ಬೆಂಗಳೂರು: ಅಪಘಾತದಲ್ಲಿ ಅಕಾಲ ಮರಣಕ್ಕೆ ತುತ್ತಾದ ಖಾಸಗಿ ವಾಹಿನಿಯ ರಾಮನಗರ ಜಿಲ್ಲಾ ವರದಿಗಾರ ಹನುಮಂತ ಅವರ ಕುಟುಂಬದ ನೆರವಿಗೆ ಧಾವಿಸಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ವೈಯಕ್ತಿಕ ನೆರವು ಘೋಷಿಸಿದ್ದಾರೆ.
ಹನುಮಂತ ಅವರ ಅಕಾಲಿಕ ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ಸದಾ ಕ್ರಿಯಾಶೀಲ, ಉತ್ಸಾಹಿ ಪತ್ರಕರ್ತರಾಗಿದ್ದ ಅವರು, ದಿಟ್ಟ ಮತ್ತು ಪ್ರಾಮಾಣಿಕತೆಯನ್ನು ನಂಬಿದ್ದರು. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಹನುಮಂತ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಹನುಮಂತ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದಲೂ ನೆರವು ಕೊಡಿಸಲಾಗುವುದು ಎಂದು ಅವರು ಹೇಳಿದ್ದಾರೆ.