ETV Bharat / state

ಪಿಎಸ್ಐ ಮರುಪರೀಕ್ಷೆಗೆ ದಿನಾಂಕ ನಿಗದಿ; ಅಭ್ಯರ್ಥಿಗಳು ಪಾಲಿಸಬೇಕಾದ ಕಡ್ಡಾಯ ನಿಯಮಗಳಿವು - PSI Exam

ಪಿಎಸ್ಐ ಮರುಪರೀಕ್ಷೆಗೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿದೆ. ಈ ನಿಟ್ಟಿನಲ್ಲಿ ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
author img

By ETV Bharat Karnataka Team

Published : Jan 8, 2024, 10:14 PM IST

Updated : Jan 9, 2024, 9:45 AM IST

ಬೆಂಗಳೂರು : ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ನೇರ ನೇಮಕಾತಿಯ ಮರುಪರೀಕ್ಷೆಗೆ ದಿನಾಂಕ ಪ್ರಕಟಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಪಿಎಸ್ಐ ನೇಮಕಾತಿ ಮರುಪರೀಕ್ಷೆಗೆ ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಆದೇಶಿಸಿತ್ತು. ಜನವರಿ 23ರಂದು ಬೆಳಗ್ಗೆ 10.30 ಮಧ್ಯಾಹ್ನ 12ರ ವರೆಗೆ ಪೇಪರ್ 1 ಹಾಗೂ‌ ಮಧ್ಯಾಹ್ನ 1 ರಿಂದ 2.30ರ ವರೆಗೆ ಪೇಪರ್ 2ರ ಪರೀಕ್ಷೆ ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳು ಪಾಲಿಸಬೇಕಾದ ಕಡ್ಡಾಯ ನಿಯಮಗಳು :

  • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಗ್ಗೆ 8.30ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ.
  • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ (ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ) ಹಾಜರುಪಡಿಸಿದರೆ ಮಾತ್ರ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅನುಮತಿಸಲಾಗುತ್ತದೆ.
  • ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಗಳನ್ನು ನಿಷೇಧಿಸಲಾಗಿರುವುದರಿಂದ ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
  • ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟುಗಳನ್ನು ಧರಿಸುವಂತೆ ಹಾಗೂ ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸದಂತೆ ತಿಳಿಸಲಾಗಿದೆ.
  • ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
  • ವಾಟರ್ ಬಾಟಲ್​ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ.
  • ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್‌ಸೈಟ್​ನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪಾಲಿಸತಕ್ಕದ್ದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಜ.13 ರಂದು ಕೆ-ಸೆಟ್ ಪರೀಕ್ಷೆ: ಮಾಂಗಲ್ಯ ಸರ, ಕಾಲುಂಗುರಕ್ಕೆ ಅನುಮತಿ, ಇನ್ನುಳಿದ ನಿಯಮಗಳೇನು ತಿಳಿಯಿರಿ

Last Updated : Jan 9, 2024, 9:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.