ETV Bharat / state

ಉನ್ನತ ಶಿಕ್ಷಣದ ದಿಕ್ಕನ್ನೇ ಬದಲಿಸುವಂತಹ ಅಂಶ ನೂತನ ನೀತಿಯಲ್ಲಿದೆ: ಡಿಸಿಎಂ ಅಶ್ವತ್ಥ ನಾರಾಯಣ

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಾಗುವ ಬದಲಾವಣೆ ಹಾಗೂ ಬೀರುವ ಪ್ರಭಾವದ ಕುರಿತು ಸಂವಾದ ನಡೆಸಲಾಯಿತು. ಇದರಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.

Ashwath Narayan
Ashwath Narayan
author img

By

Published : Aug 29, 2020, 3:17 PM IST

ಬೆಂಗಳೂರು: ಶಿಕ್ಷಣ ಕ್ಷೇತ್ರದಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆದಷ್ಟು ಬೇಗ ನೀತಿಯ ಜಾರಿ ಪ್ರಕ್ರಿಯೆಯನ್ನು ಆರಂಭ ಮಾಡಲಾಗುವುದು ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಅಸೋಚಂ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಿ ಆಗುವ ಬದಲಾವಣೆ ಮತ್ತು ಬೀರುವ ಪ್ರಭಾವದ ಕುರಿತ ಸಂವಾದದಲ್ಲಿ ವರ್ಚುವಲ್ ವೇದಿಕೆ ಮೂಲಕ ಮಾತನಾಡಿದ ಅವರು, ಒಮ್ಮೆ ಶಿಕ್ಷಣ ನೀತಿಯನ್ನು ಜಾರಿ ಮಾಡಿದರೆ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಗುರುತರ ಬದಲಾವಣೆಗಳು ಗೋಚರವಾಗುತ್ತವೆ. ರಾಜ್ಯದ ಉನ್ನತ ಶಿಕ್ಷಣದ ದಿಕ್ಕನ್ನೇ ಬದಲಿಸುವಂತಹ ಅಂಶಗಳು ಈ ನೀತಿಯಲ್ಲಿವೆ ಎಂದರು.

ಈಗಾಗಲೇ ನೀತಿಯಲ್ಲಿರುವ ಅಂಶಗಳನ್ನು ಕೂಲಂಕುಷವಾಗಿ ವಿಶ್ಲೇಷಣೆ ಮಾಡಲಾಗಿದೆ. ಅದಕ್ಕಾಗಿ ಉನ್ನತಮಟ್ಟದ ಕಾರ್ಯಪಡೆಯನ್ನು ರಚನೆ ಮಾಡಲಾಗಿದ್ದು, ಈಗಾಗಲೇ ಕಾರ್ಯಪಡೆಯ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದೆ. ಈ ಕಾರ್ಯಪಡೆಯ ಉಪ ಸಮಿತಿಗಳು ನೀಡಿರುವ ವರದಿಗಳನ್ನು ಅಧ್ಯಯನ ಮಾಡಲಾಗಿದೆ. ಇನ್ನು ನೀತಿಯ ಜಾರಿಗೆ ಕಾರ್ಯಪಡೆಯೂ ಅಂತಿಮ ವರದಿ ನೀಡಲಿದ್ದು, ಅದು ಕೈ ಸೇರಿದ ಕೂಡಲೇ ಸರ್ಕಾರವು ಶಿಕ್ಷಣ ನೀತಿಯ ಜಾರಿ ನಿಟ್ಟಿನಲ್ಲಿ ಹೆಜ್ಜೆ ಇಡಲಿದೆ ಎಂದರು.

ನಮ್ಮ ರಾಜ್ಯಕ್ಕೆ ಸೇರಿದ ತಜ್ಞರೇ ಇದ್ದ ಸಮಿತಿಯು ಅನೇಕ ಕ್ರಾಂತಿಕಾರಕ ಅಂಶಗಳನ್ನು ನೀತಿಯಲ್ಲಿ ಸೇರಿಸಿದೆ. ಎಲ್ಲಾ ಹಂತಗಳ ಶಿಕ್ಷಣದಲ್ಲೂ ಉತ್ತಮ ಸ್ಥಿತಿಯಲ್ಲಿರುವ ರಾಜ್ಯದಲ್ಲಿ ಮುಂದೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದ ಹಂತದವರೆಗೂ ಅಪಾರ ಬದಲಾವಣೆಗಳನ್ನು ಕಾಣಬಹುದು. ಈ ಮೂಲಕ ಭಾರತವು ಜಗತ್ತಿನ ಜ್ಞಾನ ಕಣಜವಾಗಿ ಹೊರ ಹೊಮ್ಮಲಿದೆ. ಕರ್ನಾಟಕವೂ ಶಿಕ್ಷಣ ನೆಲೆಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಶಿಕ್ಷಣದ ರಾಜಧಾನಿಯಾಗಿ ಬದಲಾವಣೆ:

ಇತರೆ ಐದು ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯವು ಶೈಕ್ಷಣಿಕವಾಗಿ ಶರವೇಗದಲ್ಲಿ ಬೆಳೆಯುತ್ತಿದೆ. ಸರಾಸರಿ ರಾಜ್ಯದ ಜಿಲ್ಲೆಗಳಿಗೆ ಹೋಲಿಸಿದರೆ ಪ್ರತಿ ಜಿಲ್ಲೆಗೆ ಎರಡು ವಿಶ್ವವಿದ್ಯಾಲಯಗಳಿವೆ. ಬೆಂಗಳೂರು ನಗರ ಒಂದರಲ್ಲೇ 880ಕ್ಕೂ ಹೆಚ್ಚು ಕಾಲೇಜುಗಳಿವೆ. ಹೀಗಾಗಿ ಶಿಕ್ಷಣದ ರಾಜಧಾನಿಯಾಗಿ ಹೊರಹೊಮ್ಮುವ ಎಲ್ಲಾ ಶಕ್ತಿಯೂ ಈ ನಗರಕ್ಕಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಈ ಗುರಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂದರು.

ಇಡೀ ದೇಶದಲ್ಲೇ ಶಿಕ್ಷಣ ನೀತಿಯನ್ನು ಜಾರಿ ಮಾಡಿದ ಮೊದಲ ರಾಜ್ಯವಾಗಿ ಕರ್ನಾಟಕವು ಮುಂದೆ ನಿಲ್ಲಲಿದೆ. ಈಗಾಗಲೇ ಸರ್ಕಾರ ಹಾಕಿಕೊಂಡಿರುವ ಯೋಜನೆಯಂತೆ ತಜ್ಞರು ಕೊಟ್ಟಿರುವ ಸಲಹೆಯಂತೆ ಹಂತ ಹಂತವಾಗಿ ಅನುಷ್ಠಾನ ಮಾಡಲಾಗುವುದು. ಧಾರವಾಡದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಿರುವ ಉನ್ನತ ಶಿಕ್ಷಣ ಅಕಾಡೆಮಿ ಕೂಡ ಅನುಕೂಲವಾಗಲಿದೆ. ಇದರ ಜೊತೆ ಜೊತೆಯಲ್ಲೇ ಬಹು ಉದ್ದೇಶಿತ ಹಾಗೂ ಬಹು ವಿಷಯಗಳನ್ನು ಬೋಧನೆ ಮಾಡುವ ವಿವಿಗಳನ್ನು ಕೂಡ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.