ETV Bharat / state

ಸೋಂಕು ತಡೆಗಟ್ಟಲು ಜಿಲ್ಲಾಡಳಿತಕ್ಕೆ 3 ಅಂಶಗಳ ಸೂತ್ರ ಸೂಚಿಸಿದ ಡಿಸಿಎಂ ಅಶ್ವತ್ಥ್​ ನಾರಾಯಣ್​

ಸಂಪನ್ಮೂಲ ಕೊರತೆ ಕಂಡು ಬಂದರೆ ವಿಪತ್ತು ನಿರ್ವಹಣಾ ನಿಧಿಯಿಂದ ಖರ್ಚು ಮಾಡಿ ಎಂದು ಸಲಹೆ ಮಾಡಿದರು. ಸಾಧ್ಯವಾದಷ್ಟು ಜನಪ್ರತಿನಿಧಿಗಳು ಸಲಹೆ ಸಹಕಾರ ಪಡೆದುಕೊಳ್ಳಿ. ಅವರು ಎತ್ತುವ ಆಕ್ಷೇಪಗಳಿಗೆ ಕಿವಿಗೊಡಿ. ಸಮಸ್ಯೆಗಳ ಬಗ್ಗೆ ತಿಳಿಸಿದರೆ ಕೂಡಲೇ ಅದನ್ನು ಬಗೆಹರಿಸಿ..

dcm-ashwathth-narayan
ಡಿಸಿಎಂ ಅಶ್ವತ್ಥ್​ ನಾರಾಯಣ್
author img

By

Published : Apr 16, 2021, 7:41 PM IST

ಬೆಂಗಳೂರು : ರಾಮನಗರ ಜಿಲ್ಲೆಯಲ್ಲಿ ಕೋವಿಡ್‌ ಸೋಂಕನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಮೂರು ಅಂಶಗಳ ಸೂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿಸಿಎಂ ಡಾ. ಸಿ. ಎನ್ ಅಶ್ವತ್ಥ್​ ನಾರಾಯಣ್​ ಅವರು ಸೂಚಿಸಿದ್ದಾರೆ. ಅದರ ಪ್ರಕಾರ ಅತ್ಯಂತ ಕ್ರಮ ಬದ್ಧವಾಗಿ ಕೋವಿಡ್‌ ಸ್ಥಿತಿ ನಿರ್ವಹಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದ್ದಾರೆ.

ಜಿಲ್ಲೆಯ ಸಂಸದರು, ಶಾಸಕರು, ಎಲ್ಲ ಚುನಾಯಿತ ಪ್ರತಿನಿಧಿಗಳು ಹಾಗೂ ಉನ್ನತ ಅಧಿಕಾರಿಗಳನ್ನು ಒಳಗೊಂಡ ವರ್ಚುವಲ್‌ ಸಭೆಯ ಮೂಲಕ ಇಂದು ವಿಕಾಸಸೌಧದಿಂದ ಜಿಲ್ಲೆಯ ಕೋವಿಡ್‌ ಪರಿಸ್ಥಿತಿ ಅವಲೋಕನ ಮಾಡಿದ ಡಿಸಿಎಂ, ಕ್ಷಿಪ್ರವಾಗಿ ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್‌ ಪರೀಕ್ಷೆ ಮಾಡುವುದು, ಕ್ಷಿಪ್ರವಾಗಿ ಫಲಿತಾಂಶ ನೀಡುವುದು ಹಾಗೂ ಪಾಸಿಟಿವ್​ ಬಂದರೆ ಅಷ್ಟೇ ಕ್ಷಿಪ್ರವಾಗಿ ಚಿಕಿತ್ಸೆ ಆರಂಭಿಸುವ ಮೂರು ಅಂಶಗಳ ಸೂತ್ರ ಸೂಚಿಸಿದರು.

