ತದೆ ಎಂದು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ಜೀಸಸ್ : ಬಳ್ಳಾರಿಯಲ್ಲಿ ಆರೋಪಿ ಬಂಧಿಸಿದ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.