ETV Bharat / state

ನಮ್ಮ ಮೆಟ್ರೋ ಕೇವಲ 6 ಕೋಟಿ ರೂಪಾಯಿ ಲಾಭದಲ್ಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ - ನಮ್ಮ ಮೆಟ್ರೋ ಬಂಡವಾಳ

ಬೆಂಗಳೂರು ಮೆಟ್ರೋ ರೈಲು ನಿಗಮದ ಅಧಿಕಾರಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ ನಡೆಸಿದರು.

DCM meeting with Metro officials
DCM meeting with Metro officials
author img

By

Published : Jun 6, 2023, 7:49 PM IST

Updated : Jun 6, 2023, 8:31 PM IST

ಅಧಿಕಾರಿಗಳ ಜತೆ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಮೆಟ್ರೋ ರೈಲು ನಿಗಮದ (ಬಿಎಂಆರ್ಸಿಎಲ್) ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದರು. ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಎಂಆರ್​ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರರು ಭಾಗವಹಿಸಿದ್ದರು.

ಡಿ.ಕೆ. ಶಿವಕುಮಾರ್ ಮಾತನಾಡಿ, ಮೆಟ್ರೋ ರೈಲು ನಿಗಮದ ಅಧಿಕಾರಿಗಳ ಸಭೆ ಮಾಡಿ, ಕಾರ್ಯವೈಖರಿ ಪರಿಶೀಲನೆ ಮಾಡಿದ್ದೇನೆ. ಮೆಟ್ರೋ ಕಾರ್ಯನಿರ್ವಹಣೆ, ಮುಂದಿನ ಕಾರ್ಯಯೋಜನೆ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದೆಹಲಿ ಮೆಟ್ರೋ ರೈಲು ನಂತರ ನಮ್ಮದು ದೇಶದ ಎರಡನೇ ಅತಿ ದೊಡ್ಡ ಮೆಟ್ರೋ ಆಗಿದ್ದು, ವಿಶ್ವದರ್ಜೆ ಮಟ್ಟದ ಸೇವೆ ನೀಡುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಯೋಗದಲ್ಲಿ ನಮ್ಮ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. 48 ಕೋಟಿ ರೂ ಆದಾಯದಲ್ಲಿ 42 ಕೋಟಿ ರೂ.ಯಷ್ಟು ಹಣ ಕಾರ್ಯನಿರ್ವಹಣೆಗೆ ಖರ್ಚಾಗುತ್ತಿದೆ. ಬಂಡವಾಳ ಹೂಡಿಕೆ ಹೊರತಾಗಿ ಕೇವಲ 6 ಕೋಟಿ ರೂ ಲಾಭದಲ್ಲಿದೆ ಎಂದರು.