ಇದರ ಜತೆಗೆ ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸುವಂತೆ ಡಿಸಿಎಂ ಸೂಚಿಸಿದರು. ಸರ್ಕಾರದ ಮಾರ್ಗಸೂಚಿಯಂತೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ತಪ್ಪದೇ ಲಸಿಕೆ ಕೊಡಬೇಕು. ಅದಕ್ಕೆ ಬೇಕಾದ ಎಲ್ಲ ಕಾರ್ಯತಂತ್ರ ಅಳವಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜ್ವರ, ಶೀತ ಇದ್ದರೆ ಕೋವಿಡ್‌ ಪರೀಕ್ಷೆ ಮಾಡಿ : ಯಾರಿಗೆ ಆಗಲಿ ಜ್ವರ, ಶೀತ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳಿದ್ದರೆ ಕೂಡಲೇ ಅಂಥವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಅಥವಾ ಅಂಥವರು ಯಾರಾದರೂ ಇದ್ದರೆ ನಿರ್ಲಕ್ಷ್ಯ ಮಾಡದೇ ಪರೀಕ್ಷೆ ಮಾಡಿಸಿಕೊಳ್ಳಬೇಕು.

ಕೆಲ ಗಂಟೆಗಳಲ್ಲೇ ವರದಿ ಕೊಡುವುದರ ಜತೆಗೆ, ಯಾವುದೇ ವ್ಯಕ್ತಿಗೆ ಕೋವಿಡ್‌ ಪಾಸಿಟಿವ್‌ ಅಂತ ಗೊತ್ತಾದ ತಕ್ಷಣವೇ ಚಿಕಿತ್ಸೆ ಶುರು ಮಾಡಬೇಕು. ಲಕ್ಷಣ ಇರುವ ಅಥವಾ ಲಕ್ಷಣ ಇಲ್ಲದ ಅಂತ ವಿಂಗಡಣೆ ಮಾಡುವುದು ಬೇಡ.

ಸೋಂಕು ಬಂದ ತಕ್ಷಣ ಚಿಕಿತ್ಸೆ ನೀಡಿದರೆ ರೋಗವು ಉಲ್ಬಣ ಸ್ಥಿತಿಗೆ ಹೋಗುವುದಿಲ್ಲ. ಆಗ ಆಸ್ಪತ್ರೆ, ಐಸಿಯು, ಆ್ಯಕ್ಷಿಜನ್‌ ಮುಂತಾದವು ಬೇಕಾಗುವುದಿಲ್ಲ. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊರೊನಾ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಡಿಸಿಎಂ ಮಾತನಾಡಿರುವುದು.. ​

ಈ ಸೂತ್ರದಂತೆ ಕೆಲಸ ಮಾಡಿದರೆ ಮಾಡಿದರೆ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಆಗ ಮಾತ್ರ ಯಾವುದೇ ಸಾವು-ನೋವು ಉಂಟಾಗುವುದಿಲ್ಲ. ಇದನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದರು.

ಸಿಬ್ಬಂದಿ ಕೊರತೆ ಆಗಬಾರದು : ಶಾಸಕ ರವಿ ಅವರು ಸಿಬ್ಬಂದಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಉತ್ತರ ನೀಡಿದ ಡಿಸಿಎಂ ಅವರು, ಕೂಡಲೇ ಅಗತ್ಯ ಇರುವ ಕಡೆ ಸಿಬ್ಬಂದಿ ನೇಮಕ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಸಂಪನ್ಮೂಲ ಕೊರತೆ ಕಂಡು ಬಂದರೆ ವಿಪತ್ತು ನಿರ್ವಹಣಾ ನಿಧಿಯಿಂದ ಖರ್ಚು ಮಾಡಿ ಎಂದು ಸಲಹೆ ಮಾಡಿದರು. ಸಾಧ್ಯವಾದಷ್ಟು ಜನಪ್ರತಿನಿಧಿಗಳು ಸಲಹೆ ಸಹಕಾರ ಪಡೆದುಕೊಳ್ಳಿ. ಅವರು ಎತ್ತುವ ಆಕ್ಷೇಪಗಳಿಗೆ ಕಿವಿಗೊಡಿ. ಸಮಸ್ಯೆಗಳ ಬಗ್ಗೆ ತಿಳಿಸಿದರೆ ಕೂಡಲೇ ಅದನ್ನು ಬಗೆಹರಿಸಿ ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಕೋವಿಡ್‌ ನಿರ್ವಹಣೆಯಲ್ಲಿ ಮೊದಲಿನಿಂದಲೂ ರಾಮನಗರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಈಗಲೂ ಉತ್ತಮ ನಿರ್ವಹಣೆ ಇದೆ. ದಿನಕ್ಕೆ 1050ರಿಂದ 1100 ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಿದ್ದೇನೆ.

