ETV Bharat / state

ಎಸ್‌ಜೆಪಿ ಕಾಲೇಜ್ ಕ್ಯಾಂಪಸ್​ಗೆ 'ನಾಲ್ವಡಿ ಕ್ಯಾಂಪಸ್'‌ ಎಂದು ನಾಮಕರಣ: ಅಶ್ವತ್ಥ ನಾರಾಯಣ - ಸಕಾರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಟ್ಟಡಕ್ಕೆ ಶಂಕು ಸ್ಥಾಪನೆ

ವಿವಿಧ ಸಂಸ್ಥೆಗಳಿರುವ ಎಸ್​ಜೆಪಿ ಕ್ಯಾಂಪಸ್‌ಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ಮರಣಾರ್ಥ ʼನಾಲ್ವಡಿ ಕ್ಯಾಂಪಸ್‌ʼ ಎಂದು ನಾಮಕರಣ ಮಾಡಲು ನಿರ್ಧರಿಸಿದ್ದೇವೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

DCM Ashwath Narayan lays foundation stone for Govt Collage
ಎಸ್‌ಜೆಪಿ ಕಾಲೇಜ್ ಕ್ಯಾಂಪಸ್​ಗೆ 'ನಾಲ್ವಡಿ ಕ್ಯಾಂಪಸ್'‌ ಎಂದು ನಾಮಕರಣ
author img

By

Published : Feb 26, 2021, 7:26 PM IST

ಬೆಂಗಳೂರು: ಇಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನು ಮಾರ್ಚ್‌ 2ರಂದು ಘೋಷಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ನೂತನ ಪೂರಕ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿದ ಅವರು, ಇಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ನಾವು ದೇಶದಲ್ಲೇ ಮುಂಚೂಣಿಯಲ್ಲಿದ್ದೇವೆ. ಹೀಗಾಗಿ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ. ಆ ನೀತಿ ಬಂದ ಬಳಿಕ ಈ ಕ್ಷೇತ್ರದಲ್ಲೂ ಕ್ರಾಂತಿಕಾರಕ ಬದಲಾವಣೆಗಳು ಆಗುತ್ತವೆ. ಇಂಜಿನಿಯರಿಂಗ್‌ ಸಂಶೋಧನೆ ಮತ್ತು ಅಭಿವೃದ್ಧಿಗೆ ಇನ್ನೂ ಹೆಚ್ಚು ಉತ್ತೇಜನ ನೀಡಬೇಕು. ಸಬ್ಸಿಡಿ, ರಿಯಾಯಿತಿಗಳನ್ನು ಕೊಡುವ ಮೂಲಕ ತಂತ್ರಜ್ಞಾನದಲ್ಲಿ ಬಹುದೊಡ್ಡ ವ್ಯತ್ಯಾಸ ತರುವ ಉದ್ದೇಶ ಸರ್ಕಾರದ್ದು ಎಂದರು.

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ

ನಾಲ್ವಡಿ ಕೃಷ್ಣರಾಜ ಒಡೆಯರ್‌ ಕ್ಯಾಂಪಸ್:‌ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜನ್ನು ಇನ್ನೂ ಉನ್ನತ ದರ್ಜೆಗೆ ಏರಿಸಲಾಗುವುದು. ಈ ಕ್ಯಾಂಪಸ್​​ನಲ್ಲಿ ಡಿಪ್ಲೋಮಾ, ಇಂಜಿನಿಯರಿಂಗ್‌ ಸೇರಿ ಪ್ರತ್ಯೇಕವಾಗಿ ನಾಲ್ಕಾರು ಸಂಸ್ಥೆಗಳು ಇವೆ. ಹೀಗಾಗಿ ಈ ಕ್ಯಾಂಪಸ್‌ಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ಮರಣಾರ್ಥ ʼನಾಲ್ವಡಿ ಕ್ಯಾಂಪಸ್‌ʼ ಎಂದು ನಾಮಕರಣ ಮಾಡಲು ನಿರ್ಧರಿಸಿದ್ದೇವೆ. ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್‌, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್‌ ಜೊತೆ ಮಾತುಕತೆ ನಡೆಸಿ ಅದನ್ನು ಘೋಷಿಸಲಾಗುವುದು ಎಂದು ತಿಳಿಸಿದರು.

ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನ: ಬಜೆಟ್​ನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಅನುದಾನ ಕೋರಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈವರೆಗೆ ಒಟ್ಟಾರೆ ಬಜೆಟ್‌ ಗಾತ್ರದಲ್ಲಿ ಶೇ. 2ರಷ್ಟು ಮೊತ್ತವನ್ನು ಉನ್ನತ ಶಿಕ್ಷಣಕ್ಕೆ ನೀಡಲಾಗುತ್ತಿತ್ತು. ಈಗ ಶೇ. 3.5ರಷ್ಟು ಅನುದಾನ ಕೊಡಿ ಎಂದು ಕೇಳಿದ್ದೇವೆ. ಶಿಕ್ಷಣಕ್ಕೆ ಸೌಲಭ್ಯಗಳನ್ನು ಕಲ್ಪಿಸುವ ವಿಚಾರದಲ್ಲಿ ಸರ್ಕಾರ ಚೌಕಾಸಿ ಮಾಡುವುದಿಲ್ಲ ಎಂದು ಹೇಳಿದರು.

ಡಿಪ್ಲೊಮಾ ಪಠ್ಯ ಪರಿಷ್ಕರಣೆ: ಗುಣಮಟ್ಟದ ಬೋಧನೆ-ಕಲಿಕೆಯ ಗುರಿಯೊಂದಿಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಂತ್ರಿಕ ಶಿಕ್ಷಣ ಮುಗಿದ ಕೂಡಲೇ ಉದ್ಯೋಗ ಸಿಗುವಂತಹ ವ್ಯವಸ್ಥೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಉದ್ಯೋಗ ಮಾರುಕಟ್ಟೆಗೆ ತಕ್ಕಂತೆ ಈಗಾಗಲೇ ಡಿಪ್ಲೋಮಾ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿದೆ. ಆ ಪಠ್ಯವನ್ನು ರಾಷ್ಟ್ರೀಯ ಕೌಶಲ್ಯ ಮಾನದಂಡಕ್ಕೆ ಅನುಗುಣವಾಗಿ ರೂಪಿಸಲಾಗಿದೆ. ಟೆಕ್ನಾಲಜಿ ಬೆಳೆದ ಹಾಗೆಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಉನ್ನತೀಕರಣವನ್ನೂ ಕೈಗೊಳ್ಳಬೇಕು. ಹಾಗೆಯೇ ಒದಗಿಸಲಾಗುತ್ತಿರುವ ಸೌಲಭ್ಯಗಳನ್ನೂ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಡಿಸಿಎಂ ಸಲಹೆ ನೀಡಿದರು.

ಗುಣಮಟ್ಟದ ಕಲಿಕೆಯ ಬಗ್ಗೆ ಮಾತನಾಡುವ ನಾವು, ಗುಣಮಟ್ಟದ ಬೋಧನೆಯ ಬಗ್ಗೆಯೂ ಮಾತನಾಡಬೇಕು. ಹಾಗೆ ಆಗಬೇಕಾದರೆ ಬೋಧಕರ ಎಲ್ಲಾ ಸಮಸ್ಯೆಗಳನ್ನು ನಿವಾರಿಸಬೇಕು. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿ ವೇತನ ಪರಿಷ್ಕರಣೆ ಮಾಡಲಾಯಿತು. ಇನ್ನೂ ಅನೇಕ ವಿಷಯಗಳಲ್ಲಿ ಬೋಧಕರಿಗೆ ಪೂರಕವಾಗಿ ಸರ್ಕಾರ ಕೆಲಸ ಮಾಡಿದೆ ಎಂದರು.‌

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಸಂಸ್ಥೆಗೆ ದೊಡ್ಡ ಇತಿಹಾಸವಿದೆ. ಇಡೀ ಏಷ್ಯಾದಲ್ಲಿ ಮಹಿಳೆಯರಿಗಾಗಿ ಆರಂಭವಾದ ಎರಡನೇ ಪಾಲಿಟೆಕ್ನಿಕ್‌ ಕಾಲೇಜು ಇದು. ದಕ್ಷಿಣ ಭಾರತದಲ್ಲಿ ಮೊದಲನೇಯದು. ಐತಿಹಾಸಿಕ ಮಹತ್ವ ಹೊಂದಿರುವ ಶ್ರೇಷ್ಠ ಶಿಕ್ಷಣ ಸಂಸ್ಥೆ. ಇಂತಹ ಸಂಸ್ಥೆಯ ಪ್ರಾಂಶುಪಾಲರಾದ ಸಲ್ಮಾ ಅವರು ನಾಳೆ (ಫೆ.28) ನಿವೃತ್ತರಾಗುತ್ತಿದ್ದಾರೆ. ಅವರಿಗೆ ಗೌರವ ನೀಡಲು ಇಂದೇ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಡಿಸಿಎಂ ಹೇಳಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.