ಪ್ರಯಾಣಿಕರ ಹೊರತಾಗಿ ಇತರೆ ಮೂಲಗಳಿಂದ ಆದಾಯ ಗಳಿಸುವ ಕುರಿತು ನಾನು ಕೆಲವು ಸಲಹೆ ನೀಡಿದ್ದೇನೆ. ಜಾಹೀರಾತು ಬಗ್ಗೆ ಇರುವ ನಿರ್ಬಂಧ ಸರಿಪಡಿಸುತ್ತೇವೆ. ಇದರ ಜತೆಗೆ ಅವರಿಗೆ ಸಬ್ಸಿಡಿಯಲ್ಲಿ ಸಿಗುತ್ತಿರುವ ವಿದ್ಯುತ್ ಅನ್ನು ಗ್ರೂಪ್ ಕ್ಯಾಪಿಟಿವ್ ಮೂಲಕ ಮತ್ತಷ್ಟು ಕಡಿಮೆ ದರಕ್ಕೆ ಪಡೆಯುವ ಸಲಹೆ ನೀಡಿದ್ದೇನೆ. 2ನೇ ಹಂತದ ಯೋಜನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವರು ಒಪ್ಪಿಗೆ ನೀಡಬೇಕಿದೆ. 3ಎ ಹಂತದ ಯೋಜನೆಯಲ್ಲಿ ಸರ್ಜಾಪುರದಿಂದ ಹೆಬ್ಬಾಳದವರೆಗೆ ಸಮೀಕ್ಷೆ ನಡೆಯುತ್ತಿದೆ. ಮುಂದೆ ಇದನ್ನು ಎಲ್ಲೆಲ್ಲಿ ವಿಸ್ತರಣೆ ಮಾಡಬಹುದು ಎಂದು ಸಮೀಕ್ಷೆ ಮಾಡಲು ಸೂಚಿಸಿದ್ದೇನೆ ಎಂದು ವಿವರ ನೀಡಿದರು.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಮಾರ್ಗ ಯಾವಾಗ ಪೂರ್ಣಗೊಳ್ಳಲಿದೆ ಎಂಬ ಪ್ರಶ್ನೆಗೆ, ಬೈಯ್ಯಪ್ಪನಹಳ್ಳಿ ಕೆ.ಆರ್. ಪುರಂ ಮೆಟ್ರೋ ಜುಲೈ ವೇಳೆಗೆ, ಕೆಂಗೇರಿ ಹಾಗೂ ಚಲಘಟ್ಟ ಆಗಸ್ಟ್ ಅಥವಾ ಸೆಪ್ಟೆಂಬರ್​ನಲ್ಲಿ, ನಾಗಸಂದ್ರ ಹಾಗೂ ಮಾದವಾರ ಸೆಪ್ಟೆಂಬರ್, ಅಕ್ಟೋಬರ್ ವೇಳೆಗೆ ಸಿದ್ಧವಾಗಬಹುದು. ಇನ್ನು ನೂತನ ಮಾರ್ಗ ಬೊಮ್ಮಸಂದ್ರದಿಂದ ಆರ್.ವಿ. ರಸ್ತೆ ಮಾರ್ಗ ಅಕ್ಟೋಬರ್-ನವೆಂಬರ್ ವೇಳೆಗೆ ಆಗಲಿದೆ. ವಿಮಾನ ನಿಲ್ದಾಣಕ್ಕೆ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಮಾರ್ಗ 2026ರ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಸಿಲ್ಕ್ ಬೋರ್ಡ್​ನಿಂದ ಕೆ.ಆರ್. ಪುರಂವರೆಗಿನ ಮಾರ್ಗ ಕೂಡ ಇದೇ ಸಮಯದಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಮೂರನೇ ಹಂತದ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಬಗ್ಗೆ ಕೇಳಿದಾಗ, ಕೇಂದ್ರ ಸರ್ಕಾರ ಅನುಮತಿ ನೀಡಬೇಕಿದೆ. ಕೆಲವು ದಾಖಲೆಗಳನ್ನು ಕೇಳಿದ್ದು, ಅವುಗಳನ್ನು ಒದಗಿಸಲಾಗಿದೆ. ನಾನು ದೆಹಲಿಗೆ ಹೋಗಿ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ಮೆಟ್ರೋ ಕಾಮಗಾರಿ ವಿಳಂಬ ಆರೋಪದ ಬಗ್ಗೆ ಕೇಳಿದಾಗ, ಇಂದಿನ ಚರ್ಚೆಯಲ್ಲಿ ಅಧಿಕಾರಿಗಳು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ರಾತ್ರಿ ವೇಳೆ ಈ ಕಾಮಗಾರಿಗಳು ನಡೆಯುತ್ತಿವೆ. ಹಗಲಲ್ಲಿ ಸಿಮೆಂಟ್, ಸಾಮಗ್ರಿ ತಲುಪಿಸಲು ಆಗುತ್ತಿಲ್ಲ. ಈ ವಿಚಾರವಾಗಿ ಪೊಲೀಸರ ಜತೆ ಸಭೆ ಮಾಡುತ್ತೇನೆ. ಈ ವಿಚಾರದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.

ಇದನ್ನೂ ಓದಿ: ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವುದೇ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Last Updated : Jun 6, 2023, 8:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.