ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ರೌಡಿಶೀಟರ್ ಕೋಗಿಲು ಭರತ್ ಹತ್ಯೆ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಸಂಘಟನೆಗಳು ಒತ್ತಾಯಿಸಿವೆ.
ಭರತ್ ಅಲಿಯಾಸ್ ಕೋಗಿಲು ಭರತ್ ಎಂಬ ರೌಡಿಶೀಟರ್ನನ್ನು ಸೋಮವಾರ ರಾತ್ರಿ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ವೈನ್ಸ್ ಮುಂಭಾಗ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.
ಭರತ್ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ಮೇಲೆ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ, ದರೋಡೆ, ಬೆದರಿಕೆಯೊಡ್ಡಿರುವ ಪ್ರಕರಣಗಳು ದಾಖಲಾಗಿವೆ. ಸದ್ಯ ಘಟನೆ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.