ETV Bharat / state

ವಲಸಿಗರೇ ಹೆಚ್ಚಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನೇರ ಹಣಾಹಣಿ: ಮತ ಬ್ಯಾಂಕ್ ಬಲಪಡಿಸಿಕೊಳ್ಳಲು 'ಕೈ'​ ಹೋರಾಟ

author img

By

Published : Mar 20, 2023, 7:22 PM IST

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಮೂರು ಪಕ್ಷಗಳು ಬಲ ಪ್ರದರ್ಶನಕ್ಕೆ ಸಜ್ಜಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಇಲ್ಲಿ ಕಾಂಗ್ರೆಸ್ ಸಹ ತನ್ನ ಮತ ಬ್ಯಾಂಕ್ ಬಲಪಡಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.

Dasarahalli Constituency Profile
Dasarahalli Constituency Profile

ಬೆಂಗಳೂರು: ವಲಸಿಗರಿಂದಲೇ ಕೂಡಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರವು ದಕ್ಷಿಣ ಏಷ್ಯಾದಲ್ಲೇ ಅತಿದೊಡ್ಡ ಕೈಗಾರಿಕಾ ಪ್ರದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿರುವ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗಾರ್ಮೆಂಟ್ಸ್, ಸ್ಟೀಲ್ ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿವೆ. ದಾಸರಹಳ್ಳಿ ಕ್ಷೇತ್ರದಲ್ಲಿ ಉತ್ತರ ಭಾರತ, ಉತ್ತರ ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿದಂತೆ ಹೊರ ರಾಜ್ಯದವರು ಹೆಚ್ಚು ನೆಲೆಸಿದ್ದಾರೆ.

ಈ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಗನ್ ಮ್ಯಾನ್ ಆಗಿದ್ದ ಆರ್. ಮಂಜುನಾಥ್ ಜೆಡಿಎಸ್​ನಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿದ್ದಾರೆ. ಹಾಲಿ ಶಾಸಕ ಮಂಜುನಾಥ್ ಈ ಬಾರಿಯೂ ಜೆಡಿಎಸ್​ನಿಂದ ಸ್ಪರ್ಧೆಗೆ ಇಳಿದಿದ್ದು, ಈಗಾಗಲೇ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಇನ್ನು ಬಿಜೆಪಿಯಿಂದ ಎಸ್. ಮುನಿರಾಜು ಹಾಗೂ ಮಹಾನಗರ ಪಾಲಿಕೆ ಸದಸ್ಯ ಎನ್. ಲೋಕೇಶ್ ಅವರ ಹೆಸರುಗಳು ಕೇಳಿಬರುತ್ತಿವೆ. ಅದೇ ರೀತಿ ಕಾಂಗ್ರೆಸ್​ನಿಂದ ಪಿ.ಎನ್. ಕೃಷ್ಣಮೂರ್ತಿ, ನಾಗಲಕ್ಷ್ಮಿ ಸೇರಿದಂತೆ ಹಲವಾರು ಆಕಾಂಕ್ಷಿಗಳು ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್​ ಅನ್ನು ಮಣಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಕಸರತ್ತು ಆರಂಭಿಸಿವೆ.

