ETV Bharat / state

ಮಹಾನಗರ ವ್ಯಾಪ್ತಿಯ ಕಾಂಗ್ರೆಸ್ ಜನಪ್ರತಿನಿಧಿಗಳ ಜತೆ ಡಿಕೆಶಿ ಮಹತ್ವದ ಸಭೆ

ವಿಧಾನಸಭೆ ಚುನಾವಣೆ ಬೆನ್ನಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಬಿಬಿಎಂಪಿ ಚುನಾವಣೆ ಸಹ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕಾಂಗ್ರೆಸ್ ಪರವಾಗಿ ಬಿಬಿಎಂಪಿಯನ್ನು ಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಜನಪ್ರತಿನಿಧಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ ನೀಡಿದರು.

DK Shivakumar meeting with Congress representatives
ಮಹಾನಗರ ವ್ಯಾಪ್ತಿಯ ಕಾಂಗ್ರೆಸ್ ಜನಪ್ರತಿನಿಧಿಗಳ ಜತೆ ಡಿಕೆಶಿ ಮಹತ್ವದ ಸಭೆ
author img

By

Published : Jun 6, 2023, 7:02 AM IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಮುಖಂಡರ ಜತೆ ಸೋಮವಾರ ಸಂಜೆ ಸಭೆ ನಡೆಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿಯೇ ಬಿಬಿಎಂಪಿ ಚುನಾವಣೆ ಸಹ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕಾಂಗ್ರೆಸ್ ಪರವಾಗಿ ಬಿಬಿಎಂಪಿಯನ್ನು ಕೈವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಜನಪ್ರತಿನಿಧಿಗಳಿಗೆ ಸೂಚನೆ ಕೊಟ್ಟರು.

"ಯಾವುದೇ ಕಾರಣಕ್ಕೂ ಬೆಂಗಳೂರು ನಗರದ ಹಿಡಿತವನ್ನು ಕಾಂಗ್ರೆಸ್ ಕಳೆದುಕೊಳ್ಳಬಾರದು. ವಿಧಾನಸಭೆ ಚುನಾವಣೆಯಲ್ಲಿ ನಾವು ನಿರೀಕ್ಷಿಸಿದ ಮಟ್ಟದ ಸ್ಥಾನಗಳು ಬಂದಿಲ್ಲ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿ ಬಿಬಿಎಂಪಿ ಚುನಾವಣೆಯಲ್ಲಿ ಅತಿ ಹೆಚ್ಚು ವಾರ್ಡ್​ಗಳಲ್ಲಿ ಗೆದ್ದು ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕು. ಇದಕ್ಕೆ ನಮ್ಮ ಶಾಸಕರು ಇರುವ ಕ್ಷೇತ್ರ ವ್ಯಾಪ್ತಿಯಲ್ಲಿ ವಿಶೇಷ ಪ್ರಯತ್ನ ನಡೆಯಬೇಕಿದೆ. ಇದರ ಜೊತೆ ಜೊತೆಗೆ ನಮ್ಮ ಶಾಸಕರಿಲ್ಲದ ಕ್ಷೇತ್ರಗಳಿಗೂ ಅಕ್ಕ -ಪಕ್ಕದ ಕ್ಷೇತ್ರದ ಪ್ರಭಾವಿ ಶಾಸಕರು ಅಥವಾ ಸಚಿವರು ವಿಶೇಷ ಗಮನ ಕೊಡಬೇಕಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಉತ್ಸಾಹದಲ್ಲಿ ಬೆಂಗಳೂರು ನಗರದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಇದ್ದಾರೆ. ಇವರನ್ನು ಇನ್ನಷ್ಟು ಹುರಿದುಂಬಿಸಿ ಮುಂಬರುವ ಬಿಬಿಎಂಪಿ ಚುನಾವಣೆಗೆ ಅಣಿಗೊಳಿಸಿ" ಎಂದು ಸೂಚಿಸಿದರು.

