ETV Bharat / state

ಭೂ ಪರಿಹಾರ ವಿತರಣೆಗೆ ವಾರದಲ್ಲಿ ಸ್ಪಷ್ಟತೆ ಸಿಗುತ್ತೆ: ಅಶ್ವತ್ಥ್​​​ ನಾರಾಯಣ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಹೊರ ವರ್ತುಲ ರಸ್ತೆಯ ಭೂ ಪರಿಹಾರ ವಿತರಣೆ ಹಾಗೂ ಇತರ ಸಂಬಂಧಿತ ವಿಷಯಗಳ ಬಗ್ಗೆ ರೈತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಇಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್​​​ ನಾರಾಯಣ ಸಭೆ ನಡೆಸಿದರು.

DCM Ashwathanarayana
ಡಿಸಿಎಂ ಡಾ. ಅಶ್ವತ್ಥನಾರಾಯಣ
author img

By

Published : Feb 28, 2020, 7:21 PM IST

ಬೆಂಗಳೂರು: ನಗರದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ಎದುರಾಗಿರುವ ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ ಕುರಿತ ಸಮಸ್ಯೆಗೆ ಇನ್ನೊಂದು ವಾರದಲ್ಲಿ ಸ್ಪಷ್ಟತೆ ಕಂಡುಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್​​ ನಾರಾಯಣ ಹೇಳಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಹೊರವರ್ತುಲ ರಸ್ತೆಯ ಭೂ ಪರಿಹಾರ ವಿತರಣೆ ಹಾಗೂ ಇತರ ಸಂಬಂಧಿತ ವಿಷಯಗಳ ಬಗ್ಗೆ ರೈತ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂಲ ಸೌಕರ್ಯದ ಕೊರತೆ ಹಾಗೂ ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯ ತ್ವರಿತವಾಗಿ ಆಗಬೇಕೆಂಬ ಮುಖ್ಯಮಂತ್ರಿ ಬಿ. ಎಸ್‌.ಯಡಿಯೂರಪ್ಪ ಅವರ ನಿರ್ಣಯಕ್ಕೆ ಪೂರಕವಾಗಿ ಈ ದಿನ ಸಭೆ ಸೇರಿ ಚರ್ಚೆ ನಡೆಸಲಾಗಿದೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ

ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ ಕುರಿತು ರೈತ ಪ್ರತಿನಿಧಿಗಳ ಸಲಹೆ ಪಡೆಯಲಾಗಿದೆ. ಅವರ ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಇನ್ನೊಂದು ವಾರದಲ್ಲಿ ಹೆಚ್ಚಿನ ಸ್ಪಷ್ಟತೆ ಪಡೆಯಲಾಗುವುದು ಎಂದು ತಿಳಿಸಿದರು.

ಹೊರ ವರ್ತುಲ ರಸ್ತೆ ನಿರ್ಮಾಣಕ್ಕಾಗಿ ಜಾಗವನ್ನು ನೋಟಿಫೈ ಮಾಡಿ 15 ವರ್ಷಕ್ಕಿಂತ ಹೆಚ್ಚು ಕಾಲ ಆಗಿದೆ. 2013ರ ಒಪ್ಪಂದಕ್ಕೆ ರೈತರ ಸಹಮತ ಇಲ್ಲ. ಬದಲಾದ ಪರಿಸ್ಥಿತಿಯಲ್ಲಿ ಅವರ ಬೇಡಿಕೆಗಳು ಬದಲಾಗಿದ್ದು, ಪರಿಹಾರದ ವಿಚಾರದಲ್ಲಿ ತಕರಾರಿದೆ. ಈ ನಿಟ್ಟಿನಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​​ ಸೇರಿದಂತೆ ಇತರ ರೈತ ಪ್ರತಿನಿಧಿಗಳ ಜತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಸ್‌.ಆರ್.ವಿಶ್ವನಾಥ್‌ ನೇತೃತ್ವದಲ್ಲಿ ಅಧಿಕಾರಿಗಳು ಈಗಾಗಲೇ ಹಲವಾರು ಸುತ್ತಿನ ಮಾತುಕತೆ ನಡೆಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಸಹಮತದಲ್ಲಿ ಭೂ ಸ್ವಾಧೀನಪಡಿಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ. ಈ ಜಟಿಲ ಸಮಸ್ಯೆಗೆ ಆದಷ್ಟು ಬೇಗ ಸೂಕ್ತ ಪರಿಹಾರ ಕಂಡುಕೊಳ್ಳುವ ವಿಶ್ವಾಸ ಇದೆ ಎಂದು ಹೇಳಿದರು.

