ETV Bharat / state

ಶಬರಿಮಲೆಗೆ ಇರುಮುಡಿ ಹೊತ್ತು ಅಯ್ಯಪ್ಪ ಸ್ವಾಮಿಗೆ ಸಮರ್ಪಿಸಿದ ಡಿಸಿಎಂ ಅಶ್ವತ್ಥ ನಾರಾಯಣ

ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಆಡಿ ಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ ಎಂದು ದರ್ಶನದ ನಂತರ ಸ್ವಾಮಿ ಆಡಿ ಬೆಳೆದ ಪಂದಳಂ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಇರುಮುಡಿ ಹೊತ್ತು  ಅಶ್ವಥ ನಾರಾಯಣ ಪಾದಯಾತ್ರೆ
ಇರುಮುಡಿ ಹೊತ್ತು ಅಶ್ವಥ ನಾರಾಯಣ ಪಾದಯಾತ್ರೆ
author img

By

Published : Mar 17, 2021, 3:30 AM IST

Updated : Mar 17, 2021, 8:45 AM IST

ಬೆಂಗಳೂರು: ಕೇರಳ ಚುನಾವಣೆಯ ಬಿಜೆಪಿ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಪ್ರಚಾರದ ಮಧ್ಯೆ ಪವಿತ್ರ ಪುಣ್ಯಕ್ಷೇತ್ರ ಶಬರಿಮಲೆಗೆ ಮಾಲಾಧಾರಿಯಾಗಿ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.

ನನ್ನ ಜೀವನದಲ್ಲಿಯೇ ಇದೊಂದು ಅವಿಸ್ಮರಣೀಯ ದಿನ. ಸ್ವಾಮಿ ಅಯ್ಯಪ್ಪ ಆಡಿ ಬೆಳೆದ ಜಾಗವನ್ನು ಸಂದರ್ಶಿಸುವ ಭಾಗ್ಯ ನನ್ನದಾಗಿದೆ ಎಂದು ದರ್ಶನದ ನಂತರ ಸ್ವಾಮಿ ಆಡಿ ಬೆಳೆದ ಪಂದಳಂ ಅರಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಸಂಜೆ ಪಂಪಾ ನದಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಸನ್ನಿಧಾನಕ್ಕೆ ಆಗಮಿಸಿದರು. ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ್ಯ ಸಾಂಪ್ರದಾಯಿಕ ಪಡಿಪೂಜೆಯಲ್ಲಿ ಭಾಗಿ, ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇಗುಲದ ಮುಖ್ಯ ತಂತ್ರಿ ರಾಜೀವ ಕಂದರಾರು ಹಾಗೂ ಮೇಲ್‌ಶಾಂತಿ ಅವರಾದ ವಿ.ಕೆ.ಜಯರಾಜ್‌ ಪೋಟ್ರಿ ಅಶ್ವತ್ಥ ನಾರಾಯಣ ಅವರಿಗಾಗಿ ಪೂಜೆ ನೆರವೇರಿಸಿಕೊಟ್ಟು ಪವಿತ್ರವಾದ ಎಲೆ ಪ್ರಸಾದ ನೀಡಿದರು. ಅಶ್ವತ್ಥ ನಾರಾಯಣ ಅವರು ಸ್ವಾಮಿಯ ಸನ್ನಿಧಾನದ ಸ್ವರ್ಣ ಮೆಟ್ಟಿಲು ಮುಂದೆ ನಿಂತು ಇರುಮುಡಿ ಸಮರ್ಪಿಸಿದರು.

ಇರುಮುಡಿ ಹೊತ್ತು  ಅಶ್ವಥ ನಾರಾಯಣ ಪಾದಯಾತ್ರೆ
ಇರುಮುಡಿ ಹೊತ್ತು ಡಿಸಿಎಂ ಅಶ್ವತ್ಥ ನಾರಾಯಣ ಪಾದಯಾತ್ರೆ

ದೇವಳದ ಅರ್ಚಕರು, ಮುಖ್ಯ ತಂತ್ರಿ ರಾಜೀವ ಕಂದರಾರು ಉಪ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡು ಗೌರವಿಸಿದರಲ್ಲದೆ, ಕ್ಷೇತ್ರದ ಮಹಿಮೆಯ ಬಗ್ಗೆ ಮಾಹಿತಿ ನೀಡಿದರು.

ಪಂದಳಮ್ ಅರಮನೆಗೂ ಭೇಟಿ

ಬೆಳಗ್ಗೆಯೇ ಕೇರಳದ ಪಟ್ಟಾನಂತಿಟ್ಟ ನಗರಕ್ಕೆ ಬಂದ ಅಶ್ವತ್ಥ ನಾರಾಯಣ ಅಲ್ಲಿಂದ ನೇರವಾಗಿ ಶಬರಿಮಲೆಗೆ ತರಳುವ ಮಾರ್ಗ ಮಧ್ಯೆ ಪಂದಳಮ್ ಅರಮನೆಗೆ ಭೇಟಿ ನೀಡಿದರು. ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕುತಂದೆ ಮಹಾರಾಜ ರಾಜಶೇಖರ ಪೆರುಮಾಳ್‌ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ರಾಜ ಕುಟುಂಬದ 102 ವರ್ಷದ ಹಿರಿಯ ಅಜ್ಜಿ ಮಾಕಮ್ಮನಾಳ್ ತನ್ವಾಂಗಿ ತಂಪುರುಟ್ಟೈ ಆಶೀರ್ವದಿಸಿದರು. ರಾಜ ವಂಶಕ್ಕೆ ಸೇರಿದ 400 ಜನರು ಇಲ್ಲಿದ್ದು, ಕುಟುಂಬಸ್ಥರ ಜತೆ ಡಿಸಿಎಂ ಅನೌಪಚಾರಿಕ ಮಾತುಕತೆ ನಡೆಸಿದರು.

Last Updated : Mar 17, 2021, 8:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.