ETV Bharat / state

ಐಟಿ-ಬಿಟಿ ಕಂಪನಿಗಳಲ್ಲಿ 'ವರ್ಕ್‌ ಫ್ರಮ್‌ ಹೋಮ್‌' ಕಟ್ಟುನಿಟ್ಟು ಜಾರಿಗೆ ಡಿಸಿಎಂ ಅಶ್ವತ್ಥನಾರಾಯಣ ಸೂಚನೆ - ಐಟಿ-ಬಿಟಿ ಕಂಪನಿ

ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರು ಇಂದು ಐಟಿ-ಬಿಟಿ, ಸ್ಟಾರ್ಟ್‌ ಅಪ್‌ ಕಂಪನಿಗಳ ಮುಖ್ಯಸ್ಥರ ಜತೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಕೊರೊನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದ್ದಾರೆ. ಈ ವೇಳೆ ಉದ್ಯೋಗಿಗಳಿಗೆ ವರ್ಕ್​ ಫ್ರಮ್​ ಹೋಮ್​ ಅನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದ್ದಾರೆ.

DCM Ashwaththa Narayana
ಡಿಸಿಎಂ ಅಶ್ವತ್ಥನಾರಾಯಣ
author img

By

Published : Mar 20, 2020, 5:59 PM IST

ಬೆಂಗಳೂರು: ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದಂತೆ ಐಟಿ-ಬಿಟಿ ಕಂಪನಿಗಳ ಎಲ್ಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕೆಂದು ನೀಡಿದ್ದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ನಿರ್ದೇಶಿಸಿದ್ದಾರೆ.

ಐಟಿ- ಬಿಟಿ, ಸ್ಟಾರ್ಟ್‌ ಅಪ್‌ ಕಂಪನಿಗಳ ಮುಖ್ಯಸ್ಥರ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಡಾ. ಅಶ್ವತ್ಥನಾರಾಯಣ, ಕೊರೊನಾ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿವರಿಸಿದರು. ಜತೆಗೆ ಅವರಿಂದ ಸಲಹೆ- ಸೂಚನೆಗಳನ್ನು ಪಡೆದು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ರು.

ಐಟಿ- ಬಿಟಿ ಕಂಪನಿಗಳ ಮುಖ್ಯಸ್ಥರ ಜತೆ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ಡಿಸಿಎಂ ಅಶ್ವತ್ಥನಾರಾಯಣ್​

ರಾಜ್ಯದ ಐಟಿ ವಿಷನ್‌ ಗ್ರೂಪ್‌ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣ, ಬಿಟಿ ವಿಷನ್‌ ಗ್ರೂಪ್‌ನ ಸದಸ್ಯೆ ಡಾ. ಕಿರಣ್‌ ಮಜುಂದಾರ್‌ ಷಾ, ನಾಸ್ಕಾಂ ಅಧ್ಯಕ್ಷೆ ದೇಬಜಾನಿ ಘೋಷ್‌ ಹಾಗೂ ಇನ್ನಿತರ ಪ್ರಮುಖ ಐಟಿ ಸಂಸ್ಥೆಗಳ ಮುಖ್ಯಸ್ಥರು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ, ಕೊರೊನಾ ಸೋಂಕಿತರು ಅಥವಾ ಕ್ವಾರಂಟೈನ್‌ನಲ್ಲಿರುವವರ ಮೇಲೆ ನಿಗಾ ವಹಿಸುವ ಜತೆಗೆ ಅಗತ್ಯ ಸೌಲಭ್ಯ ಒದಗಿಸಲು ಅಭಿವೃದ್ಧಿ ಪಡಿಸುವ ಆ್ಯಪ್‌ ಹಾಗೂ ದೇಶಿಯವಾಗಿ ಅಭಿವೃದ್ಧಿ ಪಡಿಸುತ್ತಿರುವ ಟೆಸ್ಟ್‌ ಕಿಟ್ ಬಗ್ಗೆ ಡಾ. ಅಶ್ವತ್ಥನಾರಾಯಣ ಮಾಹಿತಿ ಪಡೆದರು.

