ಬೆಂಗಳೂರು: ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಇಂದು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಮಕ್ಕಳಿಗಾಗಿಯೇ ಇಂತಹ ಅತ್ಯುತ್ತಮ ಐಸಿಯು ಸಿದ್ಧಪಡಿಸಲು ದೊಡ್ಡ ಪ್ರಮಾಣದಲ್ಲಿ ಕೈಜೋಡಿಸಿದ ಕಾಗ್ನಿಜೆಂಟ್ ಸಂಸ್ಥೆಗೆ ಅಭಿನಂದನೆಗಳು. 1.32 ಕೋಟಿ ರೂ. ವೆಚ್ಚದಲ್ಲಿ ಐಸಿಯು ಸೌಲಭ್ಯವನ್ನು ಅಭಿವೃದ್ಧಿಪಡಿಲಾಗಿದೆ. ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಸಂಖ್ಯೆಯನ್ನು ಈಗ 30ರಿಂದ 100ಕ್ಕೆ ಹೆಚ್ಚಿಸಲಾಗಿದೆ. ಕೋವಿಡ್-19 ಸೋಂಕಿಗೆ ತುತ್ತಾಗುವ ಶಿಶುಗಳಿಗೆ ಮತ್ತು ಮಕ್ಕಳಿಗೆ ಇಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯವಾಗಲಿದೆ. ಮಕ್ಕಳಿಗೆ ಅಗತ್ಯವಾದ ಪಿಪಿಇ ಕಿಟ್‌ಗಳು, ಆಕ್ಸಿಜನ್ ಬೆಡ್‌ಗಳು, ವೆಂಟಿಲೇಟರ್‌ಗಳು, ಮಲ್ಟಿ ಪ್ಯಾರಾಮಾನಿಟರ್‌ಗಳು ಸೇರಿ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಜ್ಯ ಸರ್ಕಾರವು ಸೋಂಕಿನ ಕಾಯಿಲೆ ಹತ್ತಿಕ್ಕಲು ಎಲ್ಲಾ ಕ್ರಮಗಳನ್ನೂ ಕೈಗೊಂಡಿದೆ. ಮೂರನೇ ಅಲೆ ತಡೆಯುವುದಕ್ಕೆ ಸಾಧ್ಯವಾದ ಸರ್ವ ಉಪ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಹೇಳಿದರು.
-
.@CocaCola_Ind ಫೌಂಡೇಶನ್, @UWMumbai ವತಿಯಿಂದ ವಿವಿಧ ಎಂಟರ್ ರ್ಪ್ರೈಸಸ್ ಸಹಭಾಗಿತ್ವದಲ್ಲಿ #COVID19 ನಿರ್ವಹಣೆಯಲ್ಲಿ ತೊಡಗಿರುವವರಿಗೆ ಕೋವಿಡ್ ಸುರಕ್ಷಾ ಸಾಮಗ್ರಿ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
— Dr. Ashwathnarayan C. N. (@drashwathcn) July 6, 2021 " class="align-text-top noRightClick twitterSection" data="
ವಿಶೇಷ ಚೇತನರಿಗಾಗಿಯೂ ಅನೇಕ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಸರ್ಕಾರವೂ ಕ್ರಮಕೈಗೊಳ್ಳುತ್ತಿದೆ. pic.twitter.com/yOQlpAwEW4
">.@CocaCola_Ind ಫೌಂಡೇಶನ್, @UWMumbai ವತಿಯಿಂದ ವಿವಿಧ ಎಂಟರ್ ರ್ಪ್ರೈಸಸ್ ಸಹಭಾಗಿತ್ವದಲ್ಲಿ #COVID19 ನಿರ್ವಹಣೆಯಲ್ಲಿ ತೊಡಗಿರುವವರಿಗೆ ಕೋವಿಡ್ ಸುರಕ್ಷಾ ಸಾಮಗ್ರಿ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
— Dr. Ashwathnarayan C. N. (@drashwathcn) July 6, 2021
ವಿಶೇಷ ಚೇತನರಿಗಾಗಿಯೂ ಅನೇಕ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಸರ್ಕಾರವೂ ಕ್ರಮಕೈಗೊಳ್ಳುತ್ತಿದೆ. pic.twitter.com/yOQlpAwEW4.@CocaCola_Ind ಫೌಂಡೇಶನ್, @UWMumbai ವತಿಯಿಂದ ವಿವಿಧ ಎಂಟರ್ ರ್ಪ್ರೈಸಸ್ ಸಹಭಾಗಿತ್ವದಲ್ಲಿ #COVID19 ನಿರ್ವಹಣೆಯಲ್ಲಿ ತೊಡಗಿರುವವರಿಗೆ ಕೋವಿಡ್ ಸುರಕ್ಷಾ ಸಾಮಗ್ರಿ ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
— Dr. Ashwathnarayan C. N. (@drashwathcn) July 6, 2021
ವಿಶೇಷ ಚೇತನರಿಗಾಗಿಯೂ ಅನೇಕ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ. ಈ ನಿಟ್ಟಿನಲ್ಲಿ ಸರ್ಕಾರವೂ ಕ್ರಮಕೈಗೊಳ್ಳುತ್ತಿದೆ. pic.twitter.com/yOQlpAwEW4
ಕೋಕಾ ಕೋಲಾ ಫೌಂಡೇಶನ್ ಮತ್ತು ಯುನೈಟೆಡ್ ವೇ ಸಹಯೋಗದಲ್ಲಿ ರಾಜ್ಯ ಸರ್ಕಾರದ ಜತೆಗೂಡಿ ಹಮ್ಮಿಕೊಂಡಿರುವ ʼಸೋಂಕು ಹರಡುವುದನ್ನು ನಿಲ್ಲಿಸಿʼ ಎಂಬ ಕೋವಿಡ್ ಲಸಿಕೆ ಜಾಗೃತಿ ಅಭಿಯಾನಕ್ಕೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಮಂಗಳವಾರ ಚಾಲನೆ ನೀಡಿದರು.
