ETV Bharat / state

ಭಾರತೀಯರ ಕನಸು ನನಸಾಗಿದೆ ಎಂದ ಡಿಸಿಎಂ ಅಶ್ವತ್ಥ್​ ನಾರಾಯಣ

ಸರ್ವಧರ್ಮೀಯರ ಬೆಂಬಲದೊಂದಿಗೆ ನಡೆಯುತ್ತಿರುವ ಈ ಕಾರ್ಯವನ್ನು ಭಾರತದ ಭಾವೈಕ್ಯತೆಯ ಸಂಕೇತ ಎಂದೇ ಹೇಳಬಹುದು. ಶಾಂತಿಯ ನಾಡಿನಲ್ಲಿ ಸಂಭ್ರಮ ಮನೆ ಮಾಡಲಿದೆ. ಎಲ್ಲ ಸಂಕಷ್ಟಗಳೂ ದೂರವಾಗಲಿವೆ..

author img

By

Published : Aug 5, 2020, 4:58 PM IST

DCM Ashwathnarayan visit to rammandir today
ಪೂಜೆ ಸಲ್ಲಿಸುತ್ತಿರುವ ಡಿಸಿಎಂ ಡಾ.ಅಶ್ವತ್ಥ್​ನಾರಾಯಣ

ಬೆಂಗಳೂರು : ಉಪಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್​ನಾರಾಯಣ ನೇತೃತ್ವದಲ್ಲಿ ಇಲ್ಲಿನ ರಾಮಮಂದಿರದಲ್ಲಿ ವಿಶೇಷ ಪೂಜಾ ಕೈಂಕಾರ್ಯ ಕೈಗೊಳ್ಳಲಾಯಿತು.

ಪೂಜೆ ಸಲ್ಲಿಸುತ್ತಿರುವ ಡಿಸಿಎಂ ಡಾ.ಅಶ್ವತ್ಥ್​ ನಾರಾಯಣ

ಪೂಜೆ ಬಳಿಕ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಿ, ನೂರಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿವಾದಕ್ಕೆ ತೆರೆ ಎಳೆದಿದ್ದಕ್ಕೆ ಧನ್ಯತಾಭಾವ ಪ್ರದರ್ಶಿಸಿದರು. ರಾಮನ ಜನ್ಮಭೂಮಿಯಲ್ಲೇ ಮಂದಿರ ನಿರ್ಮಾಣವಾಗಬೇಕು ಎನ್ನುವ ಪ್ರತಿಯೊಬ್ಬ ಭಾರತೀಯನ ಕನಸು ನನಸಾಗಿದೆ. ಇದು ನಿಜಕ್ಕೂ ಸಂತಸದ ವಿಚಾರ ಎಂದು ಡಾ.ಅಶ್ವತ್ಥ್​ ನಾರಾಯಣ ಹೇಳಿದರು.

500 ವರ್ಷಗಳಿಂದ ನಡೆಯುತ್ತಿದ್ದ ಸಾತ್ವಿಕ ಸಂಘರ್ಷ ಮತ್ತು 134 ವರ್ಷಗಳ ಕಾನೂನು ಹೋರಾಟದ ಬಳಿಕ ಮಂದಿರ‌ ನಿರ್ಮಾಣಕ್ಕೆ ಹಾದಿ ಸುಗಮವಾಗಿದೆ. ಇವತ್ತಿನ ಈ ಕ್ಷಣಕ್ಕಾಗಿ ಸಂಕಲ್ಪ, ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲ ಶ್ರದ್ಧಾಳುಗಳಿಗೂ ನನ್ನ ನಮನಗಳು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಸರ್ವಧರ್ಮೀಯರ ಬೆಂಬಲದೊಂದಿಗೆ ನಡೆಯುತ್ತಿರುವ ಈ ಕಾರ್ಯವನ್ನು ಭಾರತದ ಭಾವೈಕ್ಯತೆಯ ಸಂಕೇತ ಎಂದೇ ಹೇಳಬಹುದು. ಶಾಂತಿಯ ನಾಡಿನಲ್ಲಿ ಸಂಭ್ರಮ ಮನೆ ಮಾಡಲಿದೆ. ಎಲ್ಲ ಸಂಕಷ್ಟಗಳೂ ದೂರವಾಗಲಿವೆ. ರಾಮಮಂದಿರ ನಿರ್ಮಾಣದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆದುಕೊಂಡ ರೀತಿ ಇಡೀ ನಾಡು ಮೆಚ್ಚುವಂತಹದ್ದು ಎಂದು ಅವರು ಹೇಳಿದರು.

ರಾಯರ ದರ್ಶನ :
ರಾಮನ ಪೂಜೆ ಬಳಿಕ ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆ ಪ್ರಯುಕ್ತ ಹಲವು ಮಠಗಳಿಗೆ ಉಪ ಮುಖ್ಯಮಂತ್ರಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಮಲ್ಲೇಶ್ವರದ 8ನೇ ಅಡ್ಡರಸ್ತೆ, 4ನೇ ಅಡ್ಡರಸ್ತೆ, ಸಂಪಿಗೆ ರಸ್ತೆಯ ಪಲಿಮಾರುಮಠ, ಶೇಷಾಧಿಪುರದಲ್ಲಿನ ರಾಘವೇಂದ್ರ ಮಠಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ಸೇರಿ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.