ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಸಭೆ ನಡೆಸಿದರು.
ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪಾಲಿಕೆ ಆಸ್ಪತ್ರೆ, ಸಾರ್ವಜನಿಕರ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು, ಎಲ್ಲಾ ವಾರ್ಡ್ಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯುವುದು, ಆಮ್ಲಜನಕ ವ್ಯವಸ್ಥೆ, ಹೈಟೆಕ್ ಸೆಂಟರ್, ಸ್ಮಾರ್ಟ್ ಕ್ಲಿನಿಕ್, ಆಸ್ಪತ್ರೆಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಬಗ್ಗೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು.
ಸಭೆಯಲ್ಲಿ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಉಪ ಮೇಯರ್ ಮೋಹನ್ ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜು, ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್, ವಿಶೇಷ ಆಯುಕ್ತ ಡಾ. ರವಿ ಕುಮಾರ್ ಸುರಪುರ ಹಾಗೂ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.