ಬೆಂಗಳೂರು ನಗರದ ಪ್ರದೇಶದ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಇದಾಗಿದ್ದು, ನಂತರದ ದಿನಗಳಲ್ಲಿ ರಾಜ್ಯಾದ್ಯಂತ ನಡೆಯಲಿದೆ ಎಂದು ಕಾರ್ಯಕ್ರಮದ ನಂತರ ಡಾ.ಅಶ್ವತ್ಥನಾರಾಯಣ ಮಾಧ್ಯಮಗಳಿಗೆ ತಿಳಿಸಿದರು.
ಈ ಅಭಿಯಾನದ ಜತೆಗೆ ಆಯಾ ಪ್ರದೇಶಗಳ ಆರೋಗ್ಯ ಕೇಂದ್ರಗಳಿಗೆ, ಆಶಾ ಕಾರ್ಯಕರ್ತರಿಗೆ ಆರೋಗ್ಯ ಪರಿಕರಗಳ ವಿತರಣೆ ಮಾಡಲಾಗುತ್ತದೆ. ಇಂದು ಸಾಂಕೇತಿಕವಾಗಿ 10 ಮಂದಿ ಆಶಾ ಕಾರ್ಯಕರ್ತರಿಗೆ ಮತ್ತು ಪ್ರಾಥಮಿಕ ಕೇಂದ್ರ ಒಂದರ ವೈದ್ಯರಿಗೆ ಆರೋಗ್ಯ ಪರಿಕರಗಳನ್ನು ವಿತರಣೆ ಮಾಡಲಾಯಿತು ಎಂದು ಡಿಸಿಎಂ ಹೇಳಿದರು.
-
Launched a 100-bed Pediatric Intensive Care Unit (PICU) at the Indira Gandhi Institute of Child Health (IGICH), Bengaluru, funded by @Cognizant Foundation, the CSR arm of IT services major, to #COVID19 affected infants and children.@CMofKarnataka @DHFWKA
— Dr. Ashwathnarayan C. N. (@drashwathcn) July 6, 2021 " class="align-text-top noRightClick twitterSection" data="
1/2 pic.twitter.com/c8vjpuPzCf
">Launched a 100-bed Pediatric Intensive Care Unit (PICU) at the Indira Gandhi Institute of Child Health (IGICH), Bengaluru, funded by @Cognizant Foundation, the CSR arm of IT services major, to #COVID19 affected infants and children.@CMofKarnataka @DHFWKA
— Dr. Ashwathnarayan C. N. (@drashwathcn) July 6, 2021
1/2 pic.twitter.com/c8vjpuPzCfLaunched a 100-bed Pediatric Intensive Care Unit (PICU) at the Indira Gandhi Institute of Child Health (IGICH), Bengaluru, funded by @Cognizant Foundation, the CSR arm of IT services major, to #COVID19 affected infants and children.@CMofKarnataka @DHFWKA
— Dr. Ashwathnarayan C. N. (@drashwathcn) July 6, 2021
1/2 pic.twitter.com/c8vjpuPzCf
ಲಸಿಕೆ ಬಗ್ಗೆ ಜನರಲ್ಲಿರುವ ಭಯ, ಆತಂಕವನ್ನು ನಿವಾರಣೆ ಮಾಡುವುದೇ ಈ ಅಭಿಯಾನದ ಉದ್ದೇಶ. ಮೂರನೇ ಅಲೆಯನ್ನು ಯಶಸ್ವಿಯಾಗಿ ತಡೆಯಲು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು. ಅದರಲ್ಲೂ ವಿಕಲಚೇತನರು, ಹಿರಿಯ ನಾಗರಿಕರು ಮತ್ತು ಅವರ ಪೋಷಕರು ಕಡ್ಡಾಯವಾಗಿ ಲಸಿಕೆ ಪಡೆಯಬೇಕೆಂದು ಮನವಿ ಮಾಡಿದರು.