ETV Bharat / state

ವಿಶ್ವವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಜೊತೆ ಡಿಸಿಎಂ ಚರ್ಚೆ - Discussion of education board officials

ವಿವಿಗಳ ಮಟ್ಟದಲ್ಲಿ ಪ್ರಾಧಿಕಾರಿಗಳ ಪಾತ್ರ ಬಹು ಮುಖ್ಯವಾದದ್ದು. ಅದರಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯಂದ ಕೆಲಸ ಮಾಡಬೇಕಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

dcm-discussion-with-officers-of-the-board-of-education-on-the-development-of-universities
ವಿಶ್ವ ವಿದ್ಯಾಲಯಗಳ ಅಭಿವೃದ್ಧಿ ಕುರಿತು ಶಿಕ್ಷಣ ಮಂಡಲದ ‌ಪ್ರಾಧಿಕಾರಿಗಳ ಜೊತೆ ಡಿಸಿಎಂ ಚರ್ಚೆ
author img

By

Published : Oct 21, 2020, 2:41 PM IST

ಬೆಂಗಳೂರು: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲು ಸರ್ಕಾರ ಮತ್ತಷ್ಟು ದೃಢ ಹೆಜ್ಜೆಗಳನ್ನು ಇಡುತ್ತದೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲಾ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದರು.

ಭಾರತೀಯ ಶಿಕ್ಷಣ ಮಂಡಲದ ಕರ್ನಾಟಕ ಉತ್ತರ ಪ್ರಾಂತ ಹಾಗೂ ಬೆಳಗಾವಿಯ ರಾಣಿ ಚೆನ್ನಮ್ಮ ವಿವಿ ವತಿಯಿಂದ ಏರ್ಪಡಿಸಲಾಗಿದ್ದ "ವಿಶ್ವವಿದ್ಯಾಲಯಗಳ ಏಳಿಗೆಯಲ್ಲಿ ಪ್ರಾಧಿಕಾರಿಗಳ ಪಾತ್ರ" ವಿಷಯ ಕುರಿತ ಅನ್‌ಲೈನ್ ವಿಚಾರ ಸಂಕಿರಣದಲ್ಲಿ ಮಾತಾನಾಡಿದ ಅವರು, ಶಿಕ್ಷಣ ವ್ಯವಸ್ಥೆಯನ್ನು ಉನ್ನತಿಯತ್ತ ಕೊಡೊಯ್ಯಬೇಕಾದರೆ ನಾನು ಎನ್ನುವುದನ್ನು ಬಿಟ್ಟು ನಾವು ಎಂಬ ವಿಶಾಲ ತತ್ವದೊಂದಿಗೆ ಸಾಗಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ತರಲು ಸಾಧ್ಯವಾಗುತ್ತದೆ. ವಿಶಾಲ ತಳಹದಿಯ ಮೇಲೆ ಕೆಲಸ ಮಾಡುತ್ತಿರುವ ವಿವಿಗಳಲ್ಲಿ ಮಾತ್ರ ಇಂತಹ ನಡವಳಿಕೆಯಿಂದ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ಶೈಕ್ಷಣಿಕ ಸುಧಾರಣೆಗಳು:

ಶೈಕ್ಷಣಿಕವಾಗಿ ನಮ್ಮ ಸರ್ಕಾರವು ಕಳೆದ ಒಂದು ವರ್ಷದಲ್ಲಿ ಅನೇಕ ದಿಟ್ಟ ಹೆಜ್ಜೆಗಳನ್ನು ಇಟ್ಟಿದೆ. ಆದ್ಯತೆಯ ಮೇರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿದೆ. ಯಾವುದೇ ದೃಷ್ಟಿಕೋನದಲ್ಲಿ ನೋಡಿದರೂ ಕರ್ನಾಟಕಕ್ಕೆ ಈ ನೀತಿ ದೊಡ್ಡ ಕಾಣಿಕೆ ನೀಡಲಿದೆ. ಆ ಹಿನ್ನೆಲೆ ಸರ್ಕಾರವು ಶಿಕ್ಷಣ ನೀತಿಯನ್ನು ಅತ್ಯಂತ ಬದ್ಧತೆಯಿಂದ ಜಾರಿ ಮಾಡಲು ಮುಂದಾಗಿದೆ. ಈಗಾಗಲೇ ನೀತಿಯ ಜಾರಿಗೆ ಬೇಕಾದ ಕಾನೂನಾತ್ಮಕ-ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗುತ್ತಿದೆ. 2021ರ ಹೊತ್ತಿಗೆ ನೀತಿಯ ಜಾರಿ ಹಂತ ಹಂತವಾಗಿ ಆರಂಭವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ವಿವಿಗಳ ಮಟ್ಟದಲ್ಲಿ ಪ್ರಾಧಿಕಾರಿಗಳ ಪಾತ್ರ ಬಹು ಮುಖ್ಯವಾದದ್ದು. ಅದರಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯಂದ ಕೆಲಸ ಮಾಡಬೇಕಾಗುತ್ತದೆ. ಆ ನೀತಿಯ ಆಶಯಕ್ಕೆ ತಕ್ಕಂತೆ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂದು ಡಿಸಿಎಂ ಕಿವಿಮಾತು ಹೇಳಿದರು.

ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ಎಲ್ಲಾ ರೀತಿಯಲ್ಲೂ ಬದಲಿಸುವ ಶಕ್ತಿ ಶಿಕ್ಷಣ ನೀತಿಗೆ ಇದೆ. ಸಾಮಾಜಿಕ, ಆರ್ಥಿಕ ಬದಲಾವಣೆಗಳಿಗೆ ಕಾರಣವಾಗಲಿದೆ. ಹೀಗಾಗಿ ನೀತಿಯ ಜಾರಿಯಲ್ಲಿ ನಾವೆಲ್ಲರೂ ಯೋಧರಂತೆ ಕೆಲಸ ಮಾಡಬೇಕು. ಮುಖ್ಯವಾಗಿ ಸಿಂಡಿಕೇಟ್‌ ಮತ್ತು ಅಕಾಡೆಮಿಕ್‌ ಕೌನ್ಸಿಲ್‌ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಡಾ. ಅಶ್ವತ್ಥ ನಾರಾಯಣ ಒತ್ತಿ ಹೇಳಿದರು.

ಏನಿದು ಭಾರತೀಯ ಶಿಕ್ಷಣ ಮಂಡಲ?:

ಇದೊಂದು ರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದ್ದು, ಶಿಕ್ಷಣದ ಅಭಿವೃದ್ಧಿ ದಿಸೆಯಲ್ಲಿ ಕೆಲಸ ಮಾಡುತ್ತಿದೆ. ಭಾರತೀಯ ಶಿಕ್ಷಣ ಪದ್ಧತಿ, ಪರಂಪರೆ ಹಾಗೂ ಸಂಸ್ಕಾರಗಳ ಕುರಿತು ಜಾಗೃತಿ ಮೂಡಿಸುವ ಕೆಲಸವನ್ನು ಈ ಸಂಸ್ಥೆ ಮಾಡುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.