ಕೊರೊನಾ ನಿಯಂತ್ರಣಕ್ಕಾಗಿ ಐಟಿ ಬಿಟಿ, ಸ್ಟಾರ್ಟ್‌ ಅಪ್‌ ಕಂಪನಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಈ ಮೊದಲೇ ಸಲಹೆ‌ ನೀಡಲಾಗಿತ್ತು. ಆದರೆ, ಕೆಲವಡೆ ಇದು ಜಾರಿ ಆಗಿಲ್ಲ ಎಂಬ ದೂರುಗಳು ಕೇಳಿಬಂದಿದ್ದವು. ಮುಂದಿನ ದಿನಗಳಲ್ಲಿ ವರ್ಕ್‌ ಫ್ರಮ್‌ ಹೋಮ್​ ನೀತಿಯ ಕಟ್ಟುನಿಟ್ಟು ಜಾರಿಗೆ ಆದೇಶಿಸಲಾಗಿದೆ. ಶೀಘ್ರದಲ್ಲೇ ಈ ಸಂಬಂಧ ನಿರ್ದೇಶನ ಹೊರಡಿಸಲಾಗುವುದು. ಸರ್ಕಾರ ಇದನ್ನು ಕಡ್ಡಾಯಗೊಳಿಸುವ ಬದಲು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಕಂಪನಿಗಳೇ ಅಗತ್ಯ ನಿರ್ಣಯ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಸರ್ಕಾರಿ ಕೆಲಸ, ಆರೋಗ್ಯ ಹಾಗೂ ಬ್ಯಾಂಕಿಂಗ್‌ ಮುಂತಾದ ಅಗತ್ಯ ಸೇವೆ ಒದಗಿಸುವಂಥ ಐಟಿ ಉದ್ಯೋಗಿಗಳನ್ನು ಮಾತ್ರ ಕಚೇರಿಗೆ ಕರೆಸಲಾಗುತ್ತಿದೆ. ಕೆಲ ಸೇವೆಗಳಲ್ಲಿ ಗೌಪ್ಯತೆ ಕಾಯ್ದುಕೊಳ್ಳುವ ಅನಿವಾರ್ಯತೆಯೂ ಇರುತ್ತದೆ. ಉಳಿದಂತೆ ಹೆಚ್ಚಿನವರು ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇನ್ನೂ ಹೆಚ್ಚಿನ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗುವುದು ಎಂದು ಐಟಿ, ಬಿಟಿ ಕಂಪನಿ ಮುಖ್ಯಸ್ಥರು ಆಶ್ವಾಸನೆ ನೀಡಿದರು ಎಂದು ಡಾ. ಅಶ್ವತ್ಥನಾರಾಯಣ ತಿಳಿಸಿದರು.

ಮನೆಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಬ್ರಾಡ್‌ ಬ್ಯಾಂಡ್‌, ಇಂಟರ್​ನೆಟ್‌, ವಿದ್ಯುತ್ ಸಮಸ್ಯೆ ಎದುರಾಗುತ್ತದೆ. ಜತೆಗೆ, ಬಹಳಷ್ಟು ಮಂದಿ ಯುವ ಉದ್ಯೋಗಿಗಳು ಊಟದ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಪಿಜಿಗಳಲ್ಲಿ ಸಮಸ್ಯೆ ಆಗುತ್ತಿವೆ ಎಂಬ ವಿಷಯಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಬೆಸ್ಕಾಂ ಹಾಗೂ ಟೆಲಿಕಾಂ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗುವುದು. ಈ ಎಲ್ಲ ಸಮಸ್ಯೆಗಳ ಬಗ್ಗೆ ಗಮನ ಹರಿಸಿ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದು. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಈಗಾಗಲೇ 200 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.

ಇತರ ವ್ಯವಸ್ಥೆ : ಕೊರೊನಾ ತಡೆಗೆ ಕೈಗೊಳ್ಳಬಹುದಾದದ ಕ್ರಮಗಳ ಬಗ್ಗೆ ಜನಕ್ಕೆ ಮಾಹಿತಿ ನೀಡಲು ಸಾಮಾಜಿಕ ಜಾಲತಾಣ ಹಾಗೂ ಆ್ಯಪ್‌ಗಳ ಮೂಲಕ ಎಲ್ಲ ಭಾಷೆಗಳಲ್ಲಿ ಮಾಹಿತಿ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. 104 ಸಹಾಯವಾಣಿ ಸಂಪರ್ಕ ಸುಗಮಗೊಳಿಸಲು ಐವಿಆರ್‌ಎಸ್‌ ನೆರವು ಪಡೆಯಲಾಗುವುದು. ಜತೆಗೆ ಚಾಟ್‌ ಮೂಲಕವೂ ಮಾಹಿತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಟೆಲಿಮೆಡಿಸನ್‌ ತಂತ್ರಜ್ಞಾನದ ಮೂಲಕ ರಿಮೋಟ್‌ ಮೆಡಿಸನ್‌ ಸೇವೆ ಆರಂಭಿಸಲಾಗುವುದು ಎಂದರು.

ಟೆಸ್ಟ್‌ ಕಿಟ್‌: ರೋಗ ಪತ್ತೆಗೆ ಟೆಸ್ಟ್‌ ಕಿಟ್‌ಗಳನ್ನು ಸದ್ಯ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಅವಲಂಬನೆಯನ್ನು ಕಡಿಮೆ ಮಾಡಲು ದೇಶಿಯವಾಗಿ ಕಿಟ್‌ ಅಭಿವೃದ್ಧಿ ಪಡಿಸಲಾಗುತ್ತಿದೆ. ಐಐಎಸ್‌ಸಿ ನೆರವಿನೊಂದಿಗೆ ಟೆಸ್ಟ್‌ ಕಿಟ್‌ ಅಭಿವೃದ್ಧಿ ಪಡಿಸಲಾಗುತ್ತಿದ್ದು, 10 ದಿನಗಳಲ್ಲಿ ಬಳಕೆಗೆ ಲಭ್ಯವಾಗಲಿದೆ. ಸದ್ಯ ಅದರ ಬೆಲೆ ದುಬಾರಿಯಾಗಿದ್ದು, ನಾವು ಅಭಿವೃದ್ಧಿಪಡಿಸಲಿರುವ ಕಿಟ್‌ನಲ್ಲಿ ಪರೀಕ್ಷಾ ವೆಚ್ಚ 800 ರೂ. ಆಗಬಹುದು ಎಂದು ಶಂಕರ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಕೆ.ಎನ್‌. ಶ್ರೀಧರ್ ವಿವರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.