ETV Bharat / state

ಮಾತಾ ಅಮೃತಾನಂದಮಯಿ ಆಶೀರ್ವಾದ ಪಡೆದ ಡಿಸಿಎಂ ಅಶ್ವತ್ಥ ನಾರಾಯಣ - Mata Amritanandamayi

ಮಾತಾ ಅಮೃತಾನಂದಮಯಿ ಅವರ ಆಶ್ರಮಕ್ಕೆ ಬರಬೇಕು ಎಂಬುದು ನನ್ನ ಬಹುದಿನಗಳ ಕನಸಾಗಿತ್ತು. ಆ ಕನಸು ಇಂದು ನನಸಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

Ashwathth Narayan  takes blessing of Mata Amritanandamayi
ಮಾತಾ ಅಮೃತಾನಂದಮಯಿ ಅವರ ಆಶೀರ್ವಾದ ಪಡೆದ ಡಿಸಿಎಂ ಅಶ್ವತ್ಥ್ ನಾರಾಯಣ
author img

By

Published : Mar 17, 2021, 6:37 PM IST

ಕೊಲ್ಲಂ/ಬೆಂಗಳೂರು: ಕೇರಳ ಬಿಜೆಪಿ ಸಹಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅಮೃತಪುರಿಗೆ ತೆರಳಿ ಮಾತಾ ಅಮೃತಾನಂದಮಯಿ ಆಶೀರ್ವಾದ ಪಡೆದರು.

ಕೊಲ್ಲಂ ಸಮೀಪವಿರುವ ಆಶ್ರಮಕ್ಕೆ ಭೇಟಿ ನೀಡಿದ ಅವರು ಅಮ್ಮನವರ ಆಶೀರ್ವಾದ ಪಡೆದ ನಂತರ ಪ್ರಚಲಿತ ಸಮಸ್ಯೆಗಳು, ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಂಡಿರುವ ಸುಧಾರಣೆಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. ಜತೆಗೆ, ಯುವಜನರ ಸಮಸ್ಯೆಗಳು, ಪ್ರಚಲಿತ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅವರ ಜತೆ ಚರ್ಚೆ ನಡೆಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ,ಮಾತಾ ಅಮೃತಾನಂದಮಯಿ ಅವರ ಆಶ್ರಮಕ್ಕೆ ಬರಬೇಕು ಎಂಬುದು ನನ್ನ ಬಹು ದಿನಗಳ ಕನಸಾಗಿತ್ತು. ಆ ಕನಸು ಇಂದು ನನಸಾಗಿದೆ. ಇಂದು ಆಶ್ರಮಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದೆ. ಅಮ್ಮನವರು ಬೆಂಗಳೂರಿಗೆ ಬಂದಾಗಲೆಲ್ಲ ನಾನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದೆ. ಶಿಕ್ಷಣ, ಸಾಮಾಜಿಕ, ಆಹಾರ, ವಸತಿ, ಆರೋಗ್ಯ ಜೀವನೋಪಾಯ, ಪರಿಸರ ಇತ್ಯಾದಿ ಕ್ಷೇತ್ರಗಳಲ್ಲಿ ಅವರು ಅಮೋಘ ಸೇವೆ ಮಾಡುತ್ತಾ ಸಮಾಜಕ್ಕೆ ಒಳ್ಳೆಯದು ಮಾಡುತ್ತಿದ್ದಾರೆ. ಜತೆಗೆ, ಪ್ರಕೃತಿ ವಿಕೋಪದಂಥ ಕ್ಲಿಷ್ಟ ಸಂದರ್ಭಗಳಲ್ಲೂ ಅಮ್ಮನವರು ಮೊದಲು ನೆರವಿಗೆ ಧಾವಿಸುತ್ತಾರೆ ಎಂದರು.

ಜನರಿಗೆ ಧರ್ಮ ಮಾರ್ಗವನ್ನು ತೋರುವುದು ಮಾತ್ರವಲ್ಲದೆ, ಜನರ ಬದುಕನ್ನು ಸಬಲೀಕರಣ ಮಾಡುವಲ್ಲಿಯೂ ಅಮ್ಮ ಮಹತ್ವದ ಕೆಲಸ ಮಾಡುತ್ತಿದ್ದಾರೆ. ಕೇರಳ ಮಾತ್ರವಲ್ಲದೆ, ದೇಶಾದ್ಯಂತ ಮತ್ತು ಜಗತ್ತಿನ ಉದ್ದಗಲಕ್ಕೂ ಅವರು ಸೇವೆ ಮಾಡುತ್ತಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.