1800 ಎಕರೆ ಭೂ ಸ್ವಾಧೀನ ಆಗಬೇಕು. 800 ಎಕರೆ ಸರ್ಕಾರದ್ದು, ಉಳಿದ 1200 ಎಕರೆ ಖಾಸಗಿಯವರದ್ದು. ಎರಡು ಎಕರೆಗಿಂತ ಹೆಚ್ಚಿರುವವರಿಗೆ ಶೇ. 50ರಷ್ಟು ನಗದು ಹಾಗೂ ಶೇ. 50ರಷ್ಟು ಟಿಡಿಆರ್ ಕೊಡಲು ನಿಯಮಾವಳಿ ಇದೆ ಎಂದರು.

ಇಂದು ಬೆಂಗಳೂರಿನ ಎಲ್ಲಾ ಶಾಸಕರನ್ನು ಕರೆದಿರಲಿಲ್ಲ‌. ಯಾವ ಯಾವ ಯಾವ ಕ್ಷೇತ್ರಗಳಲ್ಲಿ ರಸ್ತೆ ನಿರ್ಮಾಣವಾಗಬೇಕಿದೆಯೋ ಆ ಕ್ಷೇತ್ರಗಳ ಶಾಸಕರನ್ನು ಮಾತ್ರ ಆಹ್ವಾನಿಸಿದ್ದೆವು. ನಿನ್ನೆ ರಾತ್ರಿ ತಿಳಿಸಿದ ಕಾರಣ ಹೆಚ್ಚಿನವರು ಸಭೆಗೆ ಬರಲು ಸಾಧ್ಯವಾಗಿಲ್ಲ. ಹಾಗೆಂದು ಅಸಹಕಾರ ಎಂದು ಪರಿಗಣಿಸಲು ಸಾಧ್ಯವಿಲ್ಲ. ನಮ್ಮ ಸರ್ಕಾರದಲ್ಲಿ ಯಾವ ಶಾಸಕರೂ ಸಿಎಂ ಭೇಟಿ ಮಾಡಿ ಚರ್ಚಿಸಲು ಯಾವುದೇ ಅಡ್ಡಿ ಇಲ್ಲ ಎಂದು ಹೇಳಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ಎಸ್‌.ಆರ್.ವಿಶ್ವನಾಥ್‌ ಮಾತನಾಡಿ, ತುಮಕೂರು ರಸ್ತೆಯಿಂದ ಏರ್​​ಪೋರ್ಟ್ ರಸ್ತೆ ಸಂಪರ್ಕಿಸುವ 68 ಕಿ.ಮೀ. ಉದ್ದದ ವರ್ತುಲ ರಸ್ತೆ ಇದು. 16 ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ರೈತರ ಬೇಡಿಕೆ ಪ್ರಕಾರ 15,000 ಕೋಟಿ ರೂ. ಹೆಚ್ಚುವರಿಯಾಗಿ ಬೇಕಾಗುತ್ತದೆ‌. ಸರ್ಕಾರ 4500 ಕೋಟಿ ರೂ. ಹೆಚ್ಚುವರಿಯಾಗುತ್ತದೆ ಎಂದು ಲೆಕ್ಕ ಹಾಕಿದೆ. ವರ್ತುಲ ರಸ್ತೆ ನಿರ್ಮಾಣದ ಅಂದಾಜು ವೆಚ್ಚವೇ 8000 ಕೋಟಿ ರೂ. ಎಂದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, 2016ರಲ್ಲಿ ಬಿಡಿಎ ಸರ್ಕಾರಕ್ಕೆ ಕೊಟ್ಟಿರುವ ಪ್ರಸ್ತಾವನೆಯಲ್ಲಿ 2013ರ ಗೈಡ್ ಲೈನ್ ವ್ಯಾಲ್ಯು ಬದಲಾವಣೆ ಮಾಡದಂತೆ ಮನವಿ ಮಾಡಿದೆ. ಆದರೆ ನಾವು ಪ್ರಸಕ್ತ ಮಾರುಕಟ್ಟೆ ದರ ಕೇಳುತ್ತಿದ್ದೇವೆ‌ ಎಂದು ಹೇಳಿದರು.

2004-05 ರಲ್ಲಿ ರಸ್ತೆಗೆ ನೋಟಿಫಿಕೇಶನ್ ಆದಾಗಿನಿಂದ ರೈತರ ಭೂಮಿ ವಿಷಯದಲ್ಲಿ ಯಾವುದೇ ವ್ಯವಹಾರ ಸಾಧ್ಯವಾಗುತ್ತಿಲ್ಲ. ಇದೇ ಸಮಸ್ಯೆಗೆ ಕಾರಣವಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.