ETV Bharat / state

ರಾಮನಗರ ರೇಷ್ಮೆ ಮಾರುಕಟ್ಟೆಗೆ ಡಿಪಿಆರ್: ಮಾವು ಸಂಸ್ಕರಣ ಘಟಕಕ್ಕೆ ಜಾಗ ಕೊಟ್ಟ ತೋಟಗಾರಿಕೆ ಇಲಾಖೆ - DCM Ashwath Narayan meeting

ಅತ್ಯುತ್ತಮ ತಂತ್ರಜ್ಞಾನವನ್ನು ಬಳಸಿಕೊಂಡು ರಾಮನಗರ ತಾಲೂಕಿನ ಕೈಲಾಂಚ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಮಾವು ಸಂಸ್ಕರಣಾ ಘಟಕಕ್ಕೆ ರೇಷ್ಮೆ ಇಲಾಖೆ ತನ್ನ ಅಧೀನದಲ್ಲಿನ 25 ಎಕರೆ ಭೂಮಿಯನ್ನು ತೋಟಗಾರಿಕಾ ಇಲಾಖೆಗೆ ಹಸ್ತಾಂತರ ಮಾಡಲು ಸಮ್ಮತಿಸಿದೆ.

Meeting
Meeting
author img

By

Published : Oct 15, 2020, 10:23 PM IST

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಜಾಗತಿಕ ಗುಣಮಟ್ಟದ ಸುಸಜ್ಜಿತ ರೇಷ್ಮೆ ಮಾರುಕಟ್ಟೆ ಹಾಗೂ ಮಾವು ಸಂಸ್ಕರಣ ಘಟಕಗಳ ಸ್ಥಾಪನೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ/ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ರೇಷ್ಮೆ ಮತ್ತು ತೋಟಗಾರಿಕೆ ಸಚಿವ ಡಾ.ಕೆ.ಸಿ.ನಾರಾಯಣಗೌಡರ ಜೊತೆ ಸಭೆ ನಡೆಸಿದರು.

ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಈಗಾಗಲೇ ಸಮಗ್ರ ಯೋಜನಾ ವರದಿ (ಡಿಪಿಆರ್)‌ ತಯಾರಿಸಲು ಟೆಂಡರ್‌ ಕರೆಯಲಾಗಿದ್ದು, ಅದು ಮುಗಿದ ಬಳಿಕ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು. ರಾಮನಗರ ಮತ್ತು ಚನ್ನಪಟ್ಟಣದ ನಡುವೆ 11 ಎಕರೆ ಜಾಗ ಗುರುತಿಸಲಾಗಿದೆ. ಅಲ್ಲಿಯೇ ಸುಸಜ್ಜಿತ ಮಾರುಕಟ್ಟೆ ತಲೆ ಎತ್ತಲಿದೆ. ಇದಕ್ಕಾಗಿ ನಬಾರ್ಡ್‌ 50 ಕೋಟಿ ರೂ. ಸಾಲ ನೀಡುತ್ತಿದ್ದು, ಸರ್ಕಾರ ಯಾವುದೇ ಹೂಡಿಕೆ ಮಾಡುತ್ತಿಲ್ಲ ಎಂದು ಡಿಸಿಎಂ ತಿಳಿಸಿದರು.

ಈ ಜಾಗದಲ್ಲಿ ರೇಷ್ಮೆಯ ದ್ವಿತಳಿ, ಮಿಶ್ರತಳಿ ಗೂಡು ಖರೀದಿ ಕೇಂದ್ರಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲಾಗುವುದು. ಮಾರುಕಟ್ಟೆಗೆ ಬರುವ ರೈತರು ರಾತ್ರಿ ವೇಳೆ ತಂಗುವ ವಸತಿ ವ್ಯವಸ್ಥೆ ಜೊತೆಗೆ ಸುಲಭ ಹಣಕಾಸು ವ್ಯವಹಾರಕ್ಕೆ ಬ್ಯಾಂಕಿಂಗ್‌ ಸೌಕರ್ಯ ಕಲ್ಪಿಸಲಾಗುವುದು ಎಂದರು.

ದತ್ತಾಂಶ ಸಂಗ್ರಹ:

ಮಾರುಕಟ್ಟೆಗೆ ಬಂದು ರೇಷ್ಮೆಗೂಡು ಬೆಳೆಗಾರರ ಹಾಗೂ ಗೂಡಿನ ದತ್ತಾಂಶ ಸಂಗ್ರಹ ಮಾಡಲಾಗುವುದು. ಅತ್ಯುತ್ತಮ ಗೂಡು ಉತ್ಪಾದನೆ ಮಾಡುವ ರೈತರ ಮಾಹಿತಿ ಸಮಗ್ರವಾಗಿ ಸಿಗುವಂತೆ ನೋಡಿಕೊಳ್ಳಲಾಗವುದು ಎಂದು ಡಿಸಿಎಂ ತಿಳಿಸಿದರು.

ಮಾವು ಸಂಸ್ಕರಣಾ ಘಟಕ:

ಅತ್ಯುತ್ತಮ ತಂತ್ರಜ್ಞಾನವನ್ನು ಬಳಸಿಕೊಂಡು ರಾಮನಗರ ತಾಲೂಕಿನ ಕೈಲಾಂಚ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಮಾವು ಸಂಸ್ಕರಣಾ ಘಟಕಕ್ಕೆ ರೇಷ್ಮೆ ಇಲಾಖೆ ತನ್ನ ಅಧೀನದಲ್ಲಿನ 25 ಎಕರೆ ಭೂಮಿಯನ್ನು ತೋಟಗಾರಿಕಾ ಇಲಾಖೆಗೆ ಹಸ್ತಾಂತರ ಮಾಡಲು ಸಮ್ಮತಿ ಸೂಚಿಸಲಾಯಿತು.

ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ಭೂಮಿ ಹಸ್ತಾಂತರ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ್ದಾರೆ. ಅದಕ್ಕೆ ತೋಟಗಾರಿಕೆ ಸಚಿವರ ಪೂರ್ಣ ಸಹಕಾರ ಸಿಕ್ಕಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.