ಕ್ಷೇತ್ರದ ರಾಜಕೀಯ ಇತಿಹಾಸ: ಕ್ಷೇತ್ರ ಪುನರ್ ವಿಂಗಡಣೆಯಾದ ಬಳಿಕ 2008 ರಲ್ಲಿ ಈ ಕ್ಷೇತ್ರದಲ್ಲಿ ಮೊದಲ ಬಾರಿ ಚುನಾವಣೆ ನಡೆದಿತ್ತು. ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಅವರು 2008 ಮತ್ತು 2013 ರಲ್ಲಿ ಎರಡು ಬಾರಿ ಗೆದ್ದಿದ್ದರು. 2008 ರಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಕೆ.ಸಿ. ಅಶೋಕ್ ಅವರನ್ನು ಸೋಲಿಸಿದ್ದ ಮುನಿರಾಜು ಅವರು, 2013 ರಲ್ಲಿ ವಿಧಾನಪರಿಷತ್​ನ ಮಾಜಿ ಸಭಾಪತಿ, ಸಂಸದೀಯ ಪಟು ಬಿ.ಎಲ್. ಶಂಕರ್ ಅವರನ್ನು ಪರಾಭವಗೊಳಿಸಿದ್ದರು. ಆದರೆ, 2018 ರ ಚುನಾವಣೆಯಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದ ಆರ್. ಮಂಜುನಾಥ್ ವಿರುದ್ಧ ಸುಮಾರು ಹತ್ತು ಸಾವಿರ ಮತಗಳ ಅಂತರದಿಂದ ಬಿಜೆಪಿಯ ಮುನಿರಾಜು ಸೋಲು ಕಂಡರು. ಇದರಿಂದ ಅವರ ಹ್ಯಾಟ್ರಿಕ್ ಕನಸು ಭಗ್ನಗೊಂಡಿತ್ತು. ಈ ಬಾರಿಯೂ ಚುನಾವಣಾ ಅಖಾಡಕ್ಕಿಳಿಯಲು ರೆಡಿಯಾಗುತ್ತಿರುವ ಮುನಿರಾಜು, ಕ್ಷೇತ್ರದಲ್ಲಿ ಸುತ್ತುತ್ತಿದ್ದಾರೆ.

Dasarahalli Constituency Profile
ದಾಸರಹಳ್ಳಿ ವಿಧಾನಸಭಾ ಕ್ಷೇತ್ರ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 2008 ರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ನಡೆದಿತ್ತು. 2013 ರಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ, 2018 ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆ ನಡೆದಿತ್ತು.

ಕ್ಷೇತ್ರದ ಸಮಸ್ಯೆಗಳು: ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಕೆ ಪರಿಹಾರ ಸಿಕ್ಕಿಲ್ಲ. ರಸ್ತೆ, ಬಹಳ ಮುಖ್ಯವಾಗಿ ಸಂಚಾರ ದಟ್ಟಣೆ ಹೆಚ್ಚಿದೆ. ಇನ್ನು ಒಳಚರಂಡಿ, ಕುಡಿಯುವ ನೀರಿನ ಸಮಸ್ಯೆಗಳು ಪರಿಹಾರವಾಗಿಲ್ಲ. ಪೀಣ್ಯ ಕೈಗಾರಿಕಾ ಪ್ರದೇಶವಾಗಿರುವ ಕಾರಣ ಈ ಭಾಗದಲ್ಲಿ ಲಾರಿಗಳು ಹೆಚ್ಚು ಸಂಚರಿಸುತ್ತವೆ. ಇದರ ಜೊತೆಗೆ ಇತರ ವಾಹನಗಳು ಸಂಚರಿಸುವುದರಿಂದ ಪ್ರತಿನಿತ್ಯ ಸಂಚಾರ ದಟ್ಟಣೆ ಇರುತ್ತದೆ. ಇದನ್ನು ಮನಗಂಡು ಸರ್ಕಾರ ತುಮಕೂರು ರಸ್ತೆಯಲ್ಲಿ ಫ್ಲೈಓವರ್​ನ ನಿರ್ಮಾಣ ಮಾಡಿದೆ. ಕೆಲವೇ ವರ್ಷಗಳಲ್ಲಿ ಅದು ರಿಪೇರಿಯಾಗಿದ್ದು, ಸರಿಯಾಗಿ ಉಪಯೋಗಕ್ಕೆ ಬರಲಿಲ್ಲ. ಹಾಗಾಗಿ, ಸಂಚಾರ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಇನ್ನು ಸರ್ಕಾರ ಈ ಕ್ಷೇತ್ರಕ್ಕೆ ಅಗತ್ಯವಿರುವಷ್ಟು ಅನುದಾನ ನೀಡಿಲ್ಲ ಎಂದು ಶಾಸಕ ಮಂಜುನಾಥ್ ಹಲವು ಬಾರಿ ಆರೋಪಿಸಿದ್ದರು. ಆದರೆ, ಅನುದಾನವನ್ನು ಸಮರ್ಪಕವಾಗಿ ಬಳಿಸಿಲ್ಲ ಎನ್ನುವುದು ಬಿಜೆಪಿ ಮುಖಂಡರ ವಾದವಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 700 ಕೋಟಿ ರೂ. ಅನುದಾನ ನೀಡಿದ್ದರು. ಇದು ಭಾರಿ ಚರ್ಚೆಗೂ ಗ್ರಾಸವಾಗಿತ್ತು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅನುದಾನವನ್ನು ತಡೆ ಹಿಡಿದಿದ್ದು ದೊಡ್ಡ ಸುದ್ದಿಯಾಗಿತ್ತು. ಉದ್ಯೋಗವನ್ನು ಹುಡುಕಿಕೊಂಡು ಹೊರ ಊರುಗಳಿಂದ ಬಂದಿರುವ ಬಡ ಮತ್ತು ಮಧ್ಯಮ ವರ್ಗದ ವಲಸಿಗರೇ ಈ ಕ್ಷೇತ್ರದಲ್ಲಿ ಹೆಚ್ಚು. ಟಿ.ದಾಸರಹಳ್ಳಿ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಬಾಗಲಕುಂಟೆ, ಪೀಣ್ಯ ಕೈಗಾರಿಕಾ ಪ್ರದೇಶ, ಚೊಕ್ಕಸಂದ್ರ, ಹೆಗ್ಗನಹಳ್ಳಿ, ರಾಜಗೋಪಾಲನಗರ ಈ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಈ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಸಿಕ್ಕರೂ ಹಲವಾರು ಸಮಸ್ಯೆಗಳು ಇವೆ.

