ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಾಡಹಬ್ಬ ದಸರಾದ ಮಹತ್ವವನ್ನು ಹೇಳುವ ಗೊಂಬೆಗಳ ಪ್ರದರ್ಶನವನ್ನು ಎಡಿಜಿಪಿ ಭಾಸ್ಕರ್ ರಾವ್ ಏರ್ಪಡಿಸಿದ್ದಾರೆ. ಈ ಮೂಲಕ ಬೇರೆ ಬೇರೆ ರಾಜ್ಯಗಳ ಜನರಿಗೂ ದಸರಾ ವೈಭವದ ಬಗ್ಗೆ ತಿಳಿಸುವ ಕೆಲಸ ಮಾಡಿದ್ದಾರೆ.
ಸಿಲಿಕಾನ್ ಸಿಟಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದವೀಗ ದಸರಾ ವೈಭವದಿಂದ ಕಂಗೊಳಿಸುತ್ತಿದೆ. ಇದಕ್ಕೆ ಕಾರಣ ರೈಲ್ವೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ್ ರಾವ್. ನಿಲ್ದಾಣದಲ್ಲಿ ದಸರಾ ಹಬ್ಬದ ಮಹತ್ವ ಸಾರುವ ಗೊಂಬೆಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ರೈಲು ನಿಲ್ದಾಣಕ್ಕೆ ಕೇವಲ ಕನ್ನಡಿಗರು ಮಾತ್ರವಲ್ಲದೆ ಬೇರೆ ಬೇರೆ ಭಾಷಿಗರು ಹಾಗೂ ವಿವಿಧ ರಾಜ್ಯಗಳ ಜನರು ಆಗಮಿಸುತ್ತಾರೆ.
ನಮ್ಮ ನಾಡಹಬ್ಬದ ಮಹತ್ವವನ್ನು ವಿವಿಧ ರಾಜ್ಯಗಳಿಗೆ ಸಾರುವ ಉದ್ದೇಶದಿಂದ ಇಂತಹ ಮಹತ್ವದ ಕಾರ್ಯಕ್ಕೆ ಭಾಸ್ಕರ್ ರಾವ್ ಕೈ ಹಾಕಿದ್ದಾರೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಸೆಲ್ಫಿಗೆ ಮುಗಿಬಿದ್ದ ಜನತೆ:
ರೈಲ್ವೆ ನಿಲ್ದಾಣಕ್ಕೆ ಬರುವ ಪ್ರತಿಯೊಬ್ಬ ಪ್ರಯಾಣಿಕನು ಗೊಂಬೆಗಳ ಪ್ರದರ್ಶನದ ಮುಂದೆ ನಿಂತು ಫೋಟೋ ತೆಗೆದುಕೊಳ್ಳುತ್ತಿದ್ದಾರೆ. ಇರದ ಜೊತೆಗೆ ರೈಲ್ವೆ ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: 2016ರ ಮೈಸೂರು ಕೋರ್ಟ್‌ನಲ್ಲಿನ ಬಾಂಬ್ ಬ್ಲಾಸ್ಟ್.. ಮೂವರು ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ..