ETV Bharat / state

ಹೈಕೋರ್ಟ್ ಆದೇಶ ಪಾಲಿಸದ ಡಿಸಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ - ನ್ಯಾಯಾಂಗ ನಿಧನೆ

ಅಧಿಕಾರಿಗಳಿಗೆ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಹೇಳಿಕೊಡಿ. ನ್ಯಾಯಾಲಯ ಈ ಹಿಂದೆ ಆದೇಶ ಹೊರಡಿಸುವ ಮುನ್ನ ಹೇಳಬೇಕಿದ್ದ ವಿಚಾರಗಳನ್ನು ಈಗ ಹೇಳಲು ಬರುತ್ತಿದ್ದಾರೆ. ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶಗಳ ಬಗ್ಗೆ ತಿಳಿದಂತೆ ಕಾಣುವುದಿಲ್ಲ ಎಂದು ಪೀಠ ಅಸಮಾಧಾನ ಹೊರಹಾಕಿತು.

High court
ಹೈಕೋರ್ಟ್
author img

By

Published : Feb 18, 2021, 8:34 PM IST

ಬೆಂಗಳೂರು: ನ್ಯಾಯಾಲಯ ಆದೇಶ ನೀಡಿದ ನಂತರವೂ ವ್ಯಕ್ತಿಯೊಬ್ಬರಿಗೆ ಜಮೀನಿನ ಖಾತೆ ಮಾಡಿಕೊಡದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಕೇಳಿಬಂದಿದೆ.

ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಆರೋಪಿಸಿ ಮೈಸೂರಿನ ಎಚ್.ಬಿ. ಅಶೋಕ್ ಸೇರಿ 5 ಮಂದಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಆರೋಪಿತ ಅಧಿಕಾರಿ ರೋಹಿಣಿ ಸಿಂಧೂರಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, ಜಮೀನು ಖಾತೆ ಮಾಡಿಕೊಡಲು ಹಲವು ಸಮಸ್ಯೆಗಳಿವೆ. ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ, ವಿವಾದಿತ ಭೂಮಿಗೆ ಹಲವರು ಹಕ್ಕು ಸಾಧನೆ ಮಾಡಲು ಮುಂದಾಗಿದ್ದಾರೆ. ಹೀಗಾಗಿ ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಹಾಗೂ ನ್ಯಾಯಾಲಯದ ಆದೇಶ ಪಾಲಿಸಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಇದೀಗ ನೀವು ದಾಖಲೆಗಳನ್ನು ಏಕೆ ಸಲ್ಲಿಸುತ್ತೀರಿ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ನೀಡಿದೆ. ಈ ಹಂತದಲ್ಲಿ ನೀವು ದಾಖಲೆಗಳನ್ನು ಪರಿಶೀಲಿಸುವುದು, ಸಲ್ಲಿಸುವುದು ಎಂದರೆ ಏನರ್ಥ. ಇಂತಹ ಅಧಿಕಾರ ನಿಮಗೆ ಹೇಗೆ ಲಭ್ಯವಿದೆ. ನಿಮಗೆ ನ್ಯಾಯಾಲಯದ ಆದೇಶ ಪಾಲಿಸಬೇಕೆಂಬ ಇಚ್ಛೆಯೇ ಇದ್ದಂತಿಲ್ಲ ಎಂದಿತು.

ಅಲ್ಲದೇ, ಸರ್ಕಾರಿ ವಕೀಲರನ್ನು ಉದ್ದೇಶಿಸಿ, ಅಧಿಕಾರಿಗಳಿಗೆ ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಹೇಳಿಕೊಡಿ. ನ್ಯಾಯಾಲಯ ಈ ಹಿಂದೆ ಆದೇಶ ಹೊರಡಿಸುವ ಮುನ್ನ ಹೇಳಬೇಕಿದ್ದ ವಿಚಾರಗಳನ್ನು ಈಗ ಹೇಳಲು ಬರುತ್ತಿದ್ದಾರೆ. ಅಧಿಕಾರಿಗಳಿಗೆ ನ್ಯಾಯಾಲಯದ ಆದೇಶಗಳ ಬಗ್ಗೆ ತಿಳಿದಂತೆ ಕಾಣುವುದಿಲ್ಲ. ಜತೆಗೆ ತಾವು ಅಂದುಕೊಂಡದ್ದು ಹಾಗೂ ನಡೆದುಕೊಂಡದ್ದೇ ಸರಿ ಎಂದು ಭಾವಿಸಿದ್ದಾರೆ. ಅಧಿಕಾರಿಗಳು ನ್ಯಾಯಾಲಯದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿಕೊಡಿ ಎಂದು ಪೀಠ ಬೇಸರ ವ್ಯಕ್ತಪಡಿಸಿತು.

ಪ್ರಕರಣದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ತಹಶೀಲ್ದಾರ್ ಕೆ.ಆರ್. ರಕ್ಷಿತ್ ನ್ಯಾಯಾಲಯದ ಆದೇಶವನ್ನು ತಿಳಿದಿದ್ದೂ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರೂ ಆರೋಪಿ ಅಧಿಕಾರಿಗಳ ವಿರುದ್ಧ ಮಾರ್ಚ್ 8ರಂದು ಆರೋಪ ನಿಗದಿಪಡಿಸಲಾಗುವುದು. ಆದ್ದರಿಂದ ಇಬ್ಬರೂ ಅಧಿಕಾರಿಗಳು ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಿರಬೇಕು ಎಂದು ಪೀಠ ಆದೇಶಿಸಿತು. ಇದೇ ವೇಳೆ ಇತರೆ ಮೂರು ನ್ಯಾಯಾಂಗ ನಿಂದನೆ ಅರ್ಜಿಗಳಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿತು.

ಪ್ರಕರಣದ ಹಿನ್ನೆಲೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಕುರುಬಾರಹಳ್ಳಿಯಲ್ಲಿ ಅರ್ಜಿದಾರ ಅಶೋಕ್ ಸೇರಿದಂತೆ ಕೆಲ ವ್ಯಕ್ತಿಗಳು ಬಿ ಖರಾಬ್ ಜಮೀನು ಖಾತೆಗೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಿಲ್ಲಾಧಿಕಾರಿ ಅರ್ಜಿಗಳನ್ನು ತಿರಸ್ಕರಿಸಿದ್ದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಪೀಠ ಅರ್ಜಿದಾರರಿಗೆ ಖಾತೆ ಮಾಡಿಕೊಡುವಂತೆ 2020ರ ಜೂನ್ 19ರಂದು ಆದೇಶಿಸಿತ್ತು.

ಆದರೆ ಅಧಿಕಾರಿ ಖಾತೆ ಮಾಡಿಕೊಟ್ಟಿರಲಿಲ್ಲ. ಬದಲಿಗೆ ಜಿಲ್ಲಾಧಿಕಾರಿ ಖಾತೆ ಮಾಡಿಕೊಡುವ ಸಂಬಂಧ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ ಬರೆದಿದ್ದರು. ಆದರೆ ಸರ್ಕಾರ ಈ ಸಂಬಂಧ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಜತೆಗೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿಯನ್ನೂ ಸಲ್ಲಿಸಿರಲಿಲ್ಲ. ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕೇವಲ ಮೌಖಿಕವಾಗಿ ಕಾರಣಗಳನ್ನು ನೀಡುತ್ತಿರುವುದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಶಾಸಕ ಯತ್ನಾಳ್ ಮೇಲೆ ಯಾವ 'ಆಸಕ್ತಿ'ಯೂ ಇಲ್ಲ: ಅರುಣ್ ಸಿಂಗ್​​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.