ಬೆಂಗಳೂರು: ಕೇರಳ ಪ್ರವಾಸದಲ್ಲಿರುವ ಡಿಸಿಎಂ ಡಾ. ಅಶ್ವತ್ಥನಾರಾಯಣ ಅವರು ಕೊಚ್ಚಿಯ ಪಲಾರಿವಟ್ಟಂನ ಸೈರೊ ಮಲಬಾರ್ ಕ್ಯಾಥೊಲಿಕ್ ಚರ್ಚ್ನ ಮುಖ್ಯಸ್ಥರಾದ ಕಾರ್ಡಿನಲ್ ಜಾರ್ಜ್ ಅಲೆಂಚೆರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯಗಳತ್ತ ಗಮನಹರಿಸಿರುವ ಡಿಸಿಎಂ, ಕೇರಳಕ್ಕೆ ತೆರಳಿದ್ದಾರೆ. ಈ ವೇಳೆ, ಸೈರೋ ಮಲಬಾರ್ ಚರ್ಚ್ ಮುಖ್ಯಸ್ಥರನ್ನು ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ. ಇದೊಂದು ಸೌಹಾರ್ದ ಭೇಟಿ ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಜೈಜೊ ಜೋಸೆಫ್ ಇದ್ದರು.