ರಾಜ್ಯ ರಾಜಧಾನಿ ಕಾಂಗ್ರೆಸ್ ಹಿಡಿತದಲ್ಲಿದ್ದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಗರದ ಪ್ರಮುಖ ಮೂರು ಕ್ಷೇತ್ರಗಳನ್ನು ಗೆದ್ದುಕೊಳ್ಳಲು ಅನುಕೂಲ ಆಗಲಿದೆ. ಇದರ ಜತೆಗೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ನಡೆದರೂ ಅದಕ್ಕೂ ಸಹ ಎಲ್ಲರೂ ಸಿದ್ದರಿರಬೇಕು. ಬಿಬಿಎಂಪಿ ಚುನಾವಣೆ ಬಳಿಕ ಇದು ನಡೆಯುವ ಸಾಧ್ಯತೆ ಇದ್ದು, ನಮ್ಮ ಪಕ್ಷದ ಮುಖಂಡರು ಗೆಲುವಿಗಾಗಿ ಹೆಚ್ಚಿನ ಶ್ರಮ ತೊಡಗಿಸಬೇಕು. ಅತ್ಯಂತ ಪ್ರಮುಖವಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಕನಿಷ್ಠ 20 ಸ್ಥಾನವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಇದೆ ಎಂದರು.

2024ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬರುವ ಎಲ್ಲಾ ಅವಕಾಶಗಳು ಇದ್ದು ಕರ್ನಾಟಕದಿಂದಲೂ ಹೆಚ್ಚಿನ ಸಂಸದರನ್ನ ಕಳುಹಿಸಿಕೊಟ್ಟು ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಕೈ ಬಲಪಡಿಸಬೇಕಿದೆ. ಈ ಎಲ್ಲಕ್ಕೂ ಬೆಂಗಳೂರು ನಗರ ವ್ಯಾಪ್ತಿಯ ಶಾಸಕರು ಹಾಗೂ ಸಚಿವರು ಸಂಸದರು ಮತ್ತು ಇತರೆ ಜನಪ್ರತಿನಿಧಿಗಳು ಸರ್ವ ರೀತಿಯಲ್ಲಿ ಸಹಕರಿಸಬೇಕಿದೆ. ರಾಜ್ಯದಲ್ಲಿ ಬೆಂಗಳೂರು ನಗರದ ಸಚಿವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ವಿಶೇಷ ಕಾಳಜಿ ವಹಿಸಬೇಕಿದೆ. ಸ್ವತಃ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿರುವ ತಾವು ವಿಶೇಷ ಕಾಳಜಿ ವಹಿಸಿ ಬಿಬಿಎಂಪಿ ಚುನಾವಣೆ ಗೆಲುವಿಗೆ ಕಾರ್ಯತಂತ್ರ ರೂಪಿಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಬೈರೇಗೌಡ, ಸಂಸದರಾದ ಡಿ.ಕೆ ಸುರೇಶ್, ಜಿ.ಸಿ ಚಂದ್ರಶೇಖರ್, ಶಾಸಕ ಎನ್.ಎ ಹ್ಯಾರಿಸ್, ವಿಧಾನ ಪರಿಷತ್ ಸದಸ್ಯರಾದ ಸಲೀಮ್ ಅಹ್ಮದ್ ಹಾಗೂ ಪಿ.ಆರ್ ರಮೇಶ್ ಸೇರಿದಂತೆ ಮತ್ತಿತರರರು ಭಾಗವಹಿಸಿದ್ದರು.

Bengaluru
ವಾಣಿಜ್ಯ ತೆರಿಗೆ ಅಧಿಕಾರಿಗಳ ಸಂಘದ ಪದಾಧಿಕಾರಿಗಳಿಂದ ಸಿಎಂಗೆ ಅಭಿನಂದನೆ

ಸಿಎಂಗೆ ಅಭಿನಂದನೆ: ಕರ್ನಾಟಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದಿಸಿದರು.

ಇದನ್ನೂ ಓದಿ: ಪ್ರಕೃತಿ ಜತೆಗೆ ನಾವು ಬೆಳೆಯಬೇಕು, ಬಾಳಬೇಕು: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.