ETV Bharat / state

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಬಿಬಿಎಂಪಿ ಅಧಿಕಾರಿಗಳ ಅಮಾನತಿಗೆ ಡಿಕೆಶಿ ಸೂಚನೆ

author img

By

Published : Jun 5, 2023, 4:21 PM IST

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡಿರುವ ಬಿಬಿಎಂಪಿ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಸೂಚನೆ ನೀಡಿದರು.

dcm-dk-shivakumar-instructs-to-suspension-of-bbmp-officials
ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ : ಬಿಬಿಎಂಪಿ ಅಧಿಕಾರಿಗಳ ಅಮಾನತಿಗೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು : ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಮತ್ತು ಯೋಜನೆಯನ್ನು ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್​​ಗಳನ್ನು ಇಂದು ಸಂಜೆಯೊಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೃಹತ್​​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು.

ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು?, ಯೋಜನೆ ರೂಪಿಸಿದವರು ಯಾರು?, ಅನುಷ್ಠಾನಕ್ಕೆ ತಂದವರು ಯಾರು?, ಯಾಕಾಗಿ ಇದನ್ನು ಮಾಡಿದಿರಿ?, ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ?, ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಪ್ರಶ್ನಿಸಿದರು. ಡಿಕೆಶಿ​ ಪ್ರಶ್ನೆಗೆ ಅಧಿಕಾರಿಗಳು ಉತ್ತರಿಸಲು ತಡಬಡಾಯಿಸಿದರು. ಹೀಗಾಗಿ ತಕ್ಷಣವೇ ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಡಿಕೆಶಿ ಸೂಚನೆ ನೀಡಿದರು.

ಈಜಿಪುರ ಮೇಲ್ಸೇತುವೆ ಶೀಘ್ರ ಪೂರ್ಣಗೊಳಿಸಿ: ಇದೇ ವೇಳೆ ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ಕೈಗೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಅವರು ತುಷಾರ್ ಗಿರಿನಾಥ್ ಅವರಿಗೆ ತಿಳಿಸಿದರು. ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದರ ಜೊತೆಗೆ ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆಗಳನ್ನು ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಅಳವಡಿಸಲಾಗಿದೆ. ಇದಕ್ಕೆ ಅನುಮತಿ ಕೊಟ್ಟವರು ಯಾರು?, ಒಂದೊಂದು ಪ್ರದೇಶಕ್ಕೆ ಒಂದೊಂದು ನಿಯಮಗಳ ಅನ್ವಯ ಹೇಗೆ?, ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಮಾರ್ಗದರ್ಶನ ನೀಡಿದರು.

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ವಿಧಾನಸೌಧದಲ್ಲಿ ನಡೆದ ಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ನೀವು ಯಾವುದೇ ರಾಜಕೀಯ ಪಕ್ಷದವರು ಆಗಿರಬಹುದು. ಬೆಂಗಳೂರಿನ ಅಭಿವೃದ್ದಿಗೆ ಒಟ್ಟಿಗೆ ಕೆಲಸ ಮಾಡೋಣ. ರಾಜಕೀಯ ಬಿಟ್ಟು ಅಭಿವೃದ್ಧಿ ಮಾಡೋಣ ಎಂದರು.

ಬೆಂಗಳೂರು ಅಭಿವೃದ್ಧಿಗೆ ನಿಮ್ಮ ಸಂಪೂರ್ಣ ಸಹಕಾರ, ಸಲಹೆ ಅಗತ್ಯ. ರಾಜಕೀಯವಾಗಿ ಸೈದ್ಧಾಂತಿಕ ಭಿನ್ನಾಭಿಪ್ರಾಯ, ವ್ಯತ್ಯಾಸ ಏನೇ ಇರಬಹುದು. ಅದನ್ನು ಪಕ್ಕಕ್ಕಿಟ್ಟು ಅಭಿವೃದ್ಧಿಗೆ ಸಲಹೆ ಕೊಡಿ. ಎಲ್ಲರೂ ಒಟ್ಟಾಗಿ ಸೇರಿ ನಗರದ ಘನತೆ, ಗೌರವ, ಹೆಚ್ಚಿಸೋಣ ಎಂದು ಕರೆ ನೀಡಿದರು. ಬೆಂಗಳೂರಿನ ನಾಗರೀಕರು ಮೂಲಭೂತ ಸೌಕರ್ಯದ ಕೊರತೆ ಮತ್ತು ಭ್ರಷ್ಟಾಚಾರದಿಂದ ನಲುಗಿ ಹೋಗಿದ್ದಾರೆ. ಇವರಿಗೆಲ್ಲ ಸಮರ್ಪಕ ಮೂಲಭೂತ ಸೌಕರ್ಯ ಕಲ್ಪಿಸುವುದು ನಮ್ಮ ಕರ್ತವ್ಯ ಎಂದು ಇದೇ ವೇಳೆ ಹೇಳಿದರು.

ಇದನ್ನೂ ಓದಿ : 'ಶಾಂತಿಯುತ ಕರ್ನಾಟಕ' ಸಹಾಯವಾಣಿ ಆರಂಭಿಸಿ: ಸರ್ಕಾರಕ್ಕೆ ಸಚಿವ ಎಂ.ಬಿ.ಪಾಟೀಲ್‌ ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.