ಬೆಂಗಳೂರು: ಹಿಂದುಳಿದ ವರ್ಗಗಳ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಕೆ.ಎ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮತದಾರರ ಪರಿಷ್ಕರಣೆ ಅಕ್ರಮ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅಮಾನತುಗೊಳಿಸಲಾಗಿತ್ತು. ಬಳಿಕ ಸಂಗಪ್ಪ ಅವರಿಗೆ ಪ್ರಭಾರಿ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಇದೀಗ ದಯಾನಂದ ಕೆ.ಎ.ರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ : ಪಿಎಸ್ಐ ನೇಮಕಾತಿ ಹಗರಣ.. ಬಿಜೆಪಿ ಸರ್ಕಾರದಿಂದ ದೊಡ್ಡ ಭ್ರಷ್ಟಾಚಾರ : ಪ್ರಿಯಾಂಕ ಖರ್ಗೆ