ETV Bharat / state

600 ಕೆಜಿಗೂ ಹೆಚ್ಚು ಪಟಾಕಿ ಸಂಗ್ರಹಿಸಿ ಮಾರಾಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಬಾರದು: ಹೈಕೋರ್ಟ್

High court on firecrackers: ಪಟಾಕಿ ಸಂಗ್ರಹಿಸಿ ಮಾರಾಟಕ್ಕೆ ನೀಡಿದ್ದ ಪರವಾನಿಗೆಯನ್ನು ರದ್ದುಪಡಿಸಿರುವುದನ್ನು ಪ್ರಶ್ನಿಸಿ ಕಲಾವತಿ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್
ಹೈಕೋರ್ಟ್
author img

By ETV Bharat Karnataka Team

Published : Nov 12, 2023, 7:08 AM IST

ಬೆಂಗಳೂರು: 600 ಕೆಜಿಗೂ ಹೆಚ್ಚು ತೂಕದ ಪಟಾಕಿಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಜಿಲ್ಲಾಧಿಕಾರಿಗಳು ಪರವಾನಿಗೆ ನೀಡಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಇತ್ತೀಚೆಗೆ ಅತ್ತಿಬೆಲೆಯಲ್ಲಿ ಅಗ್ನಿ ದುರಂತ ನಡೆದು ಹಲವರು ಸಾವನ್ನಪ್ಪಿದ್ದ ಬಳಿಕ ಪರವಾನಿಗೆ ರದ್ದುಪಡಿಸಿದ್ದ ಕ್ರಮವನ್ನು ಪ್ರಶ್ನಿಸಿ ಕಲಾವತಿ ಎಂಬುವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಜೊತೆಗೆ, 600 ಕೆಜಿ ಪಟಾಕಿ ಸಂಗ್ರಹಿಸುವ ಸ್ಥಳದಲ್ಲಿ 1000 ಕೆಜಿ ತೂಕದ ಪಟಾಗಿ ಸಂಗ್ರಹಿಸಿ ಮಾರಾಟಕ್ಕೆ ಜಿಲ್ಲಾಧಿಕಾರಿಗಳು ಪರವಾನಿಗೆ ನೀಡಿದ್ದ ಕ್ರಮಕ್ಕೆ ನ್ಯಾಯಪೀಠ ಅಚ್ಚರಿ ವ್ಯಕ್ತಪಡಿಸಿದೆ. ಅಲ್ಲದೆ, ಅರ್ಜಿದಾರರಿಗೆ 1000 ಕೆಜಿಗೂ ಹೆಚ್ಚು ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಅವಕಾಶ ನೀಡಿರುವುದು ಕಾನೂನಿನ ವಿರುದ್ಧವಾಗಿದೆ. ಆದರೂ, ಅರ್ಜಿದಾರರಿಗೆ 600 ಕೆಜಿ ಪಟಾಕಿ ಸಂಗ್ರಹ ಮತ್ತು ಮಾರಾಟಕ್ಕೆ ಮಾತ್ರ ಅವಕಾಶ ನೀಡಿದೆ. ಪಟಾಕಿಗಳು ಸಂಗ್ರಹ ಮಾಡುವಲ್ಲಿ ಸ್ವಲ್ಪ ನಿರ್ಲಕ್ಷ್ಯ ವಹಿಸಿದರು ಬೆಂಕಿಯ ಕಿಡಿ ಮನೆಯನ್ನೇ ಸುಡಬಹುದಾಗಿದೆ. ಹೀಗಾಗಿ ಪರವಾನಿಗೆ ನೀಡುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸಲು ಇದು ಸಕಾಲವಾಗಿದೆ ಎಂದು ಪೀಠ ಹೇಳಿದೆ.

ಅಷ್ಟೇ ಅಲ್ಲದೆ, ಪಟಾಕಿ ಮಾರಾಟಕ್ಕೆ ಪರವಾನಿಗೆ ನೀಡುವ ಸಂದರ್ಭದಲ್ಲಿ ಸ್ಫೋಟಕಗಳ ಕಾಯಿದೆಯಲ್ಲಿ ಉಲ್ಲೇಖಿಸಿರುವಂತೆ ಪಟಾಕಿ ಉಗ್ರಾಣಗಳು ವಸತಿ ಪ್ರದೇಶದಿಂದ ದೂರದಲ್ಲಿರಬೇಕು. ಅಗ್ನಿ ಶಾಮಕಗಳು ಲಭ್ಯವಿರುವಂತಿರಬೇಕು. ಪಟಾಕಿ ಸಂಗ್ರಹಿಸಿದ ಉಗ್ರಾಣಗಳಲ್ಲಿ ನೀರಿನ ಬಕೆಟ್‌ಗಳ ಸಂಗ್ರಹವೂ ಇರಬೇಕು. ಪರವಾನಿ ಪಡೆದ ಅಂಗಡಿಗಳಲ್ಲಿ ನಿಯಮಗಳು ಹಾಗೂ ಸರಕ್ಷತಾ ಕ್ರಮಗಳು ಉಲ್ಲಂಘನೆ ಕಂಡು ಬಂದಲ್ಲಿ ಕಾಲ ಕಾಲಕ್ಕೆ ಪರಿಶೀಲನೆ ನಡೆಸಿ ಅಂತಹ ಪರವಾನಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೆಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು ? : ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ವೀರನಹಳ್ಳಿ ಗ್ರಾಮದ ನಿವಾಸಿ ಕಲಾವತಿ ಎಂಬುವರಿಗೆ ಪಟಾಕಿ ಸಂಗ್ರಹಿಸಿ ಮಾರಾಟಕ್ಕೆ ನೀಡಿದ್ದ ಪರವಾನಿಗೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ರದ್ದುಪಡಿಸಿದ್ದರು. ಇದನ್ನು ಪ್ರಶ್ನಿಸಿ ಕಲಾವತಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪರವಾನಿಗೆ ನೀಡುವುದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಎಲ್ಲ ನಿರಾಕ್ಷೇಪಣೆಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿ ಪರವಾನಿಗೆ ನೀಡಿದ್ದಾರೆ. ಆದರೆ, ಪರವಾನಿಗೆ ರದ್ದುಗೊಳಿಸುವುದಕ್ಕೂ ಮುನ್ನ ನಮ್ಮ ವಾದವನ್ನು ಆಲಿಸಿಲ್ಲ. ಒಂದು ಅಹಿತಕರ ಘಟನೆಯಿಂದಾಗಿ ಇತರೆ ಪರವಾನಿಗೆ ಹೊಂದಿರುವವರನ್ನು ಶಿಕ್ಷೆಗೆ ಗುರಿಪಡಿಸಲಾಗುತ್ತಿದೆ. ಆದ್ದರಿಂದ ಪರವಾನಿಗೆ ಮತ್ತೆ ನೀಡುವಂತೆ ಸೂಚನೆ ನೀಡಬೇಕು ಎಂದು ಕೋರಿದ್ದದ್ದರು.

ಇದನ್ನೂ ಓದಿ : ಪತಿಗೆ ಉದ್ಯೋಗವಿಲ್ಲ ಎಂಬ ಕಾರಣದಿಂದ ಪತ್ನಿಗೆ ಜೀವನಾಂಶ ನಿರಾಕರಿಸಲಾಗದು: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.