ಹಾಗೆಯೇ, ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇಲ್ಲ. ದಯಾನಂದ ಸಾಗರ್‌ ಮೆಡಿಕಲ್‌ ಕಾಲೇಜ್‌, ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜ್‌ನಲ್ಲಿ ಬೆಡ್‌ಗಳು ಸಾಕಷ್ಟು ಲಭ್ಯ ಇವೆ. ಸರ್ಕಾರವು ಕೂಡ ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ಆಸ್ಪತ್ರೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ಸಾವು ಆದರೂ ತಪ್ಪದೇ ಶವ ಪರೀಕ್ಷೆ ಮಾಡಿ. ಅವರು ಯಾವ ಕಾರಣಕ್ಕೆ ಸತ್ತರು ಎಂಬ ಮಾಹಿತಿ ನಮ್ಮಲ್ಲಿರುತ್ತದೆ. ಜತೆಗೆ, ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಎಲ್ಲರೂ ತಪ್ಪದೇ ಭೇಟಿ ನೀಡಿ ಎಂದು ಸೂಚಿಸಿದರು.

ಲಸಿಕೆ ಪಡೆಯಲು ಮನವೊಲಿಸಿ : ಅಲ್ಪಸಂಖ್ಯಾತ ಸಮುದಾಯದವರೂ ಸೇರಿ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ದೂರು ಬಂದಿವೆ. ಅವರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಿ. ಅದಕ್ಕೆ ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆಯಿರಿ. ಯಾವ ಕಾರಣಕ್ಕೂ ಲಸಿಕೆ ಅಭಿಯಾನ ವ್ಯತ್ಯಾಸ ಆಗಬಾರದು ಎಂದು ನಿರ್ದೇಶಿಸಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದ ಡಿ ಕೆ ಸುರೇಶ್‌ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಕೆಲ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಅವುಗಳನ್ನು ಜಾರಿಗೆ ತರಲಾಗುವುದು ಎಂದರು. ಸದ್ಯಕ್ಕೆ ರಾಮನಗರ ಜಿಲ್ಲಾ ಕೇಂದ್ರದಲ್ಲಿಯೇ ಕೋವಿಡ್‌ ಟೆಸ್ಟ್‌ಗಳನ್ನು ಮಾಡಲಾಗುತ್ತಿದೆ.

ಅಲ್ಲಿ ಯಾವುದೇ ಕೊರತೆ ಇಲ್ಲ ಎಂದ ಅವರು, ತಮ್ಮಲ್ಲಿ ರೋಗ ಲಕ್ಷಣಗಳಿದ್ದರೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬಾರದು. ಎಲ್ಲೆಲ್ಲಿ ಪರೀಕ್ಷೆ ಮಾಡಲಾಗುತ್ತದೆ ಎಂಬ ವಿವರಗಳನ್ನು ಜನರಿಗೆ ವ್ಯಾಪಕವಾಗಿ ತಿಳಿಸುವಂತೆ ಸೂಚಿಸಿದ್ದೇನೆ ಎಂದರು.

ಸಂಸದ ಡಿ ಕೆ ಸುರೇಶ್, ಶಾಸಕರಾದ ಅನಿತಾ ಕುಮಾರಸ್ವಾಮಿ, ಮಂಜುನಾಥ, ರವಿ, ಜಿಲ್ಲಾ ಪಂಚಾಯತ್‌ ಸಿಇಒ ಇಕ್ರಂ, ಜಿಲ್ಲಾ ಪೊಲೀಸ್‌ ವರಿಷ್ಠ ಗಿರೀಶ್‌, ಡಿಹೆಚ್‌ಒ ಡಾ. ನಿರಂಜನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಇದೇ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಕೋವಿಡ್ ನಿರ್ವಹಣೆ ಆಗುತ್ತಿದೆ. 11 ಸಾವಿರ ಕೋವಿಡ್ ಟೆಸ್ಟ್ ಆಗ್ತಿದೆ. ಕೋವಿಡ್ ಪಾಸಿಟಿವ್ ಇರುವವರಿಗೆ ಹೋಮ್ ಐಸೋಲೇಷಮ್ ಅವಕಾಶ ಇಲ್ಲ. ಎಲ್ಲರನ್ನು ಕೋವಿಡ್ ಕೇರ್ ಸೆಂಟರ್, ಆಸ್ಪತ್ರೆಯಲ್ಲಿ ದಾಖಲು ಮಾಡಲು ಅವಕಾಶ ಇದೆ. ತಕ್ಷಣ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡರೆ ಅವರನ್ನು ಟೆಸ್ಟ್ ಮಾಡಿಸಿ ವರದಿ ಕೊಡಬೇಕು‌. ತಕ್ಷಣ ಚಿಕಿತ್ಸೆ ಮಾಡಬೇಕು ಎಂದು ಹೇಳಿದರು.

