ETV Bharat / state

ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಾಳೆ ಗುದ್ದಲಿ ಪೂಜೆ: ಡಿ.ಆರ್. ಜಯರಾಜ್ - ಕಂಠೀರವ ಸ್ಟುಡಿಯೋ ಆವರಣದಲ್ಲಿ ನಟ ದಿ.ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಾಳೆ ಗುದ್ದಲಿ ಪೂಜೆ

ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಾಳೆ ಚಾಲನೆ ಸಿಗಲಿದೆ. ಈಗಾಗಲೇ ಮೈಸೂರಿನಲ್ಲಿ ಹಿರಿಯ ನಟ ದಿ. ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಡಿ.ಆರ್. ಜಯರಾಜ್ ಹೇಳಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ ಆರ್ ಜಯರಾಜ್

author img

By

Published : Feb 26, 2022, 3:18 PM IST

ಬೆಂಗಳೂರು : ಹಿರಿಯ ನಟ, ಮಾಜಿ ಸಚಿವ ದಿ. ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ನಾಳೆ ಗುದ್ದಲಿ ಪೂಜೆ ನಡೆಯಲಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್. ಜಯರಾಜ್ ತಿಳಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ ಆರ್ ಜಯರಾಜ್ ಹೇಳಿಕೆ

ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಪೂರ್ವ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ನಾಳೆ ಚಾಲನೆ ಸಿಗಲಿದೆ. ಈಗಾಗಲೇ ಮೈಸೂರಿನಲ್ಲಿ ಹಿರಿಯ ನಟ ದಿ. ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಗುರುತು ಮಾಡಲು ಮನವಿ ಮಾಡಲಾಗಿದೆ. ಎಲ್ಲಿ ನಿರ್ಮಾಣ ಮಾಡಬೇಕೆಂಬುದು ಸರ್ಕಾರದ ನಿರ್ಧಾರಕ್ಕೆ ಬಿಡಲಾಗಿದೆ. ಹೆಸರಘಟ್ಟ, ಮೈಸೂರಿನಲ್ಲಿ ಚಿತ್ರ ನಗರಿ ನಿರ್ಮಾಣ ಮಾಡುವ ಬಗ್ಗೆ ಗೊಂದಲ ಮೂಡಿದೆ. ಹಾಗಾಗಿ, ಇದನ್ನು ಸರ್ಕಾರವೇ ನಿರ್ಧರಿಸಬೇಕು. ಸರ್ಕಾರದ ತೀರ್ಮಾನಕ್ಕೆ ಚಿತ್ರರಂಗ ಬದ್ಧವಾಗಿರಲಿದೆ ಎಂದರು.

ಇದನ್ನೂ ಓದಿ : ಉಕ್ರೇನ್​ನಲ್ಲಿ ಪುತ್ರಿಗೆ ಸಿಗದ ಆಹಾರ.. ಅನ್ನ-ನೀರು ಬಿಟ್ಟು ತಂದೆ-ತಾಯಿಯಿಂದ ಪ್ರಾರ್ಥನೆ..

ಕಲಾವಿದರಿಗೆ ನಿವೇಶನಕ್ಕೆ ಮನವಿ : ಚಿತ್ರೋದ್ಯಮದ ಬಹಳಷ್ಟು ಕಲಾವಿದರಿಗೆ ನಿವೇಶನವೇ ಇಲ್ಲ. ಇದಕ್ಕಾಗಿ 500 ಎಕರೆ ಮೀಸಲಿಡಬೇಕು ಎಂದು ಕೇಳಿಕೊಂಡಿದ್ದೇವೆ ಎಂದು ಹೇಳಿದರು. ಕೋವಿಡ್ ನಿಂದಾಗಿ ಚಿತ್ರೋದ್ಯಮ ನಷ್ಟದಲ್ಲಿದೆ. ಪ್ರಸ್ತುತ 125 ಚಿತ್ರಗಳಿಗೆ ಸಬ್ಸಿಡಿ ಕೊಡಲಾಗುತ್ತಿದೆ. ಈಗ 175 ಚಿತ್ರಗಳಿಗೆ ಸಬ್ಸಿಡಿ ಕೊಡಬೇಕು ಎಂದು ಸಿಎಂ ಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಮೂರು ವರ್ಷಗಳಿಂದ ಸ್ಥಗಿತಗೊಳಿಸಿರುವ ಚಿತ್ರೋದ್ಯಮದ ಪ್ರಶಸ್ತಿಗಳನ್ನು ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಹೇಳಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.