ETV Bharat / state

ಸಿಎಂ ಜನಸ್ಪಂದನ ಮಹತ್ವದ ಹೆಜ್ಜೆ.. ಮನೆ ಬಾಗಿಲಿಗೆ ಆಡಳಿತದತ್ತ ದಿಟ್ಟ ಹೆಜ್ಜೆ ; ಡಿಸಿಎಂ ಶಿವಕುಮಾರ್​

ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದೆ. ಸಮಸ್ಯೆ ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

author img

By ETV Bharat Karnataka Team

Published : Nov 27, 2023, 10:06 PM IST

Etv Bharatdcm-d-k-shivakumar-reaction-on-cm-janaspandana-program
ಸಿಎಂ ಜನಸ್ಪಂದನ ಮಹತ್ವದ ಹೆಜ್ಜೆ, ಮನೆ ಬಾಗಿಲಿಗೆ ಆಡಳಿತ ಆಶಯಕ್ಕೆ ಮತ್ತಷ್ಟು ಬಲ: ಡಿ ಕೆ ಶಿವಕುಮಾರ್​

ಬೆಂಗಳೂರು: ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಿಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನರು ತತ್ತರಿಸಿ ಹೋಗಿದ್ದರು. ಅವರ ಸಮಸ್ಯೆಗಳಿಗೆ ಪರಿಹಾರ ಸಿಗದೇ ಹೈರಾಣಾಗಿದ್ದರು. ಇದೀಗ ಆ ಪರಿಸ್ಥಿತಿ ಬದಲಾಗಿದೆ. ಅದರ ಮುಂದಿನ ಹೆಜ್ಜೆಯಾಗಿ ಜನ ಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಉಳಿದ ಸಮಸ್ಯೆಗಳನ್ನು ಆಯಾ ಇಲಾಖೆ ಮುಖ್ಯಸ್ಥರು ಕಾಲಮಿತಿಯಲ್ಲಿ ಬಗೆಹರಿಸಿ ವಾಸ್ತವ ಸಂಗತಿಯನ್ನು ಅರ್ಜಿದಾರರಿಗೆ ಒದಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಈಗಾಗಲೇ ಎಲ್ಲ ಸಚಿವರು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದಂತೆ ಜನರ ಮನೆ ಬಾಗಿಲಿಗೆ ಆಡಳಿತ ಎಂಬ ಮಾತನ್ನು ಈಡೇರಿಸಿದ ಸಂತೃಪ್ತ ಭಾವ ತಮಗಿದೆ. ಮುಂದಿನ ದಿನಗಳಲ್ಲಿ ಆಡಳಿತಕ್ಕೆ ವೇಗ ನೀಡಿ ಸರ್ಕಾರದ ಎಲ್ಲ ಯೋಜನೆಗಳ ಲಾಭ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪಿಸುವಂತೆ ಎಚ್ಚರ ವಹಿಸಲಾಗುವುದು ಎಂದಿದ್ದಾರೆ.

ಸರ್ಕಾರದ ಆಶಯಗಳಿಗೆ ತಕ್ಕಂತೆ ನಮ್ಮ ಯೋಜನೆ ಮತ್ತು ಕಾರ್ಯಕ್ರಮಗಳು ಅನುಷ್ಠಾನ ಗೊಂಡಿವೆಯೇ ಎಂಬುದನ್ನು ತಿಳಿದುಕೊಳ್ಳಲು ಸಮೀಕ್ಷೆ ನಡೆಸುವ ಆಲೋಚನೆಯೂ ಇದೆ. ಈ ಬಗ್ಗೆ ಸಿಎಂ ಜತೆ ಸಮಾಲೋಚನೆ ನಡೆಸಲಾಗುವುದು. ಇಂದು ಬಹುದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡ ಜನರಿಗೆ ಇಲಾಖಾವಾರು ಉತ್ತರವನ್ನು ಕಾಲಮಿತಿಯಲ್ಲಿ ನೀಡುವ ಬಗ್ಗೆ ಸಿಎಂ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆಯೂ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಜನತಾದರ್ಶನದ ವೇಳೆ ಸ್ವೀಕಾರಗೊಂಡ ಅರ್ಜಿಗಳ ಇತ್ಯರ್ಥಕ್ಕೆ 15 ದಿನಗಳ ಗಡುವು: ಸಿಎಂ

3,812 ಅರ್ಜಿಗಳ ಸ್ವೀಕಾರ: ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟಾರೆ 3812 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ 2862 ಅರ್ಜಿಗಳನ್ನು ಈಗಾಗಲೇ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದ್ದು, 950 ಅರ್ಜಿಗಳನ್ನು ನೇರವಾಗಿ ಸ್ವೀಕರಿಸಲಾಗಿದೆ. ಇವುಗಳನ್ನೂ ಸಹ ಐಪಿಜಿಆರ್‌ಎಸ್‌ ತಂತ್ರಾಂಶದಲ್ಲಿ ನೋಂದಾಯಿಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಕ್ರಮಕ್ಕಾಗಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.