ಯಾವುದೇ ಸಮಸ್ಯೆ ಇಲ್ಲದೆ ಉತ್ತಮ ನಿರ್ವಹಣೆ ಮಾಡಲು ಅವಕಾಶ ಆಗುತ್ತದೆ. ನಾನ್ ಕೋವಿಡ್ ಟ್ರೀಟ್​ಮೆಂಟ್​ ಕೂಡ ಮುಂದುವರೆಯುತ್ತಿದೆ. ಅವರಿಗೆ ಯಾವುದೇ ಸಮಸ್ಯೆ ಆಗಲ್ಲ. ನಮಗೆ ಬೇಕಾಗಿರುವ ಬೆಡ್ ರಾಜರಾಜೇಶ್ವರಿ ಆಸ್ಪತ್ರೆ, ದಯಾನಂದ ಸಾಗರ್ ಆಸ್ಪತ್ರೆಯಲ್ಲಿವೆ ಎಂದರು.

ಅರ್ಲಿ ಡಿಟೆಕ್ಟ್, ಅರ್ಲಿ ಟ್ರೀಟ್​ಮೆಂಟ್​ ಪ್ರಾರಂಭ ಮಾಡಿದರೆ ಯಾವುದೇ ಲಾಕ್​ಡೌನ್​ ಮಾಡುವ ಅವಶ್ಯಕತೆ ಇಲ್ಲ. ಜೀವ ಮತ್ತು ಜೀವನಾಂಶ ಮುಖ್ಯ. ಕೋವಿಡ್ ಒಂದು ವರ್ಷದಿಂದ ನಮ್ಮ ಪ್ರಕೃತಿಯಲ್ಲಿದೆ. ಸರ್ಕಾರ ಎಲ್ಲವನ್ನೂ ತಿಳಿಸಿದೆ. ಎಲ್ಲರೂ ಸುರಕ್ಷಿತವಾಗಿ ಇರಬೇಕು.

ಜೀವ ರಕ್ಷಣೆ ಮಾಡುವುದು ನಮ್ಮ ಮೊದಲ ಆದ್ಯತೆ. ಯಾವುದೇ ಗೊಂದಲ ಇಲ್ಲ. ಲಾಕ್​ಡೌನ್​ ಬಗ್ಗೆ ಮುಖ್ಯಮಂತ್ರಿಗಳು ಎಲ್ಲವನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದರು. ಐಟಿ, ಬಿಟಿ ಕಂಪನಿಗಳು ವರ್ಕ್ ಫ್ರಮ್ ಹೋಮ್​ನಿಂದ ಹಲವಾರು ಉದ್ಯಮಿಗಳಿಗೆ ನಷ್ಟವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ಬಂದ ಮೇಲೆ ಕೆಲಸದ ರೀತಿ ಬದಲಾವಣೆಯಾಗಿದೆ. ಎಲ್ಲಾ ಸೌಲಭ್ಯಗಳು ಅವರ ಬೆರಳಿನ ತುದಿಯಲ್ಲಿವೆ. ವರ್ಚುವಲ್ ವರ್ಡ್ ಜೊತೆಗೆ ಫಿಸಿಕಲ್ ವರ್ಡ್ ಕೂಡ ಇರುತ್ತದೆ. ವಾರಕ್ಕೆ ಎರಡು ಮೂರು ದಿನ ಬರುವ ವ್ಯವಸ್ಥೆ ಇದೆ. ಐಟಿ-ಬಿಟಿ ಕಂಪನಿಗಳು ನಿರ್ಧಾರ ಮಾಡಿಕೊಳ್ಳುತ್ತವೆ ಎಂದರು.

ಓದಿ: ಕೊರೊನಾ ಎರಡನೇ ಅಲೆಗೆ ಪೊಲೀಸ್ ಇಲಾಖೆ ಹೈರಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.