ಕ್ಷೇತ್ರದ ಮತದಾರರೆಷ್ಟು?: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 4,32,751 ಮತದಾರರಿದ್ದು, ಅದರಲ್ಲಿ ಪುರುಷರು 2,32,065 ಹಾಗೂ ಮಹಿಳಾ ಮತದಾರರು 2,00,614 ಮಂದಿ ಇದ್ದಾರೆ. ತೃತೀಯ ಲಿಂಗಿಗಳು 72 ಮಂದಿ ಇದ್ದಾರೆ. ಇದೀಗ ನಾಲ್ಕನೇ ಬಾರಿ ನಡೆಯಲಿರುವ ಚುನಾವಣೆಯಲ್ಲಿ ಮೂರು ಪಕ್ಷಗಳು ಬಲ ಪ್ರದರ್ಶನಕ್ಕೆ ಸಜ್ಜಾಗುತ್ತಿದ್ದು, ಅದರಲ್ಲೂ ಮುಖ್ಯವಾಗಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಇಲ್ಲಿ ಕಾಂಗ್ರೆಸ್ ಸಹ ತನ್ನ ಮತ ಬ್ಯಾಂಕ್ ಬಲಪಡಿಸಿಕೊಳ್ಳಲು ಹೋರಾಟ ನಡೆಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ನೇರ ನೇರ ಹಣಾಹಣಿಯೇ ಅಥವಾ ತ್ರಿಕೋನ ಸ್ಪರ್ಧೆ ಏರ್ಪಡುವುದೇ ಎಂಬುದು ಕಾದುನೋಡಬೇಕಿದೆ.

ಇದನ್ನೂ ಓದಿ: ಸಂಚಾರ ದಟ್ಟಣೆಯೇ ದೊಡ್ಡ ಸವಾಲು: ಯಾರಿಗೆ ಒಲಿಯಲಿದೆ ಕೆ.ಆರ್. ಪುರ ಕ್ಷೇತ್ರ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.